• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

UP ABP News-CVoter Exit Poll 2022: ಬಿಜೆಪಿಗೆ ಗೆಲುವಿನ ಬಲ

|
Google Oneindia Kannada News

ಲಕ್ನೋ, ಮಾರ್ಚ್ 07: ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಭಾರತೀಯ ಜನತಾ ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲಿದೆ ಎಂದು ಎಬಿಪಿ ನ್ಯೂಸ್- ಸಿವೋಟರ್ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ರಾಜ್ಯದಲ್ಲಿ ನಡೆದ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ ಬಹುಮತಕ್ಕೆ 202 ಸ್ಥಾನಗಳು ಬೇಕಾಗುತ್ತದೆ. ಆದರೆ ಬಿಜೆಪಿಯು 228ಕ್ಕೂ ಹೆಚ್ಚು ಸ್ಥಾನಗಳಲ್ಲಿ ದಿಗ್ವಿಜಯ ಸಾಧಿಸಲಿದೆ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ಸೋಮವಾರ ವಿಧಾನಸಭೆ ಚುನಾವಣೆಗೆ ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಅಂತಿಮ ಹಾಗೂ ಏಳನೇ ಹಂತದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.

Elections Exit Poll Results 2022 Live: ಐದು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆElections Exit Poll Results 2022 Live: ಐದು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ

ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 7ರ ಸಂಜೆ 6.30ರವರೆಗೂ ಯಾವುದೇ ರೀತಿ ಚುನಾವಣಾ ಸಮೀಕ್ಷೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಿತ್ತು. ಈ ಹಿನ್ನೆಲೆ ಆಯೋಗದ ಸೂಚನೆ ಮೇರೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಹಲವು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ಪ್ರಕಟಿಸಿವೆ. ಈ ಪೈಕಿ ಎಬಿಪಿ ನ್ಯೂಸ್- ಸಿವೋಟರ್ ನೀಡಿರುವ ಮತದಾನೋತ್ತರ ಸಮೀಕ್ಷೆಯ ಫಲಿತಾಂಶವನ್ನು ಮುಂದೆ ತಿಳಿಯಿರಿ.

ಎಬಿಪಿ ನ್ಯೂಸ್- ಸಿವೋಟರ್ ಸಮೀಕ್ಷೆ ಫಲಿತಾಂಶ:

ಬಿಜೆಪಿ ಮೈತ್ರಿಕೂಟ - 228 - 244

ಸಮಾಜವಾದಿ ಮೈತ್ರಿಕೂಟ - 132 - 148

ಬಿಎಸ್ಪಿ - 13 - 21

ಕಾಂಗ್ರೆಸ್ ಮೈತ್ರಿಕೂಟ - 4 - 8

ಯುಪಿಯಲ್ಲಿ ಏಳು ಹಂತಗಳ ಚುನಾವಣೆ:

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದಲ್ಲಿ ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಸ್ಥಾನಗಳಿಗೆ ಮತದಾನ ನಡೆಯಿತು. ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ರಾಜ್ಯದ 55 ಸ್ಥಾನಗಳಿಗೆ ಮತದಾನ ನಡೆಯಿತು. ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರಂದು ಮೂರನೇ ಹಂತದಲ್ಲಿ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಫೆಬ್ರವರಿ 23ರಂದು ನಾಲ್ಕನೇ ಹಂತದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ತದನಂತರ ಫೆಬ್ರವರಿ 27ರಂದು ಐದನೇ ಹಂತದಲ್ಲಿ 60 ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಾರ್ಚ್ 3ರಂದು ಆರನೇ ಹಂತದಲ್ಲಿ 57 ಸ್ಥಾನಗಳಿಗೆ ಮತ್ತು ಮಾರ್ಚ್ 7ರಂದು ಅಂತಿಮವಾಗಿ ಏಳನೇ ಹಂತದಲ್ಲಿ 54 ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು.

ಮಾ.10ರಂದು ಪಂಚರಾಜ್ಯಗಳ ಚುನಾವಣಾ ಭವಿಷ್ಯ:

ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಉತ್ತರ ಪ್ರದೇಶದ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದ್ದು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಹೊರಬೀಳಲಿದೆ.

ಕಳೆದ 2017ರಲ್ಲಿ ಯುಪಿ ಮತದಾರರ ತೀರ್ಪು?:

2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 202 ಆಗಿದೆ.

ಗ್ರೌಂಡ್ ಜೀರೋ ರಿಸರ್ಚ್‌ನ ಸಮೀಕ್ಷೆ ಹೇಳಿದ್ದೇನು?:

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಸಂಸ್ಥೆಗಳು ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ನಡೆಸಿದ್ದವು. ಅದೇ ರೀತಿ ಗ್ರೌಂಡ್ ಜೀರೋ ರಿಸರ್ಚ್‌ನ ಅಭಿಪ್ರಾಯ ಸಂಗ್ರಹದ ಪ್ರಕಾರ, ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ನುಡಿದಿತ್ತು. ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳ ಪೈಕಿ ಆಡಳಿತಾರೂಢ ಕೇಸರಿ ಪಕ್ಷವು 230 ರಿಂದ 235 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟ 160 ರಿಂದ 165 ಸ್ಥಾನಗಳನ್ನು ಗೆಲ್ಲುತ್ತದೆ. ಕಾಂಗ್ರೆಸ್ 3 ರಿಂದ 7 ಹಾಗೂ ಬಿಎಸ್ಪಿ 2 ರಿಂದ 5 ಸ್ಥಾನಗಳನ್ನು ಪಡೆಯುತ್ತವೆ ಎಂದು ಅಂಕಿ-ಅಂಶಗಳು ತಿಳಿಸಿದ್ದವು.

English summary
Uttar Pradesh Assembly Election ABP News-CVoter Exit Poll Results 2022 in Kannada: Who will win Uttar Pradesh Election 2022 - Check ABP News-CVoter exit poll results, predictions on Uttar Pradesh Assembly Election 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X