UP ETG Research Exit Poll 2022: ಬಿಜೆಪಿಗೆ ಮತದಾರರ ಮಣೆ

ಲಕ್ನೋ, ಮಾರ್ಚ್ 07: ಉತ್ತರ ಪ್ರದೇಶದಲ್ಲಿ ಕದನ ಕೌತುಕ ಕೆರಳಿಸಿರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತದಾರರು ಮಣೆ ಹಾಕಲಿದ್ದಾರೆ ಎಂದು ಇಟಿಜಿ ರಿಸರ್ಚ್ ಮತದಾನೋತ್ತರ ಸಮೀಕ್ಷೆ ಫಲಿತಾಂಶ ತಿಳಿಸಿದೆ.

ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 7ರ ಸಂಜೆ 6.30ರವರೆಗೂ ಯಾವುದೇ ರೀತಿ ಚುನಾವಣಾ ಸಮೀಕ್ಷೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಿತ್ತು. ಈ ಹಿನ್ನೆಲೆ ಆಯೋಗದ ಸೂಚನೆ ಮೇರೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಹಲವು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ಪ್ರಕಟಿಸಿವೆ.

ಈ ಪೈಕಿ ಇಟಿಜಿ ರಿಸರ್ಚ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಮತದಾರರು ಎರಡನೇ ಬಾರಿ ಅವಕಾಶ ನೀಡಲಿದ್ದಾರೆ. ಈ ಸಮೀಕ್ಷಾ ಫಲಿತಾಂಶದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಗಲಿವೆ ಎಂಬುದನ್ನು ಮುಂದೆ ಓದಿ.

Uttar Pradesh Election ETG Research Exit Poll Results 2022 in Kannada

ಇಟಿಜಿ ರಿಸರ್ಚ್ ಸಮೀಕ್ಷೆ ಫಲಿತಾಂಶ:

ಬಿಜೆಪಿ ಮೈತ್ರಿಕೂಟ - 230 - 245

ಸಮಾಜವಾದಿ ಮೈತ್ರಿಕೂಟ - 150 - 165

ಬಿಎಸ್ಪಿ - 2 - 6

ಕಾಂಗ್ರೆಸ್ ಮೈತ್ರಿಕೂಟ - 5 - 10

ಯುಪಿಯಲ್ಲಿ ಏಳು ಹಂತಗಳ ಚುನಾವಣೆ:

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದಲ್ಲಿ ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಸ್ಥಾನಗಳಿಗೆ ಮತದಾನ ನಡೆಯಿತು. ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ರಾಜ್ಯದ 55 ಸ್ಥಾನಗಳಿಗೆ ಮತದಾನ ನಡೆಯಿತು. ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರಂದು ಮೂರನೇ ಹಂತದಲ್ಲಿ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಫೆಬ್ರವರಿ 23ರಂದು ನಾಲ್ಕನೇ ಹಂತದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ತದನಂತರ ಫೆಬ್ರವರಿ 27ರಂದು ಐದನೇ ಹಂತದಲ್ಲಿ 60 ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಾರ್ಚ್ 3ರಂದು ಆರನೇ ಹಂತದಲ್ಲಿ 57 ಸ್ಥಾನಗಳಿಗೆ ಮತ್ತು ಮಾರ್ಚ್ 7ರಂದು ಅಂತಿಮವಾಗಿ ಏಳನೇ ಹಂತದಲ್ಲಿ 54 ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು.

ಮಾ.10ರಂದು ಪಂಚರಾಜ್ಯಗಳ ಚುನಾವಣಾ ಭವಿಷ್ಯ:

ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಉತ್ತರ ಪ್ರದೇಶದ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದ್ದು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಹೊರಬೀಳಲಿದೆ.

Uttar Pradesh Election ETG Research Exit Poll Results 2022 in Kannada

ಕಳೆದ 2017ರಲ್ಲಿ ಯುಪಿ ಮತದಾರರ ತೀರ್ಪು?:

2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 202 ಆಗಿದೆ.

ಗ್ರೌಂಡ್ ಜೀರೋ ರಿಸರ್ಚ್‌ನ ಸಮೀಕ್ಷೆ ಹೇಳಿದ್ದೇನು?:

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಸಂಸ್ಥೆಗಳು ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ನಡೆಸಿದ್ದವು. ಅದೇ ರೀತಿ ಗ್ರೌಂಡ್ ಜೀರೋ ರಿಸರ್ಚ್‌ನ ಅಭಿಪ್ರಾಯ ಸಂಗ್ರಹದ ಪ್ರಕಾರ, ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ನುಡಿದಿತ್ತು. ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳ ಪೈಕಿ ಆಡಳಿತಾರೂಢ ಕೇಸರಿ ಪಕ್ಷವು 230 ರಿಂದ 235 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟ 160 ರಿಂದ 165 ಸ್ಥಾನಗಳನ್ನು ಗೆಲ್ಲುತ್ತದೆ. ಕಾಂಗ್ರೆಸ್ 3 ರಿಂದ 7 ಹಾಗೂ ಬಿಎಸ್ಪಿ 2 ರಿಂದ 5 ಸ್ಥಾನಗಳನ್ನು ಪಡೆಯುತ್ತವೆ ಎಂದು ಅಂಕಿ-ಅಂಶಗಳು ತಿಳಿಸಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+