ಉತ್ತರ ಪ್ರದೇಶದಲ್ಲಿ 3 ದಿನದಲ್ಲೇ ಬಿಜೆಪಿಗೆ ಬಾಯ್ ಬಾಯ್ ಹೇಳಿದ 11 ಶಾಸಕರು!

ಲಕ್ನೋ, ಜನವರಿ 14: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ತಿಂಗಳು ಬಾಕಿ ಇರುವಂತೆ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಬಿಜೆಪಿಯಷ್ಟೇ ಅಲ್ಲದೇ ಬಿಜೆಪಿ ಮಿತ್ರಪಕ್ಷದಲ್ಲೂ ಶಾಸಕರ ರಾಜೀನಾಮೆ ಸರಣಿ ಮುಂದುವರಿದಿದೆ. 3 ದಿನದಲ್ಲಿ ಬಿಜೆಪಿ ಮೈತ್ರಿಕೂಟದ 11 ಶಾಸಕರು ಪಕ್ಷದಿಂದ ಹೊರ ನಡೆದಿದ್ದಾರೆ.

ಬಿಜೆಪಿ ಮೈತ್ರಿಕೂಟದಲ್ಲಿರುವ ಅಪ್ನಾ ದಳ ಪಕ್ಷದ ಶಾಸಕ ಚೌಧರಿ ಅಮರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಭಾಗವಾಗಿದ್ದ 11 ಮಂದಿ ಶಾಸಕರು ಸರ್ಕಾರದಿಂದ ದೂರ ಸರಿದಿದ್ದಾರೆ.

"ಇದೊಂದು ಸುಳ್ಳುಗಾರ ಸರ್ಕಾರವಾಗಿದೆ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ನಾನು ಇವತ್ತು ಅಖಿಲೇಶ್ ಯಾದವ್ ಅವರನ್ನು ಭೇಟಿ ಆಗಲಿದ್ದು, ಅವರೊಂದಿಗೆ ಕೈಜೋಡಿಸುತ್ತೇನೆ," ಎಂದು ಶಾಸಕ ಚೌಧರಿ ಅಮರ್ ಸಿಂಗ್ ಹೇಳಿದ್ದಾರೆ.

Uttar Pradesh Election: MLA Chaudhary Amar Singh Quits BJP-Alliance, 11th Resignation In 3 Days

ಮೂರು ದಿನಗಳಲ್ಲಿ 10 ಶಾಸಕರ ರಾಜೀನಾಮೆ:

ಉತ್ತರ ಪ್ರದೇಶದಲ್ಲಿ ಕಳೆದ ಮಂಗಳವಾರದಿಂದ ಮೂವರು ಸಚಿವರು ಸೇರಿದಂತೆ 10 ಮಂದಿ ಬಿಜೆಪಿ ಶಾಸಕರು ಪಕ್ಷದಿಂದ ಹೊರ ನಡೆದಿದ್ದಾರೆ. ಸರ್ಕಾರದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನಂತರದಲ್ಲಿ ಎಲ್ಲ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ.

- ಮಂಗಳವಾರ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಸಲ್ಲಿಸಿದ ದಿನವೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭಗವತಿ ಸಾಗರ್, ರೌಷನ್ ಲಾಲ್ ವರ್ಮಾ ಮತ್ತು ಬ್ರಿಜೇಶ್ ಪ್ರಜಾಪತಿ ಬಿಜೆಪಿಗೆ ಬಾಯ್ ಬಾಯ್ ಹೇಳಿದರು.

- ಬುಧವಾರ ಸರ್ಕಾರದ ಮತ್ತೊಬ್ಬ ಸಚಿವ ದಾರಾ ಸಿಂಗ್ ಚೌಹಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದೇ ದಿನ ಶಾಸಕ ಅವತಾರ್ ಸಿಂಗ್ ಬಂಧನ ಬಿಜೆಪಿಯಿಂದ ಹೊರ ಬಂದರು.

- ಗುರುವಾರವೂ ಶಾಸಕರ ರಾಜೀನಾಮೆ ಸರಣಿ ಮುಂದುವರಿಯಿತು. ಸಚಿವ ಧರಂ ಸಿಂಗ್ ಸೈನಿ ಹಾಗೂ ಇತರೆ ಮೂವರು ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿನಯ್ ಸಾಕ್ಯಾ, ಮುಕೇಶ್ ವರ್ಮಾ ಮತ್ತು ಬಾಲಾ ಅವಸ್ತಿ ಪಕ್ಷದಿಂದ ಹೊರ ನಡೆದರು. ಇದೇ ದಿನ ಬಿಜೆಪಿ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಅಪ್ನಾ ದಳ ಶಾಸಕ ಚೌಧರಿ ಅಮರ್ ಸಿಂಗ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ಬಿಟ್ಟವರೆಲ್ಲ ಹಿಂದುಳಿದ ವರ್ಗದ ನಾಯಕರು:

ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಅದರ ಮಿತ್ರಪಕ್ಷದಿಂದ ಹೊರ ನಡೆಯುತ್ತಿರುವ ಬಹುತೇಕ ಶಾಸಕರು ಹಿಂದುಳಿದ ವರ್ಗ ಮತ್ತು ಸಮುದಾಯಗಳಿಗೆ ಸೇರಿದವರೇ ಆಗಿದ್ದಾರೆ. ಕಳೆದ 5 ವರ್ಷಗಳ ಅವಧಿಯಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಮುಖಂಡರು ಮತ್ತು ಜನಪ್ರತಿನಿಧಿಗಳ ಬಗ್ಗೆ ಗಮನ ಹರಿಸಿಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ದಲಿತರು, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತ ಸಮುದಾಯ, ರೈತರು ಮತ್ತು ನಿರುದ್ಯೋಗಿಗಳನ್ನು ನಿರ್ಲಕ್ಷಿಸುತ್ತಿದೆ ಎಂಬುದು ಎಲ್ಲ ಬಂಡಾಯ ಶಾಸಕರ ಒಂದೇ ಪ್ರಮುಖ ಆರೋಪವಾಗಿದೆ. ಈ ಎಲ್ಲ ಶಾಸಕರು ಸಮಾಜವಾದಿ ಪಕ್ಷದ ಕಡೆಗೆ ಮುಖ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ಏಳು ಹಂತಗಳಲ್ಲಿ ನಡೆಯಲಿರುವ ಯುಪಿ ಚುನಾವಣೆ:

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ದಿನಾಂಕ ಪ್ರಕಟಿಸಿ ಆಗಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

2017ರ ಚುನಾವಣೆ ಫಲಿತಾಂಶ:

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+