ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿ ಚುನಾವಣಾ ಪ್ರಚಾರಕ್ಕೆ ಧುಮುಕಿದ ಪ್ರಧಾನಿ ಮೋದಿ; ಜ.31ಕ್ಕೆ ವರ್ಚುವಲ್ ಭಾಷಣ

|
Google Oneindia Kannada News

ಲಕ್ನೋ, ಜನವರಿ 29: ಕೊರೊನಾ ಮತ್ತು ಓಮೈಕ್ರಾನ್ ಹಿನ್ನೆಲೆಯಲ್ಲಿ ಐದು ರಾಜ್ಯಗಳ ಚುನಾವಣಾ ಪ್ರಚಾರಕ್ಕೆಂದು ಬೃಹತ್ ಸಭೆ, ಸಮಾರಂಭ, ಮೆರವಣಿಗೆ ಹಾಗೂ ರ್‍ಯಾಲಿಗಳನ್ನು ಮಾಡುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಹೀಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಈಗ ವರ್ಚುವಲ್ ರ್‍ಯಾಲಿ ಹಾಗೂ ಡಿಜಿಟಲ್ ಸಭೆಗಳ ಮೊರೆ ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಜನವರಿ 31ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಉತ್ತರಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈಗ ಪ್ರಧಾನಿ ಮೋದಿ‌ ಚುನಾವಣಾ ದಿನಾಂಕ ಘೋಷಣೆ ಆದ ಮೇಲೆ ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಮೊದಲ ಹಂತದ ಮತದಾನಕ್ಕೂ ಮುನ್ನ ಮತ್ತೊಂದು ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Uttar Pradesh Election: PM Narendra Modi To Speech in Virtual Rally on January 31st

ಮೂರು ರೈತ ವಿರೋಧಿ ಕಾನೂನುಗಳ ಬಗ್ಗೆ ನಡೆದ ರೈತ ಪ್ರತಿಭಟನೆಯ ಕಾರಣಕ್ಕೆ ಮೊದಲ ಹಾಗೂ ಎರಡನೇ ಹಂತದ ಮತದಾನ ನಡೆಯುವ ಪ್ರದೇಶಗಳಲ್ಲಿ ಬಿಜೆಪಿ ಪಕ್ಷಕ್ಕೆ ಭಾರಿ ಹಿನ್ನಡೆ ಆಗಬಹುದು.‌ ಅದೇ ಕಾರಣಕ್ಕೆ ನರೇಂದ್ರ ಮೋದಿ‌ ವರ್ಚುವಲ್ ರ್‍ಯಾಲಿ ಭಾಷಣದ ಮೂಲಕ ಡ್ಯಾಮೇಜ್ ಕಂಟ್ರೋಲ್ ಪ್ರಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಸಕ್ರಿಯ
ಬಿಜೆಪಿ ಪಕ್ಷ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಬಲವಾಗಿದೆ. ಹಲವು ಚುನಾವಣೆಗಳಲ್ಲಿ ಸಾಮಾಜಿಕ ತಾಣಗಳ ಬಳಕೆ ಮಾಡಿ ಯಶಸ್ವಿಯೂ ಆಗಿದೆ. ಹೀಗಾಗಿ ಬಿಜೆಪಿ ವರ್ಚ್ಯುಯಲ್ ರ್‍ಯಾಲಿಗಳನ್ನು ನಡೆಸಲು ತಂತ್ರಗಾರಿಕೆ ಆರಂಭಿಸಿದೆ. ಪ್ರಚಾರಕ್ಕೆ 3ಡಿ ಸ್ಟುಡಿಯೋ ಮಿಕ್ಸ್, ಜೂಮ್ ಮತ್ತು ವೆಬ್ ಎಕ್ಸ್ ಅನ್ನು ಬಳಕೆ ಮಾಡುವಂತೆ ಪಕ್ಷದ ಮಾಹಿತಿ ತಂತ್ರಜ್ಞಾನ ಸೆಲ್ ಗೆ ಸೂಚನೆ ನೀಡಿದೆ. 3 ಡಿ ಸ್ಟುಡಿಯೋ ಮಿಕ್ಸ್ ನಲ್ಲಿ ಎರಡು ಬೇರೆ ಬೇರೆ ಸ್ಥಳಗಳಲ್ಲಿ ಇರುವ ನಾಯಕರನ್ನು ಒಂದೇ ಸ್ಟೇಜ್ ನಲ್ಲಿರುವಂತೆ ಚಿತ್ರಿಸಲಾಗುತ್ತದೆ. ಜೊತೆಗೆ 1.8ಲಕ್ಷ ಪೋಲಿಂಗ್ ಬೂತ್ ವ್ಯಾಪ್ತಿಯಲ್ಲಿ 2 ವಾಟ್ಸಾಪ್ ಗ್ರೂಪ್ ರಚನೆಗ ಬಿಜೆಪಿ ಮುಂದಾಗಿದೆ.

Uttar Pradesh Election: PM Narendra Modi To Speech in Virtual Rally on January 31st

ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯದಲ್ಲಿ ಕಾಂಗ್ರೆಸ್ 30 ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಿಂದ ಹೊರಗುಳಿದಿದ್ದು, 2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. 403 ಸದಸ್ಯ ಬಲದ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 39.67ರಷ್ಟು ಮತಗಳನ್ನು ಗಳಿಸಿತ್ತು. ಸಮಾಜವಾದಿ ಪಕ್ಷ (ಎಸ್‌ಪಿ) 47 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಎಸ್‌ಪಿ 19 ಸ್ಥಾನಗಳನ್ನು ಗೆದ್ದಿತ್ತು ಮತ್ತು ಕಾಂಗ್ರೆಸ್ ಕೇವಲ 7 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು.

English summary
https://kannada.oneindia.com/news/india/assembly-electons-2022-congress-to-win-in-goa-uttarakhand-and-punjab-sachin-pilot-246367.html
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X