ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನ್ ಜಿಂದಾಬಾದ್: ಆರ್‌ಎಲ್‌ಡಿ ಅಭ್ಯರ್ಥಿ ನೀರಜ್ ಚೌಧರಿ ವಿರುದ್ಧ ದೇಶದ್ರೋಹ ಪ್ರಕರಣ

|
Google Oneindia Kannada News

ಲಕ್ನೋ, ಫೆಬ್ರವರಿ 5: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಿಜ್ನೋರ್‌ನ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಅಭ್ಯರ್ಥಿ ನೀರಜ್ ಚೌಧರಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ, ಬಿಜ್ನೋರ್‌ನ ಆರ್‌ಎಲ್‌ಡಿ ಅಭ್ಯರ್ಥಿ ನೀರಜ್ ಚೌಧರಿ ಅವರು ಮನೆ-ಮನೆ ಪ್ರಚಾರದ ವೀಡಿಯೊ ವೈರಲ್ ಆಗಿದ್ದು, ಇದರಲ್ಲಿ ಕೆಲವರು "ಪಾಕಿಸ್ತಾನ್ ಜಿಂದಾಬಾದ್" ಎಂಬ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.

30 ವರ್ಷದಲ್ಲೇ ಮೊದಲ ಬಾರಿ ಉತ್ತರ ಪ್ರದೇಶದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧೆ30 ವರ್ಷದಲ್ಲೇ ಮೊದಲ ಬಾರಿ ಉತ್ತರ ಪ್ರದೇಶದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧೆ

"ಬಿಜ್ನೋರ್ ವಿಧಾನಸಭಾ ಕ್ಷೇತ್ರದ ಆರ್‌ಎಲ್‌ಡಿ ಅಭ್ಯರ್ಥಿ ನೀರಜ್ ಚೌಧರಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾಗ ಜೊತೆಗಿದ್ದ ಕೆಲವರು 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದ್ದಾರೆ," ಎಂದು ಕೊತ್ವಾಲಿ ಬಿಜ್ನೋರ್‌ನ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಧಾಯ್ ಶ್ಯಾಮ್ ತಿಳಿಸಿದ್ದಾರೆ.

25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಖಾಕಿ

25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಖಾಕಿ

ಉತ್ತರ ಪ್ರದೇಶದ ಲಬಿಜ್ನೋರ್ ವಿಧಾನಸಭೆ ಕ್ಷೇತ್ರದ ರಾಷ್ಟ್ರೀಯ ಲೋಕದಳ ಅಭ್ಯರ್ಥಿ ನೀರಜ್ ಚೌಧರಿ ಮತ್ತು ಇತರೆ 20 ರಿಂದ 25 ಜನರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜೊತೆಗೆ ರಾಷ್ಟ್ರೀಯ ಲೋಕ ದಳ ಪಾರ್ಟಿಯು ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿದಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ

ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ

124-ಎ (ದೇಶದ್ರೋಹ) ಮತ್ತು 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಮತ್ತು ಸಾಂಕ್ರಾಮಿಕ ರೋಗಗಳ ಕಾಯಿದೆ," ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಈವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ರಾಧಾನ್ ಶ್ಯಾಮ್ ಹೇಳಿದ್ದಾರೆ.

ವಿಡಿಯೋ ಮತ್ತು ಆಡಿಯೋ ಮರುಪರಿಶೀಲನೆ

ವಿಡಿಯೋ ಮತ್ತು ಆಡಿಯೋ ಮರುಪರಿಶೀಲನೆ

ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಮತ್ತು ಅದರಲ್ಲಿನ ಆಡಿಯೋವನ್ನು ಮತ್ತೊಮ್ಮೆ ಮರುಪರಿಶೀಲನೆಗೆ ಒಳಪಡಿಸಲಾಗುವುದು. ಈ ಹಂತದಲ್ಲಿ ಘೋಷಣೆ ಕೂಗುತ್ತಿರುವುದು ನೀರಜ್ ಚೌಧರಿ ಅಥವಾ ಅವರ ಹಿಂಬಾಲಕೇ ಎಂಬುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜ್ನೋರ್ ಅಭ್ಯರ್ಥಿ ಬಗ್ಗೆ ಜಯಂತ್ ಚೌಧರಿ ಪ್ರತಿಕ್ರಿಯೆ

ಬಿಜ್ನೋರ್ ಅಭ್ಯರ್ಥಿ ಬಗ್ಗೆ ಜಯಂತ್ ಚೌಧರಿ ಪ್ರತಿಕ್ರಿಯೆ

ಇನ್ನು ತಮ್ಮ ಪಕ್ಷದ ಅಭ್ಯರ್ಥಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಲೋಕ ದಳ ಮುಖ್ಯಸ್ಥ ಜಯಂತ್ ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ. "ಮತದಾರರೇ ಜಾಗರೂಕತೆಯನ್ನು ವಹಿಸಿ. ಈ ಚುನಾವಣೆಯು ಸೋದರತ್ವ ವರ್ಸಸ್ ಬಿಜೆಪಿ ನಡುವೆ ನಡೆಯುತ್ತಿದೆ. ನವಭಾರತದಲ್ಲಿ ಅಕಿಫ್ ಭಾಯಿ ಜಿಂದಾಬಾದ್ ಎಂದು ಕೂಗಿದರೆ ಅದು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಕರೆಯುತ್ತಾರೆ," ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

"ನಮ್ಮ ಬಿಜ್ನೋರ್ ಅಭ್ಯರ್ಥಿ ಚೌಧರಿ ನೀರಜ್ ಒಬ್ಬ ವೈದ್ಯ. ಅವನು ಒಬ್ಬ ಉದಾತ್ತ ವ್ಯಕ್ತಿ. ಈ ಮೂರ್ಖರು ('ಮೂರ್ಖ್') ವೀಡಿಯೊವನ್ನು ಮಾಡುವ ಮೂಲಕ ಅವರನ್ನು ದೇಶದ್ರೋಹಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ," ಎಂದು ಮತ್ತೊಂದು ಟ್ವೀಟ್‌ನಲ್ಲಿ ದೂಷಿಸಿದ್ದಾರೆ.

English summary
Uttar Pradesh Assembly Election: Sedition case against RLD candidate from Bijnor over pro-Pakistan slogan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X