ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Uttar Pradesh Times Now-VETO Exit Poll 2022: ಬಿಜೆಪಿ ಮತ್ತೆ ಜಯ

|
Google Oneindia Kannada News

ಉತ್ತರ ಪ್ರದೇಶದಲ್ಲಿ 2022ರ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಟೈಮ್ಸ್ ನೌ-ವಿಟೋ ವರದಿಯ ಪ್ರಕಾರ ಈ ಬಾರಿ ಎಸ್‌ಪಿ ಬಿಜೆಪಿಯೊಂದಿಗೆ ಅಧಿಕ ಸ್ಥಾನಗಳ ಅಂತರದಲ್ಲಿ ಸೋಲಲಿದೆ.

ಮಾರ್ಚ್ 10ಕ್ಕೆ ಫಲಿತಾಂಶ ಹೊರಬೀಳಲಿದ್ದು ಸೋಮವಾರ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಟೈಮ್ಸ್ ನೌ-ವಿಟೋ ವರದಿ ಫಲಿತಾಂಶ ಬಿಡುಗಡೆಯಾಗಿದೆ. ಈ ವರದಿ ಪ್ರಕಾರ ಭಾರತದ ಅತಿದೊಡ್ಡ ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡಿದೆ. ಈ ಬಾರಿಯೋ ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ವರದಿ ಹೇಳುತ್ತದೆ. ಇದರ ಪ್ರಕಾರ ಬಿಜೆಪಿ ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ 225 ಸ್ಥಾನಗಳನ್ನು ಗೆಲ್ಲಲಿದೆ. ಸಮಾಜವಾದಿ ಪಕ್ಷ 151 ಗೆಲ್ಲುತ್ತದೆ ಎಂದು ವರದಿ ಹೇಳಿದೆ. ಜೊತೆಗೆ ಬಿಎಸ್ಪಿ 14 ಸ್ಥಾನಗಳನ್ನು ಪಡೆಯಲಿದ್ದು ಕಾಂಗ್ರೆಸ್ 9 ಸ್ಥಾನಗಳನ್ನು ಪಡೆಯಲಿದೆ.

Elections Exit Poll Results 2022 Live: ಐದು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆElections Exit Poll Results 2022 Live: ಐದು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ

ಟೈಮ್ಸ್ ನೌ-ವಿಟೋ ವರದಿ

ಬಿಜೆಪಿ 225

ಕಾಂಗ್ರೆಸ್ 9

ಎಸ್‌ಪಿ 151

ಬಿಎಸ್‌ಪಿ 14

Uttar Pradesh Election Times Now-VETO Exit Poll Results 2022 in Kannada

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ-2022 ರ ಕೊನೆಯ ಹಂತವು ಶಾಂತಿಯುತವಾಗಿ ಪೂರ್ಣಗೊಂಡಿದೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತದಾನದ ಕರ್ತವ್ಯವನ್ನು ನಿರ್ವಹಿಸಿದ ಪ್ರತಿಯೊಬ್ಬ ಗೌರವಾನ್ವಿತ ಮತದಾರರಿಗೆ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ಒಂದು ಮತವು ರಾಜ್ಯದಲ್ಲಿ ಪ್ರಜಾಪ್ರಭುತ್ವ ಮತ್ತು ಉತ್ತಮ ಆಡಳಿತವನ್ನು ಬಲಪಡಿಸುತ್ತದೆ. ಭಾರತಮಾತೆ ಚಿರಾಯುವಾಗಲಿ! ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಯುಪಿಯಲ್ಲಿ ಏಳು ಹಂತಗಳ ಚುನಾವಣೆ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದಲ್ಲಿ ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಸ್ಥಾನಗಳಿಗೆ ಮತದಾನ ನಡೆಯಿತು. ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ರಾಜ್ಯದ 55 ಸ್ಥಾನಗಳಿಗೆ ಮತದಾನ ನಡೆಯಿತು. ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರಂದು ಮೂರನೇ ಹಂತದಲ್ಲಿ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಫೆಬ್ರವರಿ 23ರಂದು ನಾಲ್ಕನೇ ಹಂತದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ತದನಂತರ ಫೆಬ್ರವರಿ 27ರಂದು ಐದನೇ ಹಂತದಲ್ಲಿ 60 ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಾರ್ಚ್ 3ರಂದು ಆರನೇ ಹಂತದಲ್ಲಿ 57 ಸ್ಥಾನಗಳಿಗೆ ಮತ್ತು ಮಾರ್ಚ್ 7ರಂದು ಅಂತಿಮವಾಗಿ ಏಳನೇ ಹಂತದಲ್ಲಿ 54 ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು.

ಮಾ.10ರಂದು ಪಂಚರಾಜ್ಯಗಳ ಚುನಾವಣಾ ಭವಿಷ್ಯ:
ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಉತ್ತರ ಪ್ರದೇಶದ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದ್ದು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಹೊರಬೀಳಲಿದೆ.

ಕಳೆದ 2017ರಲ್ಲಿ ಯುಪಿ ಮತದಾರರ ತೀರ್ಪು?:
2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 202.

ಚುನಾವಣಾಪೂರ್ವ ಸಮೀಕ್ಷೆ ಹೇಳಿದ್ದೇನು?:
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಸಂಸ್ಥೆಗಳು ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ನಡೆಸಿದ್ದವು. ಅದೇ ರೀತಿ ಗ್ರೌಂಡ್ ಜೀರೋ ರಿಸರ್ಚ್‌ನ ಅಭಿಪ್ರಾಯ ಸಂಗ್ರಹದ ಪ್ರಕಾರ, ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ನುಡಿದಿತ್ತು. ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳ ಪೈಕಿ ಆಡಳಿತಾರೂಢ ಕೇಸರಿ ಪಕ್ಷವು 230 ರಿಂದ 235 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟ 160 ರಿಂದ 165 ಸ್ಥಾನಗಳನ್ನು ಗೆಲ್ಲುತ್ತದೆ. ಕಾಂಗ್ರೆಸ್ 3 ರಿಂದ 7 ಹಾಗೂ ಬಿಎಸ್ಪಿ 2 ರಿಂದ 5 ಸ್ಥಾನಗಳನ್ನು ಪಡೆಯುತ್ತವೆ ಎಂದು ಅಂಕಿ-ಅಂಶಗಳು ತಿಳಿಸಿದ್ದವು.

English summary
Uttar Pradesh Assembly Election Times Now-VETO Exit Poll Results 2022 in Kannada: Who will win Uttar Pradesh Election 2022 - Check Times Now-VETO exit poll results, predictions on Uttar Pradesh Assembly Election 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X