ಉತ್ತರ ಪ್ರದೇಶದ 40 ಸಂಸದರ ಜೊತೆ ಪ್ರಧಾನಿ ಉಪಹಾರ ಸಭೆ

ಲಕ್ನೋ, ಡಿಸೆಂಬರ್ 17: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ದಿನ ಸನ್ನಿಹಿತವಾಗಿದೆ. ಇದರ ಮಧ್ಯೆ ಶುಕ್ರವಾರ ಆಯೋಜಿಸಿರುವ ಉಪಹಾರ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದ 40 ಸಂಸದರನ್ನು ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸಂಸತ್ ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಪ್ರಧಾನಿ ಮೋದಿ, ಎಲ್ಲ ರಾಜ್ಯಗಳ ಸಂಸದರ ಜೊತೆಗೆ ಉಪಹಾರ ಸಭೆಗಳನ್ನು ನಡೆಸುತ್ತಿದ್ದಾರೆ. ಇದೇ ವಾರದ ಆರಂಭದಲ್ಲಿ ಮಧ್ಯಪ್ರದೇಶ ಬಿಜೆಪಿ ಸಂಸದರ ಜೊತೆಗೆ ಮೋದಿ ಸಭೆ ನಡೆಸಿದ್ದರು.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇತ್ತೀಚೆಗೆ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಅದರ ಮರುದಿನವೇ ಬಿಜೆಪಿ ಆಡಳಿತವಿರುವ 12 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮೋದಿ ಸಭೆ ನಡೆಸಿದ್ದರು.

Uttar Pradesh Elections 2022: PM Modi To Meet 40 MPs From UP Over Breakfast

ಉತ್ತರ ಪ್ರದೇಶದಲ್ಲಿ ಬಿಜೆಪಿಯ ಆರು ಯಾತ್ರೆ:

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಆಡಳಿತ ಪಕ್ಷ ಬಿಜೆಪಿಯು ಯಾತ್ರೆಗಳನ್ನು ನಡೆಸಲು ಮುಂದಾಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟು ಆರು ಯಾತ್ರೆಗಳನ್ನು ನಡೆಸಲು ಮುಂದಾಗಿದ್ದು, ಈ ಯಾತ್ರೆಗಳು ರಾಜ್ಯದ 403 ವಿಧಾನಸಭೆ ಕ್ಷೇತ್ರಗಳಿಗೂ ತಲುಪಲಿವೆ. ಈ ಯಾತ್ರೆಗಳು ಬಿಜೆಪಿ ಪರ ಪ್ರಚಾರದ ಭಾಗವಾಗಲಿವೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಭಾರತೀಯ ಜನತಾ ಪಕ್ಷವು ನಿಶಾದ್ ಪಾರ್ಟಿ ಮತ್ತು ಅಪ್ನಾ ದಳದ ಜೊತೆ ಮೈತ್ರಿ ಮಾಡಿಕೊಂಡಿದೆ.

ಶುಕ್ರವಾರ ಲಕ್ನೋದಲ್ಲಿ ಬಿಜೆಪಿ ಬೃಹತ್ ಮೆರವಣಿಗೆ ಆಯೋಜಿಸಿದ್ದು, ನಿಶಾದ್ ಪಾರ್ಟಿ ಕೂಡಾ ಇದರ ಭಾಗವಾಗಲಿದೆ. ಇಂದು ನಡೆಯುವ ಮೆರವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.

2022ರಲ್ಲಿ ಪಂಚರಾಜ್ಯ ಚುನಾವಣೆ:

ಮುಂದಿನ ವರ್ಷದ ದೇಶದ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಚುನಾವಣೆ ನಡೆಯಲಿದೆ. 2022ರ ನಂತರದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತಿನಲ್ಲಿ ಚುನಾವಣೆಗಳು ನಡೆಯಲಿವೆ.

2017ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಅಧಿಕಾರ:

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+