ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ನಂತರ ಯುಪಿ ಮೇಲೆ ಅಸಾಸುದ್ದೀನ್ ಒವೈಸಿ ಕಣ್ಣು

|
Google Oneindia Kannada News

ಲಕ್ನೋ, ಜೂನ್ 28: ''ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳ ಚುನಾವಣೆಗಾಗಿ ಒವೈಸಿ ಅವರ ಎಐಎಂಐಎಂ ಜೊತೆ ಬಿಎಸ್‌ಪಿ ಮೈತ್ರಿ ಸಾಧಿಸುತ್ತಿಲ್ಲ,'' ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಘೋಷಿಸಿದ ಬೆನ್ನಲ್ಲೇ ಒವೈಸಿ ತಮ್ಮ ಚುನಾವಣಾ ಸಿದ್ಧತೆ ಬಗ್ಗೆ ಪ್ರಕಟಿಸಿದ್ದಾರೆ.

''2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 100 ಕ್ಷೇತ್ರಗಳಲ್ಲಿ ಆಲ್ ಇಂಡಿಯಾ ಮಜಿಲ್ಸ್ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸ್ಪರ್ಧಿಸಲಿದೆ,'' ಎಂದು ಪಕ್ಷದ ಅಧ್ಯಕ್ಷ ಅಸಾಸುದ್ದೀನ್ ಒವೈಸಿ ಘೋಷಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶದಲ್ಲಿ ಪ್ರಕಾಶ್ ರಾಜ್ ಭರ್ ನೇತೃತ್ವದ ಸುಹೆಲ್ ದೇವ್ ಭಾರತೀಯ ಸಮಾಜ ಪಕ್ಷ ( ಎಸ್ ಬಿಎಸ್ ಪಿ) ಜೊತೆ ಮೈತ್ರಿ ಸಾಧಿಸಿದ್ದು, ಒಟ್ಟಿಗೆ ಚುನಾವಣೆ ಎದುರಿಸುತ್ತಿರುವುದಾಗಿ ಹೇಳಿದರು.

ಒವೈಸಿಗೆ ನಿರಾಶೆ, ಮೈತ್ರಿಗೆ 'ನೋ' ಎಂದ ಮಾಯಾವತಿಒವೈಸಿಗೆ ನಿರಾಶೆ, ಮೈತ್ರಿಗೆ 'ನೋ' ಎಂದ ಮಾಯಾವತಿ

ಉತ್ತರ ಪ್ರದೇಶ ಚುನಾವಣೆಗಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದರು.

Uttar Pradesh Elections: AIMIM to contest 100 seats

ಬಿಹಾರದಲ್ಲಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 5 ಸ್ಥಾನ ಗೆದ್ದಿರುವ ಒವೈಸಿ ಸದ್ಯ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರಗಳ ಮೇಲೆ ಕಣ್ಣಿರಿಸಿದ್ದಾರೆ.

2022ರಲ್ಲಿ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದೆ.

ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪುದುಚೇರಿ ಅಲ್ಲದೆ ದೇಶದ ವಿವಿಧೆಡೆ ಉಪ ಚುನಾವಣೆಗಳನ್ನು ಕೋವಿಡ್ 19 ಸಾಂಕ್ರಾಮಿಕದ ನಡುವೆ ಆಯೋಜಿಸಲಾಗಿತ್ತು. ಹೆಚ್ಚಿನ ಹಾನಿಯಾಗದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿತ್ತು. ಇದಕ್ಕೆ ಸಾರ್ವಜನಿಕರು ಸಹಕರಿಸಿದ್ದರು.

English summary
The AIMIM party on Sunday announced that it would contest 100 seats in the Uttar Pradesh Assembly polls in 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X