ಟ್ಯೂಷನ್ನಿಂದ ಬರುತ್ತಿದ್ದಾಗ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಬಾಲಕಿ ಆತ್ಮಹತ್ಯೆ
ಮೀರತ್, ಏಪ್ರಿಲ್ 3: ಟ್ಯೂಷನ್ ತರಗತಿಯಿಂದ ಮರಳಿ ಬರುತ್ತಿದ್ದಾಗ ಅಪಹರಣಗೊಂಡು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 10ನೇಎ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಬಾಲಕಿಯ ಅಪಹರಣ ಮತ್ತು ಅತ್ಯಾಚಾರದಲ್ಲಿ ನಾಲ್ವರು ಯುವಕರು ಭಾಗಿಯಾಗಿದ್ದರು. ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್ ನೋಟ್ ಬರೆದಿಟ್ಟಿದ್ದು, ಅದರ ಆಧಾರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನು ಉಳಿದ ಇಬ್ಬರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಕೇಶವ್ ಕುಮಾರ್ ತಿಳಿಸಿದ್ದಾರೆ.
ಆತ್ಮಹತ್ಯೆ ಚೀಟಿಯಲ್ಲಿ ಬಾಲಕಿಯು ಪಕ್ಕದ ಗ್ರಾಮದ ಲಖನ್ ಮತ್ತು ವಿಕಾಸ್ ಸೇರಿದಂತೆ ನಾಲ್ವರ ಹೆಸರನ್ನು ಬರೆದಿದ್ದಾಳೆ. ಲಖನ್ ಮತ್ತು ವಿಕಾಸ್ ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಅವರು ಹೇಳಿದ್ದಾರೆ.

ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿದ್ದರು. ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮನೆಗೆ ವಾಪಸಾದ ಬಳಿಕ ಬಾಲಕಿಯು ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಆಕೆಯನ್ನು ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications