• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟ್ಯೂಷನ್‌ನಿಂದ ಬರುತ್ತಿದ್ದಾಗ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಬಾಲಕಿ ಆತ್ಮಹತ್ಯೆ

|

ಮೀರತ್, ಏಪ್ರಿಲ್ 3: ಟ್ಯೂಷನ್ ತರಗತಿಯಿಂದ ಮರಳಿ ಬರುತ್ತಿದ್ದಾಗ ಅಪಹರಣಗೊಂಡು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 10ನೇಎ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

ಬಾಲಕಿಯ ಅಪಹರಣ ಮತ್ತು ಅತ್ಯಾಚಾರದಲ್ಲಿ ನಾಲ್ವರು ಯುವಕರು ಭಾಗಿಯಾಗಿದ್ದರು. ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್ ನೋಟ್ ಬರೆದಿಟ್ಟಿದ್ದು, ಅದರ ಆಧಾರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನು ಉಳಿದ ಇಬ್ಬರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಕೇಶವ್ ಕುಮಾರ್ ತಿಳಿಸಿದ್ದಾರೆ.

ತಂದೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಮಗಳ ಮೇಲೆ ಅತ್ಯಾಚಾರತಂದೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಮಗಳ ಮೇಲೆ ಅತ್ಯಾಚಾರ

ಆತ್ಮಹತ್ಯೆ ಚೀಟಿಯಲ್ಲಿ ಬಾಲಕಿಯು ಪಕ್ಕದ ಗ್ರಾಮದ ಲಖನ್ ಮತ್ತು ವಿಕಾಸ್ ಸೇರಿದಂತೆ ನಾಲ್ವರ ಹೆಸರನ್ನು ಬರೆದಿದ್ದಾಳೆ. ಲಖನ್ ಮತ್ತು ವಿಕಾಸ್ ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಅವರು ಹೇಳಿದ್ದಾರೆ.

ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿದ್ದರು. ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮನೆಗೆ ವಾಪಸಾದ ಬಳಿಕ ಬಾಲಕಿಯು ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಆಕೆಯನ್ನು ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ.

English summary
Uttar Pradesh girl died by suicide after allegedly abducted and gang-raped while returning from tution class.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X