ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲ ಜಿಲ್ಲೆಗಳಲ್ಲಿ ಕಠಿಣ ರೂಲ್ಸ್; ಮಾಸ್ಕ್ ಧರಿಸದಿದ್ದರೆ 10 ಸಾವಿರ ರೂ. ದಂಡ

|
Google Oneindia Kannada News

ಲಕ್ನೋ, ಏಪ್ರಿಲ್ 16: ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ಸಂಡೇ ಲಾಕ್ಡೌನ್ ಘೋಷಣೆ ಮಾಡಿದೆ.

ಭಾನುವಾರ ಇಡೀ ದಿನ ಉತ್ತರಪ್ರದೇಶ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತಿದ್ದು, ಈ ವೇಳೆಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಶನಿವಾರ ರಾತ್ರಿ 8ರಿಂದಲೇ ಉತ್ತರಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 7ಕ್ಕೆ ಮುಕ್ತಾಯವಾಗಲಿದೆ.

ಕುಂಭಮೇಳದಲ್ಲಿ ಭಾಗವಹಿಸಿದ್ದ 30 ಸಾಧುಗಳಿಗೆ ಕೊರೊನಾ ಸೋಂಕುಕುಂಭಮೇಳದಲ್ಲಿ ಭಾಗವಹಿಸಿದ್ದ 30 ಸಾಧುಗಳಿಗೆ ಕೊರೊನಾ ಸೋಂಕು

ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು ಹಾಗೂ ಎಲ್ಲಾ ಜಿಲ್ಲೆಗಳಲ್ಲೂ ಸ್ಯಾನಿಟೈಸೇಷನ್ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಸರ್ಕಾರ ಸೂಚಿಸಿದೆ.

> Uttar Pradesh Govt Announces Sunday Lockdown In All Districts Amid Surge in Covid-19 Cases

ಕೊರೊನಾ ನಿಯಂತ್ರಣದ ದೃಷ್ಟಿಯಿಂದ ಕಟ್ಟು ನಿಟ್ಟಿನ ಕ್ರಮಕೈಗೊಂಡಿದ್ದು, ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಬಂದರೆ 1000 ರೂ. ದಂಡ ವಿಧಿಸಲಾಗುತ್ತದೆ. ಒಂದಕ್ಕಿಂತ ಹೆಚ್ಚು ಭಾರಿ ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಉತ್ತರಪ್ರದೇಶದಲ್ಲಿ ಗುರುವಾರ ಮೊದಲ ಬಾರಿಗೆ ಅತೀ ಹೆಚ್ಚು ಕೊರೊನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಈ ಹಿನ್ನಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ವಾರಾಂತ್ಯದ ಲಾಕ್ಡೌನ್ ಸೇರಿದಂತೆ ಕಠಿಣ ನಿಯಮಗಳನ್ನು ಘೋಷಿಸಲಾಗಿದೆ.

ರಾಜ್ಯದಲ್ಲಿ ಮೇ 15ರವರೆಗೆ ಶಾಲೆಗಳು ಬಂದ್ ಇರಲಿವೆ ಎಂದು ಸರ್ಕಾರ ಘೋಷಣೆ ಮಾಡಿದ್ದು, ಇದೇ ವೇಳೆ ಸ್ಟೇಟ್ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಉತ್ತರಪ್ರದೇಶದಲ್ಲಿ ಗುರುವಾರ ಒಂದೇ ದಿನ 22,439 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 104ಸೋಂಕಿತರು ಸಾವನ್ನಪ್ಪಿದ್ದರು.

English summary
Uttar Pradesh government led by CM Yogi Adityanath has announced the Sunday Lockdown to curb the rising number of coronavirus cases in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X