ಲಾಕ್ ಡೌನ್; ವಿದ್ಯಾರ್ಥಿಗಳಿಗಾಗಿ ಸರ್ಕಾರಿಂದ 300 ಬಸ್ ಸೌಲಭ್ಯ

ಲಕ್ನೋ, ಏಪ್ರಿಲ್ 17 : ಲಾಕ್ ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ರಾಜಸ್ಥಾನದಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಬಸ್‌ಗಳನ್ನು ಕಳಿಸುತ್ತಿದೆ.

ರಾಜಸ್ಥಾನದ ಕೋಟಾದಲ್ಲಿ ಸ್ಮರ್ಧಾತ್ಮಕ ಪರೀಕ್ಷೆ ತಯಾರಿಗಾಗಿ ಹೋಗಿರುವ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಸುಮಾರು 30 ಲಕ್ಷ ವಿದ್ಯಾರ್ಥಿಗಳು ಇಲ್ಲಿದ್ದು, ಲಾಕ್ ಡೌನ್ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಆಗ್ರಾದಿಂದ 200 ಮತ್ತು ಝಾನ್ಸಿಯಿಂದ 100 ಬಸ್‌ಗಳನ್ನು ಕಳಿಸಲಿದೆ. ಬಸ್‌ಗಳಲ್ಲಿ ಆಹಾರ, ನೀರು, ಮಾಸ್ಕ್, ಸ್ಯಾನಿಟೈಸರ್ ಕಳಿಸಲಾಗುತ್ತಿದೆ. ಒಂದು ಬಸ್‌ನಲ್ಲಿ 25 ವಿದ್ಯಾರ್ಥಿಗಳನ್ನು ಕರೆತರಲಾಗುತ್ತದೆ.

Uttar Pradesh Govt Sending Bus To Bring Back Students

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕೆಲವು ರಾಜ್ಯಗಳು ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಳ್ಳಲು ವ್ಯವಸ್ಥೆ ಮಾಡಿವೆ. ಉಳಿದ ರಾಜ್ಯಗಳು ಹೀಗೆ ಮಾಡಬಹುದು ಎಂದು ಹೇಳಿದ್ದಾರೆ.

ಆದರೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿದ್ಯಾರ್ಥಿಗಳನ್ನು ಕರೆತರಲು ಬಸ್ ಕಳಿಸುವುದು ಲಾಕ್‌ ಡೌನ್ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ರಾಜಸ್ಥಾನದಲ್ಲಿ ಇದುವರೆಗೂ 1193 ಕೊರೊನಾ ಸೋಂಕು ಪತ್ತೆಯಾಗಿದೆ. ಕೋಟಾದಲ್ಲಿ 92 ಸೋಂಕಿತರು ಇದ್ದಾರೆ.

ರಾಜಸ್ಥಾನದ ಕೋಟಾ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ನೀಡುವ ಹಬ್ ಆಗಿದೆ. ಪರೀಕ್ಷೆ ತಯಾರಿ, ಇಂಜಿನಿಯರರಿಂಗ್ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ತಯಾರಿ ನೀಡುವ ಹಲವು ಸಂಸ್ಥೆಗಳು ಇಲ್ಲಿವೆ. ಇಲ್ಲಿ ಸುಮಾರು 30 ಲಕ್ಷ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+