ಉತ್ತರ ಪ್ರದೇಶದಲ್ಲಿ ವಾರಾಂತ್ಯದ ಲಾಕ್ ಡೌನ್ ಘೋಷಣೆ

ಲಕ್ನೋ, ಜುಲೈ 12 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ವಾರಂತ್ಯದ ಲಾಕ್ ಡೌನ್ ಜಾರಿಗೆ ತರಲಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 35,092.

ಭಾನುವಾರ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಾರಂತ್ಯದಲ್ಲಿಯೇ ಪ್ರಾಯೋಗಿಕವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ತನಕ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಪೊಲೀಸರು ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಲವು ಕ್ರಮ ಕೈಗೊಂಡಿದ್ದಾರೆ.

Uttar Pradesh Govt To Impose Lock Down In Weekends

ಮುಂದಿನ ವಾರದಿಂದ ಪ್ರತಿ ಶನಿವಾರ ಮತ್ತು ಭಾನುವಾರ ಉತ್ತರ ಪ್ರದೇಶದಲ್ಲಿ ಲಾಕ್ ಡೌನ್ ಮುಂದುವರೆಯಲಿದೆ. ಮುಖ್ಯ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಲಿದ್ದು, ವಾಹನಗಳ ಸಂಚಾರ ನಡೆಸದಂತೆ ಕ್ರಮ ಕೈಗೊಳ್ಳಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಇದುವರೆಗೂ ದಾಖಲಾಗಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 35,092. ರಾಜ್ಯದಲ್ಲಿ 913 ಜನರು ಸಾವನ್ನಪ್ಪಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಿದ್ದಾರೆ. ಆಂಟಿಜೆನ್ ಪರೀಕ್ಷೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಕೊರೊನಾ ವೈರಸ್ ಸೋಂಕು ಇರುವ ಬಗ್ಗೆ ಮಾಹಿತಿ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+