ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದಲ್ಲಿ ವಾರಾಂತ್ಯದ ಲಾಕ್ ಡೌನ್ ಘೋಷಣೆ

|
Google Oneindia Kannada News

ಲಕ್ನೋ, ಜುಲೈ 12 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ವಾರಂತ್ಯದ ಲಾಕ್ ಡೌನ್ ಜಾರಿಗೆ ತರಲಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 35,092.

ಭಾನುವಾರ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.

ಲಕ್ನೋ: ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಆರತಿ ಎತ್ತಿ ಹಣ್ಣು ಕೊಟ್ಟ ಪೊಲೀಸರು ಲಕ್ನೋ: ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಆರತಿ ಎತ್ತಿ ಹಣ್ಣು ಕೊಟ್ಟ ಪೊಲೀಸರು

ಈ ವಾರಂತ್ಯದಲ್ಲಿಯೇ ಪ್ರಾಯೋಗಿಕವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ತನಕ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಪೊಲೀಸರು ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಲವು ಕ್ರಮ ಕೈಗೊಂಡಿದ್ದಾರೆ.

ಕೊರೊನಾ ಬಿಕ್ಕಟ್ಟಿನಿಂದಾಗಿ ಸರ್ಕಾರಿ ಉದ್ಯೋಗಕ್ಕೆ ಹೆಚ್ಚಿದ ಆದ್ಯತೆ:ಸಮೀಕ್ಷೆಕೊರೊನಾ ಬಿಕ್ಕಟ್ಟಿನಿಂದಾಗಿ ಸರ್ಕಾರಿ ಉದ್ಯೋಗಕ್ಕೆ ಹೆಚ್ಚಿದ ಆದ್ಯತೆ:ಸಮೀಕ್ಷೆ

Uttar Pradesh Govt To Impose Lock Down In Weekends

ಮುಂದಿನ ವಾರದಿಂದ ಪ್ರತಿ ಶನಿವಾರ ಮತ್ತು ಭಾನುವಾರ ಉತ್ತರ ಪ್ರದೇಶದಲ್ಲಿ ಲಾಕ್ ಡೌನ್ ಮುಂದುವರೆಯಲಿದೆ. ಮುಖ್ಯ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಲಿದ್ದು, ವಾಹನಗಳ ಸಂಚಾರ ನಡೆಸದಂತೆ ಕ್ರಮ ಕೈಗೊಳ್ಳಲಿದ್ದಾರೆ.

ಈ ಎರಡು ಕೊರೊನಾ ಔಷಧ ಬೇಕಾ, ಆಧಾರ್ ಕಾರ್ಡ್ ರೆಡಿ ಇರ್ಲಿ ಈ ಎರಡು ಕೊರೊನಾ ಔಷಧ ಬೇಕಾ, ಆಧಾರ್ ಕಾರ್ಡ್ ರೆಡಿ ಇರ್ಲಿ

ಉತ್ತರ ಪ್ರದೇಶದಲ್ಲಿ ಇದುವರೆಗೂ ದಾಖಲಾಗಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 35,092. ರಾಜ್ಯದಲ್ಲಿ 913 ಜನರು ಸಾವನ್ನಪ್ಪಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಿದ್ದಾರೆ. ಆಂಟಿಜೆನ್ ಪರೀಕ್ಷೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಕೊರೊನಾ ವೈರಸ್ ಸೋಂಕು ಇರುವ ಬಗ್ಗೆ ಮಾಹಿತಿ ಸಿಗಲಿದೆ.

English summary
Uttar Pradesh additional chief secretary Awanish Awasthi said that government will implement lock down on weekends to stop spread of COVID - 19 case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X