ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಳೆದ 24 ಗಂಟೆಯಲ್ಲಿ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆ

|
Google Oneindia Kannada News

ಲಕ್ನೋ, ಏಪ್ರಿಲ್ 8: ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

24 ಗಂಟೆಗಳಲ್ಲಿ 8,490 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, 39 ಮಂದಿ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾ ಲಸಿಕೆ ವ್ಯರ್ಥ; ಜಾವ್ಡೇಕರ್ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾ ಲಸಿಕೆ ವ್ಯರ್ಥ; ಜಾವ್ಡೇಕರ್

ಈ ಪೈಕಿ ಶೇ.50 ರಷ್ಟು ಪ್ರಕರಣಗಳು ಲಖನೌ, ಪ್ರಯಾಗ್ ರಾಜ್, ವಾರಾಣಸಿ, ಕಾನ್ಪುರದಲ್ಲಿ ವರದಿಯಾಗಿವೆ. ರಾಜ್ಯದ 6 ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ಬಳಿಕ ಕೊರೊನಾ ಪ್ರಕರಣಗಳು ಹೆಚ್ಚು ವರದಿಯಾಗಿವೆ.

Uttar Pradesh Reports 8,490 New Coronavirus Cases

ರಾಜ್ಯದಲ್ಲಿ ಈ ವರೆಗೂ 66,88,260 ಮಂದಿಗೆ ಕೊರೊನಾ ಲಸಿಕೆಯ ಮೊದಲ ಡೋಸ್ ನ್ನು ನೀಡಲಾಗಿದ್ದು, ಎರಡೂ ಡೋಸ್ ಗಳನ್ನು 11,79,437 ಮಂದಿ ತೆಗೆದುಕೊಂಡಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.ಲಕ್ನೋನ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಸಿಕೊಳ್ಳುವುದನ್ನು ನಿಲ್ಲಿಸಿವೆ.

ಸೆಪ್ಟೆಂಬರ್ 11, 2020 ರಂದು ಉತ್ತರ ಪ್ರದೇಶದಲ್ಲಿ ಒಂದೇ ದಿನ 7103 ಮಂದಿಗೆ ಕೊರೋನಾ ದೃಢಪಟ್ಟಿತ್ತು. ಈಗ 8 ಸಾವಿರದಷ್ಟು ಪ್ರಕರಣಗಳು ಒಂದೇ ದಿನ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 39,338ಕ್ಕೆ ಏರಿಕೆಯಾಗಿದ್ದು ಈ ವರೆಗೂ 9,003 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

English summary
Uttar Pradesh today reported 8,490 new cases took the infection tally to 6,54,404 and 39 more COVID-19 fatalities on Thursday pushing the toll to 9,003, a senor official said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X