ಯುಪಿ ಮುಂದಿನ 5 ವರ್ಷಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸಲಿದೆ: ಯೋಗಿ
ಗೋರಖ್‌ಪುರ ಮಾರ್ಚ್ 01: ರಾಜ್ಯದಲ್ಲಿನ ಭಾರತೀಯ ಜನತಾ ಪಕ್ಷವು ಮುಂದಿನ ಐದು ವರ್ಷಗಳಲ್ಲಿ ಪ್ರತಿ ಕುಟುಂಬದ ಕನಿಷ್ಠ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸಲು ಯೋಜಿಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.
ಗೋರಖ್‌ಪುರದ ಚೌರಿ ಚೌರಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, "ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ಅಥವಾ ಸ್ವಯಂ ಉದ್ಯೋಗಾವಕಾಶಗಳನ್ನು ಒದಗಿಸಲಾಗುವುದು ಎಂದು ನಾವು ಯೋಜಿಸುತ್ತಿದ್ದೇವೆ" ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಐದನೇ ಹಂತದ ಮತದಾನ ಅಯೋಧ್ಯೆ, ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಾಂಬಿ, ಪ್ರಯಾಗ್‌ರಾಜ್, ಬಾರಾಬಾಕಿ, ಬಹ್ರೈಚ್, ಶ್ರಾವಸ್ತಿ, ಗೊಂಡಾ, ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪೂರ್ಣಗೊಂಡಿದೆ.

ಉತ್ತರಪ್ರದೇಶದಲ್ಲಿ ಏಳು ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈಗಾಗಲೇ ಐದು ಹಂತದಲ್ಲಿ ಮತದಾನ ಪೂರ್ಣಗೊಂಡಿದೆ. ಇನ್ನೂ ಆರು ಮತ್ತು ಏಳನೇ ಹಂತದ ಚುನಾವಣೆ ನಡೆಯಬೇಕಿದೆ. ಕ್ರಮವಾಗಿ ಮಾರ್ಚ್ 3 ಮತ್ತು 7 ರಂದು ಆರು ಮತ್ತು ಏಳನೇ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಸಾಮಾನ್ಯವಾಗಿ ಉತ್ತರಪ್ರದೇಶ ಚುನಾವಣೆಯಲ್ಲಿ ಉದ್ಯೋಗವಕಾಶಗಳಿಂದ ಯುವಕರು ವಂಚಿತರಾಗಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ ಎನ್ನುವ ಆರೋಪಗಳನ್ನು ಚಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮಾಡಿವೆ. ಚುನಾವಣಾ ಪ್ರಚಾರದ ವೇಳೆ ಇದೇ ಅಸ್ತ್ರವನ್ನಿಟ್ಟುಕೊಂಡು ಬಿಜೆಪಿ ವಿರುದ್ಧ ಮತಯಾಚನೆ ಮಾಡುತ್ತಿವೆ. ಇದು ಬಿಜೆಪಿಗೆ ದೊಡ್ಡ ಸವಾಲಾಗಿತ್ತು. ಆದರೀಗ ಬಿಜೆಪಿ ಉದ್ಯೋಗದ ಭರವಸೆ ನೀಡುವ ಮೂಲಕ ಮತಯಾಚನೆ ಮಾಡುತ್ತಿದೆ. ಬಿಜೆಪಿ ಈ ಚುನಾವಣೆಯಲ್ಲಿ ಜಯಗಳಿಸಿದೆ ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡುತ್ತಿದೆ.
ಇನ್ನೂ ಕೇಸರಿ ನಿಲುವಂಗಿಯನ್ನು ತುಕ್ಕು ಬಣ್ಣಕ್ಕೆ ಹೋಲಿಸಿರುವ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ. ಡಿಂಪಲ್ ಯಾದವ್ ಅವರ ಹೇಳಿಕೆ ಸನಾತನ ಧರ್ಮ ಮತ್ತು ದಾರ್ಶನಿಕರಿಗೆ ಮಾಡಿದ ಅವಮಾನವಾಗಿದೆ ಎಂದು ಯೋಗಿ ಹೇಳಿದ್ದಾರೆ.
ಈ ಹಿಂದೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ತುಕ್ಕು ಹಿಡಿದಿದೆ ಮತ್ತು ಯೋಗಿ ಆದಿತ್ಯನಾಥ್ ಅವರು ತುಕ್ಕು ಬಣ್ಣವನ್ನು ಹೋಲುವ ಬಟ್ಟೆಗಳನ್ನು ಧರಿಸುತ್ತಾರೆ ಎಂದು ಸಿರತುದಲ್ಲಿ ನಡೆದ ರ್ಯಾಲಿಯಲ್ಲಿ ಎಂಎಸ್ ಯಾದವ್ ಹೇಳಿದ್ದರು. ಈ ಹೇಳಿಕೆಯನ್ನು ಗುರಿಯಾಗಿಸಿಕೊಂಡ ಯೋಗಿ ಆದಿತ್ಯನಾಥ್ ಅವರು, "ನೀವು ಎಸ್ಪಿಯವರಿಂದ ಕೆಲವು ಜನರ ಹೇಳಿಕೆಯನ್ನು ಕೇಳಿದ್ದೀರಿ. ಈ ಹೇಳಿಕೆಯು ಸನಾತನ ಧರ್ಮ ಮತ್ತು ದಾರ್ಶನಿಕರಿಗೆ ಮಾಡಿದ ಅವಮಾನವಾಗಿದೆ. ಅವರು ಕೇಸರಿ ಬಣ್ಣವನ್ನು ತುಕ್ಕು ಬಣ್ಣದೊಂದಿಗೆ ಹೋಲಿಸಿದ್ದಾರೆ" ಎಂದು ಡಿಂಪಲ್ ಯಾದವ್ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ಮಾಡಿದರು.
"ಉತ್ತರ ಪ್ರದೇಶದ ಪ್ರತಿಯೊಬ್ಬ ನಿವಾಸಿಯೂ ನಾವು ಭಗವಧಾರಿ ಎಂದು ಹೇಳುತ್ತಾರೆ. ಏಕೆಂದರೆ ಕೇಸರಿ ಶಕ್ತಿಯ ಬಣ್ಣ ಎಂದು ಅವರು ನಂಬಿತ್ತಾರೆ. ಸೂರ್ಯೋದಯವಾದಾಗ ಸೂರ್ಯ ದೇವರ ಬಣ್ಣ ಕೇಸರಿ ಎಂದು ಸ್ವಾಮಿ ವಿವೇಕಾನಂದರು ಹೆಮ್ಮೆಯಿಂದ ಹೇಳಿದ್ದರು. ಅವರ ನಿಲುವಂಗಿ ಕೂಡ ಕೇಸರಿಯಾಗಿತ್ತು. ನಾವು ಭಗವಧಾರಿ. ಇದು ನಮ್ಮ ಗುರುತು" ಎಂದು ಅವರು ಹೇಳಿದರು.
ಇನ್ನೂ ಚುನಾವಣೆ ಪ್ರಯುಕ್ತ ಇಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಇಂದು ಕುಶಿನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಇಂದು ಕುಶಿನಗರದಲ್ಲಿ ಪ್ರಚಾರ ಮಾಡಲಿದ್ದಾರೆ. ಮಾರ್ಚ್ 3 ರಂದು ಚುನಾವಣೆ ನಡೆಯಲಿರುವ ಕುಶಿನಗರ ಜಿಲ್ಲೆಯು ಕುಶಿನಗರ, ಖಡ್ಡಾ, ಪದ್ರೌನಾ, ತಮ್ಕುಹಿ ರಾಜ್, ಫಾಜಿಲ್‌ನಗರ, ಹಟಾ ಮತ್ತು ರಾಮ್‌ಕೋಲಾಗಳ ಏಳು ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, 2017 ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು.












Click it and Unblock the Notifications