ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಯೋಗಿ

|
Google Oneindia Kannada News

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಉತ್ತರ ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡಲು ಬಂದಿರುವ ಪ್ರಸ್ತಾವನೆಗೆ ಸಚಿವ ಸಂಪುಟ ಒಕ್ಕೊರಲಿನಿಂದ ಸಮ್ಮತಿ ನೀಡಿದೆ.

ಆಯೋಧ್ಯ ಜಿಲ್ಲೆಯಲ್ಲಿನ ವಿಮಾನ ನಿಲ್ದಾಣವನ್ನು ಇನ್ಮುಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣ ಎಂದು ಕರೆಯಲಾಗುತ್ತದೆ.

Uttar Pradesh to rename Ayodhya airport as Maryada Purushottam Sri Ram Airport

ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳಿಸಲಾಗಿದ್ದು, ಕೇಂದ್ರದ ಒಪ್ಪಿಗೆ ಬಂದ ಬಳಿಕ ವಿಮಾನ ನಿಲ್ದಾಣದಲ್ಲಿ ಹೊಸ ಹೆಸರಿನ ನಾಮಫಲಕ ಎದ್ದು ಕಾಣಲಿದೆ ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದೆ.

Recommended Video

Rohit Sharma ಹಾಗು Ishant Sharma ಟೆಸ್ಟ್ ಸರಣಿಯಿಂದಲೂ ವಾಪಾಸ್ | Oneindia Kannada

ಆಗಸ್ಟ್ 5ರಂದು ಆಯೋಧ್ಯದಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ಕಾರ್ಯ ನೆರವೇರಿದ ಬಳಿಕ ನಗರದ ಮೂಲ ಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಕ್ಕೆ ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ.
ವಿಮಾನ ನಿಲ್ದಾಣ ಯೋಜನೆ ಡಿಸೆಂಬರ್ 2021ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಶ್ರೀರಾಮಚಂದ್ರ ಮಂದಿರ ಪೂರ್ಣಗೊಂಡ ಬಳಿಕ ದೇಶ, ವಿದೇಶಗಳಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಇದಕ್ಕೆ ಈ ವಿಮಾನ ನಿಲ್ದಾಣ ಪೂರಕವಾಗಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಯೋಗಿ ಆದಿತ್ಯನಾಥ್ ಅವರು ಸ್ಥಳೀಯ ಹಿಂದುಗಳ ಬೇಡಿಕೆಗೆ ತಕ್ಕಂತೆ ಹೆಸರು ಬದಲಾವಣೆ ಮಾಡುವುದನ್ನು ಮುಂದುವರೆಸಿದ್ದಾರೆ. ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದರು. ಫೈಜಾಬಾದ್ ಜಿಲ್ಲೆಯನ್ನು ಆಯೋಧ್ಯಾ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
The Uttar Pradesh cabinet has approved the proposal to rename the airport in Ayodhya district to Maryada Purushottam Shri Ram Airport, Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X