• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಪ್ರದೇಶ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಅಖಿಲೇಶ್ ಯಾದವ್

|
Google Oneindia Kannada News

ಲಕ್ನೋ, ನವೆಂಬರ್ 01: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.

ಅಜಂಗಢದಿಂದ ಸಮಾಜವಾದಿ ಪಕ್ಷದ ಸಂಸದರು ಹಾಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಅಖಿಲೇಶ್ ಯಾದವ್, ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ರೈತ ವಿರೋಧಿ ಸರ್ಕಾರ ಕಿತ್ತೆಸೆಯುವುದೇ ನಮ್ಮ ಗುರಿ: ಅಖಿಲೇಶ್ ಯಾದವ್ಉತ್ತರ ಪ್ರದೇಶದಲ್ಲಿ ರೈತ ವಿರೋಧಿ ಸರ್ಕಾರ ಕಿತ್ತೆಸೆಯುವುದೇ ನಮ್ಮ ಗುರಿ: ಅಖಿಲೇಶ್ ಯಾದವ್

ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ (ಪಿಎಸ್‌ಪಿಎಲ್) ದಿಂದ ನೆರವು ಕುರಿತಂತೆ ಪ್ರತಿತ್ರಿಯಿಸಿದ ಅಖಿಲೇಶ್ ಯಾದವ್, ಇದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಹಾಗೂ ಅವರ ಕಡೆಯವರಿಗೆ ಸರಿಯಾದ ಗೌರವವನ್ನು ನೀಡಲಾಗುವುದು ಎಂದು ಹೇಳಿದರು.

ಚುನಾವಣೆಗಾಗಿ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ ನಡುವಣ ಮೈತ್ರಿಯನ್ನು ಅಂತಿಮಗೊಳಿಸಲಾಗಿದೆ. ಸೀಟು ಹಂಚಿಕೆ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಪಿಟಿಐ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ತೆಗೆದು ಹಾಕುವುದೇ ತಮ್ಮ ಮುಖ್ಯ ಉದ್ದೇಶವಾಗಿದೆ,'' ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು..

ಒಬಿಸಿ ಮತಗಳತ್ತ ಅಖಿಲೇಶ್ ಚಿತ್ತ, ಉತ್ತರಪ್ರದೇಶ ಚುನಾವಣೆ ಹೊಸ ರಣತಂತ್ರಒಬಿಸಿ ಮತಗಳತ್ತ ಅಖಿಲೇಶ್ ಚಿತ್ತ, ಉತ್ತರಪ್ರದೇಶ ಚುನಾವಣೆ ಹೊಸ ರಣತಂತ್ರ "ಬಿಜೆಪಿ ಸರ್ಕಾರದ ವಿರುದ್ಧದ ನಿರಾಶೆಯನ್ನು ನೋಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮತದಾರರು ನಮ್ಮ ಪಕ್ಷವನ್ನು 400 ಕ್ಷೇತ್ರಗಳಲ್ಲಿ ಗೆಲ್ಲುವಂತೆ ಮಾಡಬಹುದು. ಬಿಜೆಪಿ ಸರ್ಕಾರವನ್ನು ತೆಗೆದು ಹಾಕುವುದೇ ನಮ್ಮ ಗುರಿ," ಎಂದು ಅಖಿಲೇಶ್ ಯಾದವ್ ಹೇಳಿದ್ದರು. ಆದರೆ ಇದೀಗ ಸ್ಪರ್ಧೆಯಿಂದಲೇ ಹಿಂದೆ ಸರಿಯುವ ಮಾತನಾಡಿರುವುದು ಆಶ್ಚರ್ಯ ಮೂಡಿಸಿದೆ.

ಅಖಿಲೇಶ್ ವಿರುದ್ಧ ಯೋಗಿ ಟೀಕಾಪ್ರಹಾರ: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ನಡುವೆ, ಯುಪಿಯ ಮೊರಾದಾಬಾದ್‌ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್ ಅಖಿಲೇಶ್ ಯಾದವ್ ವಿರುದ್ದ ಕಿಡಿಕಾರಿದ್ದಾರೆ. ಸರ್ದಾರ್ ಪಟೇಲ್ ಅವರು ದೇಶವನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ.

ಆದರೆ, ಅಖಿಲೇಶ್ ಯಾದವ್, ಸರ್ದಾರ್ ಪಟೇಲ್ ಅವರನ್ನು ಮುಹಮ್ಮದ್ ಅಲಿ ಜಿನ್ನಾ ಅವರೊಂದಿಗೆ ಹೋಲಿಕೆ ಮಾಡಿ ಮಾತನಾಡಿರುವುದು ನಾಚಿಕೆಗೇಡು ಎಂದು ಹೇಳಿದ್ದಾರೆ.

ರಾಷ್ಟ್ರವನ್ನು ಒಂದುಗೂಡಿಸಲು ಶ್ರಮಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಜಿನ್ನಾ ಜೊತೆ ಹೋಲಿಸುತ್ತಿರುವುದು ನಾಚಿಗೇಡಿನ ವಿಚಾರ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾರತದ ಜನರು ವಿಭಜನೆಯನ್ನು ಸಹಿಸಿಕೊಳ್ಳುವುದಿಲ್ಲ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (ಭಾರತದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಯೋಗಿ ಆದಿತ್ಯನಾಥ್ ಒತ್ತಾಯಿಸಿದ್ದಾರೆ.

2017ರ ಮೊದಲು 4,500 ಮಂದಿಗೂ ವಸತಿ ಸಿಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅವರಿಗೆ ಕುಟುಂಬವೇ ರಾಜ್ಯವಾಗಿತ್ತು. ಯಾವ ಕುಟುಂಬದ ಹಿತದ ಚಿಂತೆಯೂ ಇರಲಿಲ್ಲ. ಆದರೆ ನಮ್ಮ ಸರ್ಕಾರ 45 ಸಾವಿರ ಜನರಿಗೆ ಮನೆ ಒದಗಿಸಿ ಕೊಡುವ ಕೆಲಸ ಮಾಡಿದೆ. ಹಿಂದಿನ ಸರ್ಕಾರ ಜನರ ಬಗ್ಗೆ ಕಾಳಜಿ ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

ಇದು ತಾಲಿಬಾನಿ ಮನಸ್ಥಿತಿ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪ್ರತಿ ಕ್ಷಣವೂ ಒಡೆಯುವ ಪ್ರಯತ್ನವೇ ನಡೆಯುತ್ತಿರುತ್ತದೆ. ಮೊದಲನೆಯದಾಗಿ, ಜಾತಿ ಮತ್ತು ಇತರ ಭರವಸೆಗಳ ಹೆಸರಿನಲ್ಲಿಒಡೆದಾಳುವ ಪ್ರಯತ್ನ ನಡೆಯಿತು.

ತಮ್ಮ ಯೋಜನೆಗಳಲ್ಲಿ ಯಶಸ್ವಿಯಾಗದಿದ್ದಾಗ, ಮಹಾನ್ ಪುರುಷರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಇಡೀ ಸಮಾಜವನ್ನೇ ಅವಮಾನಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯೋಗಿ ಹೇಳಿದ್ದಾರೆ.

English summary
Samajwadi Party (SP) supremo Akhilesh Yadav on Monday said he will not be contesting the Uttar Pradesh Assembly polls early next year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X