ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ: ಈ ದೇವಸ್ಥಾನಕ್ಕೆ ಹೋಗುವುದಕ್ಕೂ ಕೊವಿಡ್-19 ನೆಗೆಟಿವ್!

|
Google Oneindia Kannada News

ವಾರಣಾಸಿ, ಏಪ್ರಿಲ್ 15: ಉತ್ತರ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ವಾರಣಾಸಿ ವಿಭಾಗದ ಮೂರು ಪ್ರಮುಖ ದೇವಾಲಯಗಳಿಗೆ ಭೇಟಿ ನೀಡುವುದಕ್ಕೆ ಕೊವಿಡ್-19 ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ವಾರಣಾಸಿ ಜಿಲ್ಲೆಯ ವಿಶ್ವನಾಥ ದೇವಸ್ಥಾನ, ಸಂಕಟಮೋಚನ ದೇವಸ್ಥಾನ ಹಾಗೂ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕಡ್ಡಾಯವಾಗಿ RT-PCR ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ವಾರಣಾಸಿ ವಿಭಾಗದ ಆಡಳಿತಾಧಿಕಾರಿ ದೀಪಕ್ ಅಗರ್ವಾಲ್ ಹೇಳಿದ್ದಾರೆ.

Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್? Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್?

ಮೂರು ಪ್ರಸಿದ್ಧ ದೇವಾಲಯಕ್ಕೆ ತೆರಳುವ ಭಕ್ತರು ಮೂರು ದಿನಗಳ ಹಿಂದೆ RT-PCR ತಪಾಸಣೆಗೆ ಒಳಪಟ್ಟು ನೆಗೆಟಿವ್ ವರದಿ ಹೊಂದಿರಬೇಕು. ದೇವಸ್ಥಾನವಷ್ಟೇ ಅಲ್ಲದೇ ನಗರದ ಹೋಟೆಲ್ ಗಳಿಗೆ ತೆರಳುವ ಪ್ರವಾಸಿಗರಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Varanasi District Administration Makes Negative RT-PCR Report Mandatory For Entering This Temples

ಉತ್ತರ ಪ್ರದೇಶದಲ್ಲಿ 17963 ಹೊಸ ಪ್ರಕರಣ:

ಕೊರೊನಾವೈರಸ್ ಸೋಂಕಿನ ಎರಡನೇ ಅಲೆಗೆ ಉತ್ತರ ಪ್ರದೇಶ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ 17963 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ ರಾಜ್ಯದಲ್ಲಿ 85 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸ್ಫೋಟ:

ದೇಶದಲ್ಲಿ ಒಂದೇ ದಿನ 2,00,739 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1038 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 93,528 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಇದುವರೆಗೂ 1,73,123 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದರೆ, 1,24,29,564 ಸೋಂಕಿತರು ಗುಣಮುಖರಾಗಿದ್ದಾರೆ. 14,71,877 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Coronavirus: Varanasi District Administration Makes Negative RT-PCR Report Mandatory For Entering This Temples.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X