ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ: ದಲಿತ ಬಾಲಕಿಗೆ ಕುಟುಂಬದಿಂದ ಚಿತ್ರಹಿಂಸೆ

|
Google Oneindia Kannada News

ಲಕ್ನೋ ಡಿಸೆಂಬರ್ 29: ಉತ್ತರ ಪ್ರದೇಶದ ಅಮೇಥಿಯಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ನಿರ್ದಯವಾಗಿ ಥಳಿಸಿದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿಯನ್ನು ಬಂಧಿಸುವಂತೆ ಸೂಚಿಸಿದ್ದಾರೆ. ವಿಡಿಯೋದಲ್ಲಿ ಇಬ್ಬರು ಪುರುಷರು ಹದಿಹರೆಯದ ಹುಡುಗಿಯನ್ನು ನೆಲದ ಮೇಲೆ ಕೂದಲಿಡಿದು ಎಳೆದಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು ನೋಡುಗರಿಗೆ ಕೋಪ ನೆತ್ತಿಗೇರುವಂತೆ ಮಾಡಿದೆ. ಮಾತ್ರವಲ್ಲದೇ ಆಕೆಯ ಪಾದಗಳಿಗೆ ಕೋಲಿನಿಂದ ಹೊಡೆಯಲಾಗುತ್ತದೆ. ಅವಳು ನೋವಿನಿಂದ ಕೂಗಿಕೊಳ್ಳುವುದು ವಿಡಿಯೋದಲ್ಲಿ ಕೇಳಿ ಬಂದಿದೆ. ತನ್ನನ್ನು ಬಿಟ್ಟುಬಿಡುವಂತೆ ಕೇಳಿಕೊಂಡರೂ ಕೋಲಿನಿಂದ ಆಕೆಯ ಪಾದಗಳಿಗೆ ಹೊಡೆಯಲಾಗುತ್ತದೆ.

ಉತ್ತರ ಪ್ರದೇಶದ ಅಮೇಥಿಯಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಕಳ್ಳತನದ ಆರೋಪವಿದೆ ಎಂದು ವರದಿಯಾಗಿದೆ. ವಿಡಿಯೋದಲ್ಲಿ ಕಾಣಸಿಗುವ ಮೂವರು ಮಹಿಳೆಯರು ಆಕೆಯನ್ನು ಪ್ರಶ್ನಿಸುತ್ತಿರುವುದು ಕೇಳಬಹುದು. ಹುಡುಗಿಯನ್ನು ಹೊಡೆಯುವ ವ್ಯಕ್ತಿ ಅವಳನ್ನು ನೆಲದ ಮೇಲೆ ಕೂದಲಿನಿಂದ ಹಿಡಿದು ಕ್ರೂರವಾಗಿ ಹಿಂಸಿಸುತ್ತಾನೆ.

ಅಮೇಥಿ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್ ಮೂಲಕ ಈ ಘಟನೆಯ ಬಗ್ಗೆ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ಸರ್ಕಲ್ ಆಫೀಸರ್ ಅರ್ಪಿತ್ ಕಪೂರ್ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಇದುವರೆಗೆ ನಮನ್ ಸೋನಿ ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣದ ಇತರ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಮತ್ತು ಲೋಕಸಭೆಯಲ್ಲಿ ಅಮೇಥಿಯನ್ನು ಪ್ರತಿನಿಧಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಈ ಘಟನೆಯ ಬಗ್ಗೆ ಕಿಡಿಕಾರಿದ್ದಾರೆ. ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಈ ಘಟನೆ ನಡೆದಿದೆ. ಈ ಘಟನೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಖಂಡಿಸಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ 34 ಜಾತಿವಾದಿ ಅಪರಾಧಗಳು ಮತ್ತು 135 ಮಹಿಳೆಯರ ವಿರುದ್ಧದ ಅಪರಾಧಗಳು ವರದಿಯಾಗುತ್ತಿದ್ದರೂ ಪೊಲೀಸ್ ಇಲಾಖೆ ನಿದ್ರಿಸುತ್ತಿದೆ. ಇದು ಯೋಗಿ ಆದಿತ್ಯನಾಥ್ ಆಡಳಿತಾವಧಿಯಲ್ಲಿ ನಡೆಯುತ್ತಿರುವ ಅಮಾನವೀಯ ಕೃತ್ಯಗಳು ಎಂದು ಅವರು ಆರೋಪಿಸಿದ್ದಾರೆ. ಜೊತೆಗೆ ಪ್ರಕರಣದ ಆರೋಪಿಗಳನ್ನು 24 ಗಂಟೆಗಳ ಒಳಗೆ ಬಂಧಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Video: Dalit Girl Tortured By A Family

ಮುಂದಿನ ವರ್ಷ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಬೇಕಾದ ಸಿದ್ದತೆಗಳನ್ನು ಪಕ್ಷಗಳು ಮಾಡಿಕೊಳ್ಳಲಾಗುತ್ತಿವೆ. ಈ ಬಾರಿ ಅಧಿಕಾರವನ್ನು ಬಿಜೆಪಿಗೆ ಬಿಟ್ಟುಕೊಡದಿರಲು ಎಸ್‌ಪಿ ನಾಯಕ ಪಣತೊಟ್ಟು ಪ್ರಚಾರದ ಕಣಕ್ಕಿಳಿದಿದ್ದಾರೆ. ಹಲವಾರು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಪಕ್ಷ ಬಲಪಡಿಸಿಕೊಳ್ಳುತ್ತಿದ್ದಾರೆ. ಇತ್ತ ಬಿಜೆಪಿ ಕೂಡ ಸಕಲ ತಯಾರಿ ಮಾಡಿಕೊಳ್ಳುತ್ತಿದ್ದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಕೂಡ ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನೂ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೇ.40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. "ಮುಂಬರುವ ನವೆಂಬರ್ 15ರವರೆಗೆ ಮಹಿಳೆಯರಿಗೆ ಅವಕಾಶವಿರುತ್ತದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಯಾವುದೇ ಮಹಿಳೆಯರು ಕಾಂಗ್ರೆಸ್ ಪಕ್ಷದ ಕಚೇರಿಗೆ ಬಂದು ಭೇಟಿ ಮಾಡಬಹುದು ಎಂದು ಪ್ರಿಯಾಂಕಾ ಗಾಂಧಿ ಆಹ್ವಾನ ನೀಡಿದ್ದಾರೆ. ಮಹಿಳಾ ನಾಯಕರಿಗೆ ಅವರ ಸಾಮರ್ಥ್ಯ ಮತ್ತು ಕ್ಷೇತ್ರದಲ್ಲಿ ಅವರು ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಅವಕಾಶಗಳನ್ನು ನೀಡಲಾಗುವುದು," ಎಂದು ಹೇಳಿದ್ದಾರೆ. ಈ ಬಾರಿ ಬಿರುಸಿನ ಪ್ರಚಾರ ಮಾಡಲಾಗುತ್ತಿದ್ದು ಜನ ಯಾವ ಪಕ್ಷದ ಕೈ ಹಿಡಿಯಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಿದೆ.

English summary
A shocking viral video of a man mercilessly thrashing a Dalit minor girl in Uttar Pradesh's Amethi has triggered outrage, prompting the police to register a case and make an arrest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X