• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಖಿಂಪುರ್ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ಅರ್ಜಿ ತಿರಸ್ಕೃತ

|
Google Oneindia Kannada News

ಲಖಿಂಪುರ, ನವೆಂಬರ್ 16: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮತ್ತು ಇತರ ಇಬ್ಬರ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿ ನ್ಯಾಯಾಲಯ ತಿರಸ್ಕರಿಸಿದೆ. ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು.

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಖೇಶ್ ಮಿಶ್ರಾ ಅವರು ಆಶಿಶ್ ಮಿಶ್ರಾ, ಅಲಿಯಾಸ್ ಮೋನು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು ಎಂದು ಜಿಲ್ಲಾ ಸರಕಾರಿ ವಕೀಲ ಅರವಿಂದ ತ್ರಿಪಾಠಿ ಹೇಳಿದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಪ್ರಾಸಿಕ್ಯೂಷನ್ ಪ್ರಕರಣದ ಕೇಸ್ ಡೈರಿ, ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಪಡೆದ ನಾಲ್ಕು ಬಂದೂಕುಗಳ ವರದಿಗಳು ಮತ್ತು ಆರೋಪಿಗಳ ಶಾಮೀಲು ಸ್ಥಾಪಿಸಲು 60 ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಸಲ್ಲಿಸಿದೆ ಎಂದು ಅವರು ಹೇಳಿದರು. ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಹಿಂಸಾಚಾರದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ಸಮಿತಿಯು ಪ್ರಕರಣದಲ್ಲಿ ಇತರ 12 ಆರೋಪಿಗಳನ್ನು ಗುರುತಿಸಿ ಅವರನ್ನು ಬಂಧಿಸಿದೆ.

ಘಟನೆ ಏನು?

ಘಟನೆ ಏನು?

ಅಕ್ಟೋಬರ್ 3 ರಂದು ಲಖಿಂಪುರ್ ನಗರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಟಿಕುನಿಯಾ-ಬನ್ಬೀರ್ ಪುರ್ ರಸ್ತೆಯಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ. ಪ್ರತಿಭಟನಾ ಮೆರವಣಿಗೆ ವೇಳೆ ಏಕಾಏಕಿ ಕಾರು ನುಗ್ಗಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 4 ಜನರು ಕಾರಿನಿಂದಾಗಿ ಮೃತಪಟ್ಟರೆ ಉಳಿದ 4 ಜನರು ಗಲಾಟೆಯಲ್ಲಿ ಸಾವನ್ನಪ್ಪಿದ್ದಾರೆ. ಈ ವೇಳೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರ ಮೇಲೆ ಕಾರನ್ನು ಚಲಾಯಿಸುತ್ತಿದ್ದರು ಎನ್ನುವ ಗಂಭೀರ ಆರೋಪವಿದೆ. ಘಟನೆಯ ಬಳಿಕ ರಾಜ್ಯದಲ್ಲಿ ಮಾತ್ರವಲ್ಲ ದೇಶದಾದ್ಯಂತ ಅಸಮಾಧಾನದ ವಾತಾವರಣವಿದೆ.

ಘಟನೆಯಲ್ಲಿ ಅನೇಕರ ಬಂಧನ

ಘಟನೆಯಲ್ಲಿ ಅನೇಕರ ಬಂಧನ

ಘಟನೆ ನಡೆದ ಮರುದಿನವೇ ಆಶಿಶ್ ಮಿಶ್ರಾ ಸೇರಿದಂತೆ 14 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಇದುವರೆಗೆ 5 ಬಂಧನಗಳನ್ನು ಮಾಡಲಾಗಿದೆ. ಇದರಲ್ಲಿ ಲವಕುಶ, ಆಶಿಶ್ ಪಾಂಡೆ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರರಾದ ಆಶಿಶ್ ಮಿಶ್ರಾ ಮತ್ತು ಚಾಲಕ ಶೇಖರ್ ಸೇರಿದ್ದಾರೆ. ವೈರಲ್ ವೀಡಿಯೊಗಳ ಆಧಾರದ ಮೇಲೆ ಪೊಲೀಸರು ಇದುವರೆಗೆ 20 ಕ್ಕೂ ಹೆಚ್ಚು ಜನರನ್ನು ಗುರುತಿಸಿದ್ದಾರೆ.

ಕಾಂಗ್ರೆಸ್‌ನಿಂದ ಸ್ವತಂತ್ರ ತನಿಖೆಗೆ ಒತ್ತಾಯ

ಕಾಂಗ್ರೆಸ್‌ನಿಂದ ಸ್ವತಂತ್ರ ತನಿಖೆಗೆ ಒತ್ತಾಯ

ಬುಧವಾರ ಲಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತು. ಈ ವೇಳೆ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆ ಮತ್ತು ಇಬ್ಬರು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆಗೆ ಒತ್ತಾಯಿಸಿದರು.

 ಲಖಿಂಪುರ್ ಖೇರಿ ಪ್ರಕರಣದ ತನಿಖೆ

ಲಖಿಂಪುರ್ ಖೇರಿ ಪ್ರಕರಣದ ತನಿಖೆ

ಲಖಿಂಪುರ್ ಖೇರಿ ಪ್ರಕರಣದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಕೆಯು ನಾಯಕ ರಾಕೇಶ್ ಟಿಕಾಯತ್, ''ಸರ್ಕಾರವು ತನಿಖೆಯನ್ನು ಅಣಕಿಸುವಂತೆ ಮಾಡಿದೆ. ತನಿಖೆಯ ಹೆಸರಿನಲ್ಲಿ ಚಹಾ ಮತ್ತು ಬಿಸ್ಕತ್ತುಗಳನ್ನು ನೀಡಲಾಗುತ್ತಿದೆ. ತನಿಖಾ ಅಧಿಕಾರಿಗಳ ಗುರುತನ್ನು ಪಾರದರ್ಶಕತೆಗಾಗಿ ಅನಾಮಧೇಯವಾಗಿ ಇಡಬೇಕು" ಎಂದು ಹೇಳಿದರು. ಲಖಿಂಪುರ್ ಪ್ರಕರಣವನ್ನು ವಿರೋಧಿಸಿ ಅಕ್ಟೋಬರ್ 26 ರಂದು ಕಿಸಾನ್ ಮಹಾಪಂಚಾಯತ್ ಆಯೋಜಿಸಲಾಗಿತ್ತು ಮತ್ತು ಅಕ್ಟೋಬರ್ 18 ರಂದು ದೇಶಾದ್ಯಂತ ರೈಲು ತಡೆ ಅಭಿಯಾನವನ್ನು ಮಾಡಲಾಗಿದೆ. ಆಶಿಶ್ ಮಿಶ್ರಾ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಜೊತೆಗೆ ಅಜಯ್ ಮಿಶ್ರಾ ಅವರು ರಾಜೀನಾಮೆ ನೀಡಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.

English summary
A court in Lakhimpur Kheri rejected the bail pleas of Union minister Ajay Mishra’s son Ashish and two others in the Lakhimpur Kheri violence case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion