'ಯುಪಿಯನ್ನು ಕಾಶ್ಮೀರ, ಬಂಗಾಳ ಅಥವಾ ಕೇರಳವನ್ನಾಗಿ ಮಾಡಬೇಡಿ' ಮತದಾರರಿಗೆ ಯೋಗಿ ಮನವಿ

ಲಕ್ನೋ ಫಬ್ರವರಿ 10: 'ಅಪರಾಧ ಮುಕ್ತ, ಭಯಮುಕ್ತ, ಗಲಭೆ ಮುಕ್ತ' ರಾಜ್ಯಕ್ಕಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಮತದಾರರಲ್ಲಿ ಮನವಿ ಮಾಡಿದ್ದಾರೆ.

"ಇಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ನಿಮ್ಮ (ಮತದಾರರ) ಕೊಡುಗೆಯಿಲ್ಲದೆ ಈ ಮತದಾನದ ಆಚರಣೆಯು ಅಪೂರ್ಣವಾಗಲಿದೆ. ನಿಮ್ಮ ಒಂದು ಮತವು ಅಪರಾಧ ಮುಕ್ತ, ಭಯ-ಮುಕ್ತ, ಗಲಭೆ ಮುಕ್ತ ಉತ್ತರ ಪ್ರದೇಶ ನಿರ್ಮಾಣವನ್ನು ಬಲಪಡಿಸುತ್ತದೆ'' ಎಂದು ಆದಿತ್ಯನಾಥ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ತಮ್ಮ ವೈಯಕ್ತಿಕ ಟ್ವಿಟರ್ ಹ್ಯಾಂಡಲ್‌ನಿಂದ ಹಂಚಿಕೊಂಡ ಸುಮಾರು ಆರು ನಿಮಿಷಗಳ ಸುದೀರ್ಘ ವೀಡಿಯೊದಲ್ಲಿ, ಯೋಗಿ ಆದಿತ್ಯನಾಥ್ ಅವರು ಬಿಜೆಪಿಗೆ ಮತ ನೀಡಿದರೆ ಭಯ ಮುಕ್ತ ಜೀವನವನ್ನು ಖಾತರಿಪಡಿಸುತ್ತದೆ ಎಂದು ಹೇಳಿದ್ದಾರೆ. ನನ್ನ ಹೃದಯದಲ್ಲಿ ಬಹಳಷ್ಟು ಹೇಳುವುದು ಇದೆ. ನಾನು ನಿಮಗೆ ಅದನ್ನು ಹೇಳಲು ಬಯಸುತ್ತೇನೆ. ಕಳೆದ ಐದು ವರ್ಷಗಳಲ್ಲಿ ಸಾಕಷ್ಟು ಮಹತ್ತರವಾದ ಘಟನೆಗಳು ನಡೆದಿವೆ. ಹೀಗಾಗಿ ನೀವು ಜಾಗರೂಕರಾಗಿರಿ. ಈ ಐದು ವರ್ಷಗಳ ದುಡಿಮೆ ತಪ್ಪಿದರೆ ಎಲ್ಲವೂ ಹಾಳಾಗುತ್ತದೆ. ಯುಪಿ ಕಾಶ್ಮೀರ, ಕೇರಳ ಮತ್ತು ಬಂಗಾಳ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

Watch: Yogi Adityanath says don’t make UP a Kashmir, Bengal or Kerala

ಕಳೆದ ಐದು ವರ್ಷಗಳ ನನ್ನ ಶ್ರಮಕ್ಕೆ ನಿಮ್ಮ ಮತವು ಆಶೀರ್ವಾದವಾಗಲಿದೆ. ದೊಡ್ಡ ನಿರ್ಧಾರದ ಸಮಯ ಬಂದಿದೆ. ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ಸಮರ್ಪಣಾ ಮತ್ತು ಬದ್ಧತೆಯಿಂದ ಎಲ್ಲವನ್ನೂ ಮಾಡಿದೆ. ನೀವು ಎಲ್ಲವನ್ನೂ ವಿವರವಾಗಿ ನೋಡಿದ್ದೀರಿ ಮತ್ತು ಕೇಳಿದ್ದೀರಿ ಎಂದು ಯೋಗಿ ಹೇಳಿದರು.

ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಗುರುವಾರ ಮತದಾನ ಆರಂಭವಾಗಿದೆ. ಬೆಳಗ್ಗೆ 7.00 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ರಾಜಕೀಯವಾಗಿ ನಿರ್ಣಾಯಕವಾಗಿರುವ ರಾಜ್ಯದಲ್ಲಿ ಏಳು ಹಂತದ ಚುನಾವಣೆಯ ಮೊದಲ ಸುತ್ತಿನ ಮತದಾನದ ಕ್ಷೇತ್ರಗಳಲ್ಲಿ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಹಲವು ಅಭ್ಯರ್ಥಿಗಳ ಭವಿಷ್ಯ ಮೊದಲ ಹಂತದಲ್ಲಿ ನಿರ್ಧರವಾಗಲಿದೆ. ಮೊದಲ ಹಂತದಲ್ಲಿ 73 ಮಹಿಳೆಯರು ಸೇರಿದಂತೆ 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಮತ್ತು 1.24 ಕೋಟಿ ಪುರುಷರು ಮತ್ತು 1.04 ಕೋಟಿ ಮಹಿಳೆಯರು ಸೇರಿದಂತೆ ಸುಮಾರು 2.28 ಕೋಟಿ ಮತದಾರರು ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ರೋಡ್‌ಶೋಗಳು ಮತ್ತು ಭೌತಿಕ ರ್‍ಯಾಲಿಗಳ ಮೇಲೆ ನಿರ್ಬಂಧ ವಿಧಿಸಿತ್ತು. ಇದರ ಪರಿಣಾಮವಾಗಿ ರಾಜಕೀಯ ಪಕ್ಷಗಳು ವರ್ಚುವಲ್ ಮಾಧ್ಯಮವನ್ನು ಬಳಸಿಕೊಂಡು ಪ್ರಚಾರ ನಡೆಸಿದ್ದವು. ಹೆಚ್ಚಾಗಿ ಮನೆ ಮನೆ ಪ್ರಚಾರಕ್ಕೆ ಆದ್ಯತೆ ನೀಡಲಾಗಿತ್ತು.

ಮೊದಲ ಹಂತದಲ್ಲಿ ಪಶ್ಚಿಮ ಯುಪಿಯ ಜಾಟ್-ಪ್ರಾಬಲ್ಯವನ್ನು ಒಳಗೊಂಡಿದೆ. ಅಲ್ಲಿನ ರೈತರು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಹೀಗಾಗಿ ಈ ಕ್ಷೇತ್ರಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ಬಾರಿ 2017 ರಲ್ಲಿ 58 ಸ್ಥಾನಗಳಲ್ಲಿ ಬಿಜೆಪಿ 53 ಸ್ಥಾನಗಳನ್ನು ಗಳಿಸಿದರೆ, ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ತಲಾ ಎರಡು ಸ್ಥಾನಗಳನ್ನು ಪಡೆದಿದ್ದವು. ಒಂದು ಸ್ಥಾನ ರಾಷ್ಟ್ರೀಯ ಲೋಕದಳದ ಪಾಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+