ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕೋವಿಡ್‌ ನಡುವೆ ಕನ್ವರ್‌ ಯಾತ್ರೆ ಯಾಕೆ?': ಯುಪಿ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌

|
Google Oneindia Kannada News

ನವದೆಹಲಿ, ಜು.14: ಕೋವಿಡ್‌ ಮೂರನೇ ಅಲೆಯ ಆತಂಕದ ನಡುವೆ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ನೀಡಿದೆ.

ಹಾಗೆಯೇ ''ಈ ಕೋವಿಡ್‌ ಭೀತಿಯ ನಡುವೆಯೂ ಕನ್ವರ್ ಯಾತ್ರೆಗೆ ಅವಕಾಶ ನೀಡಿರುವುದು ಯಾಕೆ,'' ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಕುಂಭಮೇಳ ಸಂದರ್ಭ ನಕಲಿ ಕೋವಿಡ್‌ ವರದಿ ಸಲ್ಲಿಕೆ: ತನಿಖೆ ಪ್ರಗತಿಯಲ್ಲಿಕುಂಭಮೇಳ ಸಂದರ್ಭ ನಕಲಿ ಕೋವಿಡ್‌ ವರದಿ ಸಲ್ಲಿಕೆ: ತನಿಖೆ ಪ್ರಗತಿಯಲ್ಲಿ

ಉತ್ತರ ಪ್ರದೇಶ ಸರ್ಕಾರ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಮಂಗಳವಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಿಷಯವನ್ನು ಸ್ವಂತವಾಗಿ ಕೈಗೆತ್ತಿಕೊಂಡಿದೆ. ಹಾಗೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ.

 Why Kanwar Yatra During Covid SC issued notice to the Uttar Pradesh Government

ಮಂಗಳವಾರ ಯುಪಿ ಸರ್ಕಾರವು, ''ಕನ್ವರ್ ಯಾತ್ರೆ ಶಿವನ ಹತ್ತಾರು ಭಕ್ತರು ಸೇರುವ ಕಾರ್ಯಕ್ರಮವು 'ಕನಿಷ್ಠ ಸಂಖ್ಯೆಯ ಜನರೊಂದಿಗೆ' ನಡೆಸಬಹುದು. ಅಗತ್ಯವಿದ್ದರೆ ನೆಗೆಟಿವ್‌ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಬಹುದು,'' ಎಂದು ಹೇಳಿತ್ತು.

ಈ ನಡುವೆ ಉತ್ತರಾಖಂಡ ಸರ್ಕಾರ ಈ ವರ್ಷದ ಕನ್ವರ್ ಯಾತ್ರೆಯನ್ನು ಮಂಗಳವಾರ ರದ್ದುಗೊಳಿಸಿದೆ. ''ಯಾತ್ರೆಯಿಂದಾಗಿ ಕೋವಿಡ್‌ ಹೆಚ್ಚಳವಾಗಬಹುದು'' ಎಂದು ತಜ್ಞರ ಎಚ್ಚರಿಕೆ ನೀಡಿದ ಹಿನ್ನೆಲೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಹಿಂದೆ ಕುಂಭ ಮೇಳದ ಬಳಿಕ ಕೋವಿಡ್‌ ಹೆಚ್ಚಳಕ್ಕೆ ಈ ರಾಜ್ಯ ಸಾಕ್ಷಿಯಾಗಿತ್ತು.

ಉತ್ತರ ಪ್ರದೇಶದಲ್ಲಿ ಆಡಳಿತ ಸ್ಥಗಿತ: ಮಾಜಿ ಅಧಿಕಾರಿಗಳ ಬಹಿರಂಗ ಪತ್ರಉತ್ತರ ಪ್ರದೇಶದಲ್ಲಿ ಆಡಳಿತ ಸ್ಥಗಿತ: ಮಾಜಿ ಅಧಿಕಾರಿಗಳ ಬಹಿರಂಗ ಪತ್ರ

ಹೊಸದಾಗಿ ನೇಮಕಗೊಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. "ಮಾನವ ಜೀವದ ಉಳಿವಿಗೆ ಹೆಚ್ಚಿನ ಆದ್ಯತೆ ನೀಡುತ್ತಾ, ಮುಂಬರುವ ಕನ್ವರ್ ಯಾತ್ರೆಯನ್ನು ನಿಲ್ಲಿಸಲು ನಿರ್ಧರಿಸಲಾಗಿದೆ," ಎಂದು ಸರ್ಕಾರ ತಿಳಿಸಿದೆ. ಉತ್ತರಾಖಂಡದ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಇದಕ್ಕೂ ಮುನ್ನ ಪುಷ್ಕರ್ ಸಿಂಗ್ ಧಾಮಿಗೆ ಪತ್ರ ಬರೆದು ವಾರ್ಷಿಕ ತೀರ್ಥಯಾತ್ರೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.

ಕನ್ವರ್ ಯಾತ್ರೆ ಎಂದರೇನು?

ಶ್ರವಣ ತಿಂಗಳ ಪ್ರಾರಂಭದೊಂದಿಗೆ ಹದಿನೈದು ದಿನಗಳ ಈ ಯಾತ್ರೆ ಪ್ರಾರಂಭವಾಗುತ್ತದೆ (ಸಾಮಾನ್ಯವಾಗಿ ಜುಲೈ ಕೊನೆಯ ವಾರದಲ್ಲಿ). ಯಾತ್ರೆಯ ಭಾಗವಾಗಿ, ಗಂಗಾ ನೀರನ್ನು ತಮ್ಮ ಶಿವ ದೇವಾಲಯಗಳಲ್ಲಿ ಅರ್ಪಿಸಲು ನೆರೆಯ ರಾಜ್ಯಗಳಾದ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ದೆಹಲಿ ಮತ್ತು ಹಿಮಾಚಲ ಪ್ರದೇಶದ ಕೋಟ್ಯಾಂತರ ಭಕ್ತರು ಅಥವಾ ಕನ್ವರಿಯರು ಪವಿತ್ರ ನಗರವಾದ ಹರಿದ್ವಾರದಲ್ಲಿ ಒಟ್ಟುಗೂಡುತ್ತಾರೆ.

ಕೋವಿಡ್‌ನ ಮೊದಲ ಅಲೆಯ ಕಾರಣದಿಂದಾಗಿ ಕಳೆದ ವರ್ಷವೂ ಯಾತ್ರೆ ರದ್ದುಗೊಂಡಿದೆ. ಈ ವರ್ಷ, ಜುಲೈ 2 ರಂದು ಉತ್ತರಾಖಂಡವು ಯಾತ್ರೆಯನ್ನು ರದ್ದುಗೊಳಿಸಿದೆ. ಆದರೆ ಉತ್ತರ ಪ್ರದೇಶ ತೀರ್ಥಯಾತ್ರೆಗೆ ಅವಕಾಶ ನೀಡಿದೆ.

(ಒನ್‌ಇಂಡಿಯಾ ಸುದ್ದಿ)

English summary
The Supreme Court on Wednesday issued notice to the Uttar Pradesh government over its decision to allow the Kanwar Yatra from next week despite the COVID-19 threat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X