ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉನ್ನಾವೊ ಅತ್ಯಾಚಾರ ಆರೋಪಿ ಸೆಂಗರ್ ಪತ್ನಿಗೆ ಬಿಜೆಪಿ ಟಿಕೆಟ್

|
Google Oneindia Kannada News

ಲಕ್ನೋ, ಏಪ್ರಿಲ್ 9: ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಎದುರಿಸುತ್ತಿರುವ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರ ಪತ್ನಿ ಸಂಗೀತಾಗೆ ಉತ್ತರ ಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ.

ಉನ್ನಾವೊದ ಜಿಲ್ಲಾ ಪಂಚಾಯತ್‌ನ ಅಧ್ಯಕ್ಷೆಯಾಗಿದ್ದ ಸಂಗೀತಾ, ಫತೇಹ್‌ಪುರ ಚೌರಾಸಿ ತೃತಾಯ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕುಲದೀಪ್ ಸಿಂಗ್ ಸೆಂಗರ್ ಬಿಜೆಪಿ ಶಾಸಕರಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಬಳಿಕ ಪಕ್ಷದಿಂದ ಉಚ್ಚಾಟನೆಗೆ ಒಳಗಾಗಿದ್ದರು.

ಮುಲಾಯಂ ಸಿಂಗ್ ಯಾದವ್ ಅಣ್ಣನ ಮಗಳು ಬಿಜೆಪಿ ಸೇರ್ಪಡೆ: ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆಮುಲಾಯಂ ಸಿಂಗ್ ಯಾದವ್ ಅಣ್ಣನ ಮಗಳು ಬಿಜೆಪಿ ಸೇರ್ಪಡೆ: ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆ

ಉತ್ತರ ಪ್ರದೇಶದಲ್ಲಿ ಏಪ್ರಿಲ್ 15ರಿಂದ ನಾಲ್ಕು ಹಂತಗಳಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ.

Wife Of Unnao Rape Convicted Kuldeep Sengar To Contest On BJP Ticket In UP Panchayat Polls

ಕಳೆದ ವರ್ಷ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಕುಲದೀಪ್ ಸಿಂಗ್ ಸೆಂಗರ್, ಉತ್ತರ ಪ್ರದೇಶ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. 2020ರಲ್ಲಿ ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿಗೆ ಸಂಬಂಧಿಸಿದಂತೆ ಸೆಂಗರ್‌ಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ ದಂಡ ವಿಧಿಸಲಾಗಿತ್ತು. ಈ ಸಾವಿಗೆ ತಮ್ಮ ಸಂಬಂಧ ಇಲ್ಲ ಎಂದು ಸೆಂಗರ್ ವಾದಿಸಿದ್ದರು. 2017ರಲ್ಲಿ ಅಪ್ತಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸೆಂಗರ್ ಆಗಲೇ ಜೈಲಿನಲ್ಲಿದ್ದರು.

ಈ ಸಮಯದಿಂದಲೂ ಅವರ ಪತ್ನಿ ಸಂಗೀತಾ ಪಂಚಾಯತ್ ಅಧ್ಯಕ್ಷೆಯಾಗಿದ್ದರು. ಪತಿ ಗಂಭೀರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವುದರಿಂದ ಸಂಗೀತಾ ಅವರಿಗೆ ಮತ್ತೆ ಟಿಕೆಟ್ ನೀಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಬಿಜೆಪಿ ಅವರನ್ನು ಮತ್ತೆ ಕಣಕ್ಕಿಳಿಸುತ್ತಿದೆ.

English summary
Unnao rape convicted, former BJP MLA Kuldeep Singh Sengar's wife Sangeeta to contest on BJP ticket in Uttar Pradesh Panchayat polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X