ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾರಣಾಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಣಕ್ಕೆ?

|
Google Oneindia Kannada News

Recommended Video

Lok Sabha Elections 2019: ವಾರಾಣಸಿಯಲ್ಲಿ ನರೇಂದ್ರ ಮೋದಿ ಪ್ರಿಯಾಂಕಾ ಗಾಂಧಿ ಮುಖಾಮುಖಿ | Oneindia Kannada

ರಾಯ್ಬರೇಲಿ, ಮಾರ್ಚ್ 29: ವಾರಣಾಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧೆಗಿಳಿಯುತ್ತಾರಾ? ಹಾಗೊಂದು ಅನುಮಾನ ಏಳುವಂಥ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಯ್ಬರೇಲಿ ಕ್ಷೇತ್ರದಲ್ಲಿ ಗುರುವಾರ ಪ್ರಚಾರ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿ, ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸುತ್ತಿದ್ದರು. ಈ ಸಂದರ್ಭದಲ್ಲಿ, 'ನೀವು ರಾಯ್ಬರೇಲಿಯಿಂದ ಸ್ಪರ್ಧಿಸಿ' ಎಂದು ಪ್ರಿಯಾಂಕಾ ಅವರ ಬಳಿ ಕಾರ್ಯಕರ್ತರೊಬ್ಬರು ಮನವಿ ಮಾಡಿದರು.

ಮಹಾಮೈತ್ರಿಕೂಟದಲ್ಲಿ ಬಿರುಗಾಳಿ ಎಬ್ಬಿಸಿದ ಪ್ರಿಯಾಂಕಾ ಗಾಂಧಿ ಹೇಳಿಕೆಮಹಾಮೈತ್ರಿಕೂಟದಲ್ಲಿ ಬಿರುಗಾಳಿ ಎಬ್ಬಿಸಿದ ಪ್ರಿಯಾಂಕಾ ಗಾಂಧಿ ಹೇಳಿಕೆ

Will it be Narendra Modi V/s Priyanka Gandhi in Varanasi?

ಅವರಿಗೆ ಉತ್ತರ ನೀಡಿದ ಪ್ರಿಯಾಂಕಾ ಗಾಂಧಿ, 'ರಾಯ್ಬರೇಲಿಯಲ್ಲಿ ಯಾಕೆ? ವಾರಣಾಸಿಯಲ್ಲಿ ನಿಂತರಾಗದೇ?' ಎಂದು ನಗುತ್ತಲೇ ಕಾರ್ಯಕರ್ತರಿಗೆ ಪ್ರತಿಕ್ರಿಯೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸುತ್ತಿದ್ದು, 2014 ರಲ್ಲೂ ಅವರು ಈ ಕ್ಷೇತ್ರದಲ್ಲೇ ಗೆಲುವು ಸಾಧಿಸಿದ್ದರು. ಈ ವರ್ಷ ವಾರಣಾಸಿಯಲ್ಲಿ ಬಿಜೆಪಿ ತನ್ನ ಟಿಕೆಟ್ ಘೋಷಣೆ ಮಾಡಿದ್ದರೂ, ಕಾಂಗ್ರೆಸ್ ಹಾಗೂ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಕೂಟಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸಿಲ್ಲ.

ಲೋಕಸಭಾ ಚುನಾವಣೆಗೆ ಸ್ಪರ್ಧೆ : ಮೌನ ಮುರಿದ ಪ್ರಿಯಾಂಕಾ ಗಾಂಧಿಲೋಕಸಭಾ ಚುನಾವಣೆಗೆ ಸ್ಪರ್ಧೆ : ಮೌನ ಮುರಿದ ಪ್ರಿಯಾಂಕಾ ಗಾಂಧಿ

ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಅಜಯ್ ರೈ ಸ್ಪರ್ಧಿಸಿದ್ದರೆ, ಎಎಪಿಯ ಅರವಿಂದ್ ಕೇಜ್ರಿವಾಲ್ ಅವರೂ ಕಣಕ್ಕಿಳಿದು ಸೋತಿದ್ದರು.

ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಲೋಕಸಭಾ ಕ್ಷೇತ್ರ(80)ಗಳಿದ್ದು, ನರೇಂದ್ರ ಮೋದಿ ಅವರು ಇಲ್ಲಿಂದ ಸ್ಪರ್ಧಿಸಿದರೆ ಬಿಜೆಪಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬಹುದು ಎಂಬುದು ಪಕ್ಷದ ಲೆಕ್ಕಾಚಾರ. 2014 ರ ಲೋಕಸಭಾ ಚುನಾವಣೆಯಲ್ಲ 80 ರಲ್ಲಿ 71 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Will it be a contest between Narendra Modi and Priyanka Gandhi in Varanasi? Priyanka Gandhi herself asked party workers that, 'why not Varanasi' when the told her that they want her to contest from Raebareli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X