ಯುವತಿಯ ಮಾರಾಟ, ಸಾಮೂಹಿಕ ಅತ್ಯಾಚಾರ, ಅವಮಾನ ಸಹಿಸದೆ ಆತ್ಮಹತ್ಯೆಗೆ ಯತ್ನ
ಮೀರತ್, ಮೇ 13 : ಸ್ವಂತ ತನ್ನ ತಂದೆ ಮತ್ತು ಸೋದರತ್ತೆಯಿಂದ ಮಾರಾಟ ಮಾಡಲಾದ 20ರ ಆಸುಪಾಸಿನ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದ್ದು, ಅವಮಾನ ಸಹಿಸಲಾಗದೆ ಆ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭೀಭತ್ಸ ಘಟನೆ ಮೀರತ್ ನಲ್ಲಿ ಜುರಿಗಿದೆ.
ಹಣದ ಆಸೆಗೆ ಬಿದ್ದ ಅಪ್ಪ, ತನ್ನ ಮಗಳನ್ನು ಕೇವಲ 10 ಸಾವಿರ ರುಪಾಯಿಗೆ ಮಾರಾಟ ಮಾಡಿದ್ದಾನೆ. ಮಾರಾಟದ ನಂತರ ಆಕೆಯನ್ನು ಇಟ್ಟುಕೊಂಡಿದ್ದ ವ್ಯಕ್ತಿ ಮತ್ತು ಆತನ ಸ್ನೇಹಿತರು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇಷ್ಟು ಸಾಲದೆಂಬಂತೆ, ದೂರು ನೀಡಲು ಹೋದಾಗ ಪೊಲೀಸರು ಕೂಡ ದೂರು ಸ್ವೀಕರಿಸಿಲ್ಲ.
ಇದರಿಂದ ಬೇಸತ್ತ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಶೇ.80ರಷ್ಟು ಸುಟ್ಟಗಾಯದಿಂದ ಬಳಲುತ್ತಿರುವ ಆಕೆ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸಿದ್ದಾಳೆ. ಲೈಂಗಿಕವಾಗಿ, ಮಾನಸಿಕವಾಗಿ ದೌರ್ಜನ್ಯಕ್ಕೊಳಗಾದ ಆಕೆಯ ಕಥೆ ನಿಜಕ್ಕೂ ಕರುಳು ಹಿಂಡುವಂತಿದೆ.

ಉತ್ತರ ಪ್ರದೇಶದ ಹಾಪುರ ಗ್ರಾಮದ ನಿವಾಸಿಯಾಗಿರುವ ಮಹಿಳೆಯನ್ನು, ಆಕೆಯ ಗಂಡ ತೀರಿಕೊಂಡ ಮೇಲೆ ಆಕೆಯ ಅಪ್ಪನೇ ದುರಾಸೆಗಾಗಿ ಕೇವಲ 10 ಸಾವಿರ ರುಪಾಯಿಗಾಗಿ ಮಾರಾಟ ಮಾಡಿದ್ದಾನೆ. ಆಕೆಯನ್ನು ಕೊಳ್ಳಲು ಸಾಲ ಮಾಡಿದ್ದ ವ್ಯಕ್ತಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಮಹಿಳೆಯನ್ನು ಸಾಲ ನೀಡಿದವರ ಮನೆಗೆ ಕೆಲಸಕ್ಕೆಂದು ನೇಮಿಸಿದ್ದಾನೆ.
ಆಕೆಯ ನರಕ ಯಾತನೆ ಅಲ್ಲಿಯೂ ಮುಂದುವರಿದಿದೆ. ಸಾಲ ಕೊಟ್ಟಿದ್ದ ವ್ಯಕ್ತಿಗಳೆಲ್ಲ, ಕೆಲಸ ಮಾಡಿಸಿಕೊಂಡಿದ್ದಕ್ಕಾಗಿ ಹಣವನ್ನೂ ನೀಡದೆ ಆಕೆಯನ್ನು ಚಿತ್ರಹಿಂಸೆಗೆ ಗುರಿಪಡಿಸಿ ಅತ್ಯಾಚಾರ ಎಸಗಿದ್ದಾರೆ. ತನ್ನ ಸಹಾಯಕ್ಕೆ ಕಡೆಗೆ ಪೊಲೀಸರು ಬಾರದಿದ್ದಾಗ ಅನ್ಯ ದಾರಿಯಿಲ್ಲದೆ ಜೀವ ಕಳೆದುಕೊಳ್ಳುವ ಪ್ರಯತ್ನಕ್ಕೆ ಆಕೆ ಕೈಹಾಗಿದ್ದಾಳೆ.
ಯುವತಿಯ ಕಥೆಯನ್ನು ಕೇಳಿದ ದೆಹಲಿಯ ಮಹಿಳಾ ಆಯೋಗ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, 14 ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗುವಂತೆ ಮಾಡಿದೆ. ಹಾಪುರ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ತನಿಖೆಯನ್ನು ಆರಂಭಿಸಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಲ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದು, ಸಂತ್ರಸ್ತ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಕೋರಿದ್ದಾರೆ.
ಅತ್ಯಾಚಾರಿಗಳಿಂದ ಮಾತ್ರವಲ್ಲ, ಅತ್ಯಾಚಾರ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸಲು ನಿರಾಕರಿಸಿದ ಉತ್ತರ ಪ್ರದೇಶದ ಪೊಲೀಸರಿಂದ ಕೂಡ ನಂಬಲಸಾಧ್ಯ ರೀತಿಯಲ್ಲಿ ಕಿರುಕುಳ ಅನುಭವಿಸಿದ್ದಾರೆ. ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ ಪೊಲೀಸರಿಗೆ ನಾಚಿಕೆಯಾಗಬೇಕು. ಆಕೆ ದಹನ ಮಾಡಿಕೊಳ್ಳಲು ಯತ್ನಿಸಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸರೂ ಕಾರಣ ಎಂದು ಸ್ವಾತಿ ಅವರು ಪತ್ರದಲ್ಲಿ ಬರೆದಿದ್ದಾರೆ.
ಸಂತ್ರಸ್ತ ಯುವತಿಗೆ ಪರಿಹಾರ ದೊರಕಿಸಿಕೊಡಬೇಕು, ನ್ಯಾಯ ಸಿಗುವಂತಾಗಬೇಕು ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧವೂ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಲ್ಲಿ, ಮಹಿಳೆ ಪೊಲೀಸರನ್ನೂ ದೂರಿದ್ದು, ಅವರು ಹಣ ಪಡೆದು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗಳ ವಿರುದ್ಧ ದೂರು ಪಡೆಯಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications