ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಯುಪಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಯಶವಂತ್ ಸಿನ್ಹಾ ಭವಿಷ್ಯ

|
Google Oneindia Kannada News

ಲಕ್ನೋ ಫೆಬ್ರವರಿ 13: ಪಶ್ಚಿಮ ಯುಪಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಹಾಗೂ ಟಿಎಂಸಿಯ ಹಿರಿಯ ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರು ಭವಿಷ್ಯ ನುಡಿದಿದ್ದು, ಫೆ.10ರಂದು ನಡೆದಿರುವ ಚುನಾವಣೆಯ 58ಕ್ಷೇತ್ರಗಳಲ್ಲಿ 20 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಹೋಲಿಸಿದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಮೆಂಟ್‌ಗಳ ಕುರಿತು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಶವಂತ್ ಸಿನ್ಹಾ, ಕಾಶ್ಮೀರ, ಕೇರಳ ಅಥವಾ ಬಂಗಾಳ ರಾಜ್ಯಗಳಂತೆ ಯುಪಿ ಆದರೆ ಅದು ಅತ್ಯಂತ ಅದೃಷ್ಟಶಾಲಿ ಎಂದು ಹೇಳಿದರು. ಈ ರಾಜ್ಯಗಳು ಸಾಮಾಜಿಕ ಮತ್ತು ಆರ್ಥಿಕ ಸೂಚಕಗಳಿಗೆ ಸಂಬಂಧಿಸಿದಂತೆ ಬಹಳ ಮುಂದಿವೆ ಎಂದರು.

ಚುನಾವಣೆ ಸಮೀಪದಲ್ಲೇ ಟಿಎಂಸಿ ಸೇರಿದ ಬಿಜೆಪಿ ಮಾಜಿ ಮುಖಂಡ ಯಶವಂತ್ ಸಿನ್ಹಾಚುನಾವಣೆ ಸಮೀಪದಲ್ಲೇ ಟಿಎಂಸಿ ಸೇರಿದ ಬಿಜೆಪಿ ಮಾಜಿ ಮುಖಂಡ ಯಶವಂತ್ ಸಿನ್ಹಾ

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ವಿಫಲವಾದರೆ ಉತ್ತರ ಪ್ರದೇಶವು ಕೇರಳ, ಪಶ್ಚಿಮ ಬಂಗಾಳ ಮತ್ತು ಕಾಶ್ಮೀರವಾಗಲಿದೆ ಎಂಬ ಆದಿತ್ಯನಾಥ್ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆಯನ್ನು ಕೇಳಿದಾಗ ಸಿನ್ಹಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. "ಯೋಗಿ ಆದಿತ್ಯನಾಥ್ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ" ಎಂದು ಹೇಳಿದರು.

Yashwant Sinha predicts BJP will lose in western UP
ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಬಿಜೆಪಿ ಮುಖಂಡ ಯಶವಂತ್ ಸಿನ್ಹಾ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ 83 ವರ್ಷದ ಯಶವಂತ್ ಸಿನ್ಹಾ ಅವರು 2018ರಲ್ಲಿ ಬಿಜೆಪಿ ತೊರೆದಿದ್ದರು.ಕೆಲ ತಿಂಗಳಿನಿಂದ ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಲವು ಮುಖಂಡರು ಹಾಗೂ ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಟಿಎಂಸಿಗೆ ಹಿರಿಯ ಮುಖಂಡ ಯಶವಂತ್ ಸಿನ್ಹಾ ಸೇರ್ಪಡೆಯಾಗಿರುವುದು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಬಲ ತಂದುಕೊಟ್ಟಂತಾಗಿದೆ.

ಈ ಬಾರಿ ಯುಪಿಯಲ್ಲಿ ಬಿಜೆಪಿ ಕಷ್ಟದ ವಾತಾವರಣವನ್ನು ಎದುರಿಸುತ್ತಿದೆ ಎಂದು ಅವರು (ಆದಿತ್ಯನಾಥ್) ಗ್ರಹಿಸಿದ್ದಾರೆ ಎಂದು ಬಿಜೆಪಿಯ ಮಾಜಿ ನಾಯಕ ಸಿನ್ಹಾ ಹೇಳಿದ್ದಾರೆ. ಜೊತೆಗೆ ಪಶ್ಚಿಮ ಯುಪಿಯಲ್ಲಿ ಮೊದಲ ಹಂತದ ಮತದಾನದಲ್ಲಿ ಬಿಜೆಪಿ 58 ಸ್ಥಾನಗಳಲ್ಲಿ 20 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಸಿನ್ಹಾ ಹೇಳಿದ್ದಾರೆ. ಕಳೆದ 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಪ್ರದೇಶದ 58 ಸ್ಥಾನಗಳ ಪೈಕಿ 53 ಸ್ಥಾನಗಳನ್ನು ಪಡೆದುಕೊಂಡಿತ್ತು. "ಯೋಗಿ ಹೇಳಿಕೆಯ ಹಿಂದಿನ ನಿಜವಾದ ಉದ್ದೇಶ (ಮತ) ಧ್ರುವೀಕರಣ" ಎಂದು ಅವರು ಹೇಳಿದ್ದಾರೆ.

ಹಿಂದೂ-ಮುಸ್ಲಿಂ-ಕ್ರೈಸ್ತರು, ಜಿನ್ನಾ ಮತ್ತು ಪಾಕಿಸ್ತಾನದಂತಹ ವಿಷಯಗಳಲ್ಲಿ ಮತದಾರರನ್ನು ಧ್ರುವೀಕರಿಸುವ ಮೂಲಕ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ಅವರು ಆರೋಪಿಸಿದರು. ಮೋದಿ ಸರ್ಕಾರವು ತನ್ನ ಕಳಪೆ ಆರ್ಥಿಕ ಮತ್ತು ಹಣಕಾಸು ನಿರ್ವಹಣೆಯಿಂದ ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ, ಇದು ಹಣದುಬ್ಬರ ಮತ್ತು ಅಭೂತಪೂರ್ವ ನಿರುದ್ಯೋಗಕ್ಕೆ ಕಾರಣವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಸಿನ್ಹಾ, ಉತ್ತರಾಖಂಡದಲ್ಲಿ ಕಾಂಗ್ರೆಸ್‌ಗೆ ಉತ್ತಮ ನಿರೀಕ್ಷೆಯಿದೆ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಿಕಟ ಪೈಪೋಟಿ ನಡೆಯಲಿದೆ ಎಂದು ಹೇಳಿದರು. "ಬಿಜೆಪಿ ಪಂಜಾಬ್‌ನಲ್ಲಿ ಎಲ್ಲಿಯೂ ಇಲ್ಲ" ಎಂದು ಅವರು ಪ್ರತಿಪಾದಿಸಿದರು. ಅಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ನೇರ ಹಣಾಹಣಿಯಲ್ಲಿವೆ ಎಂದು ಹೇಳಿದರು. ಮಣಿಪುರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದರು.

ರಾಜ್ಯಪಾಲರ ಹಸ್ತಕ್ಷೇಪದ ಕುರಿತು ಮಾತನಾಡಿದ ಸಿನ್ಹಾ, ''ಧನಕರ್ ಅವರು ಸರ್ಕಾರದ ಪ್ರತಿಯೊಂದು ನಡೆಯಲ್ಲೂ ಮಧ್ಯಪ್ರವೇಶಿಸುತ್ತಿದ್ದಾರೆ, ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ ಮತ್ತು ಸ್ವೀಕಾರಾರ್ಹವಲ್ಲ" ಎಂದು ಆರೋಪಿಸಿದರು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಮಾಜಿ ಕೇಂದ್ರ ಸಚಿವರೂ ಸಹ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆದೇಶದಂತೆ ಧನಕರ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಧನಕರ್ ಅವರು ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಹಸ್ತಕ್ಷೇಪದಿಂದ ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಜೊತೆಗೆ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ರಾಜ್ಯ ಸರ್ಕಾರಗಳ ಕಾರ್ಯನಿರ್ವಹಣೆಯಲ್ಲಿ ರಾಜ್ಯಪಾಲರ ಹಸ್ತಕ್ಷೇಪದ ಬಗ್ಗೆ ಸಿನ್ಹಾ ಟೀಕಿಸಿದರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ 12 ವರ್ಷಗಳ ಅವಧಿಯಲ್ಲಿ ಅವರು ಎಂದಿಗೂ ವಿಚಲಿತರಾಗಲಿಲ್ಲ ಎಂದು ಸಿನ್ಹಾ ಹೇಳಿದ್ದಾರೆ.

English summary
Former Union Finance Minister and Senior Vice-President of TMC, Yashwant Sinha on Saturday predicted that BJP would lose heavily in western UP and claimed that it might just win 20 out of 58 seats which went to the polls on February 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X