‘ಯುಪಿ, ಬಿಹಾರ ಕೆ ಭಯ್ಯಾ’ ಹೇಳಿಕೆಗೆ ಯೋಗಿ ಆದಿತ್ಯನಾಥ್ ತಿರುಗೇಟು
ಲಕ್ನೋ ಫೆಬ್ರವರಿ 17: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ 'ಯುಪಿ, ಬಿಹಾರ ಕೆ ಭಯ್ಯಾ' ಹೇಳಿಕೆಗೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮತ್ತು ಪಂಜಾಬ್ ಸಿಎಂ ಮತಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರು 'ಉತ್ತರ ಪ್ರದೇಶ, ಬಿಹಾರ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ' ಎಂದು ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ಮಾಡಿದ್ದರು. ಅವರ ಈ ಹೇಳಿಕೆಯು ಬಿಜೆಪಿಯ ಕೆಂಗಣ್ಣಿಗೆ ಕಾರಣವಾಗಿದೆ. ಪಂಜಾಬ್ ಸಿಎಂ ಹೇಳಿಕೆಯು ಬಿಹಾರ ಮತ್ತು ಯುಪಿ ಜನರ ವಿರುದ್ಧವಾಗಿದೆ ಎಂದು ಬಿಜೆಪಿ ಪಕ್ಷ ಹೇಳಿಕೊಂಡಿದೆ. ಅಲ್ಲದೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದ್ದರು. ಚನ್ನಿ ಅವರ ಈ ಕಾಮೆಂಟ್ ರಾಜಕೀಯ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಯಾವುದೇ ಮಹಿಳೆ ಆಯ್ಕೆಯಿಂದ ಹಿಜಾಬ್ ಧರಿಸುವುದಿಲ್ಲ: ಯೋಗಿ ಆದಿತ್ಯನಾಥ್
ಇಂಡಿಯಾ ಟುಡೇ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ಮತ್ತು ಚರಂಜಿತ್ ಸಿಂಗ್ ಚನ್ನಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಅವರ ಪಕ್ಷ "ಗಾಂಧಿ ಮತ್ತು ನೆಹರು ಹೆಸರಿನಲ್ಲಿ ದೇಶಕ್ಕೆ ಪದೇ ಪದೇ ದ್ರೋಹ ಮಾಡಿದೆ" ಎಂದು ಆರೋಪಿಸಿದ್ದಾರೆ. "ಜಾತಿವಾದ್, ಕ್ಷೇತ್ರವಾದ್, ಭಾಷಾವಾದ್, ನಕ್ಸಲ್ವಾದ್, (ಜಾತಿವಾದ, ಪ್ರಾದೇಶಿಕತೆ, ಭಾಷಾವಾದ, ಭಯೋತ್ಪಾದನೆ, ನಕ್ಸಲಿಸಂ), ಇವೆಲ್ಲವೂ ಕಾಂಗ್ರೆಸ್ ಭಾರತಕ್ಕೆ ಕೊಟ್ಟ ಗಾಯಗಳಾಗಿವೆ. ಮತ್ತು ಕಾಂಗ್ರೆಸ್ ಇಂದು ತಾನು ಬಿತ್ತಿದ್ದನ್ನು ಬೆಳಸಿ ಕೊಯ್ಯುತ್ತಿದೆ ಎಂದು ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.

ಚರಂಜಿತ್ ಸಿಂಗ್ ಚನ್ನಿ ಅವರ "ಭಯ್ಯಾ" ಕಾಮೆಂಟ್ ಬಗ್ಗೆ ಮಾತನಾಡುತ್ತಾ, ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಪಂಜಾಬ್ ಸಿಎಂ ಸಂತ ರವಿದಾಸ್ ಅವರಿಂದ ಸ್ವಲ್ಪ ಸ್ಫೂರ್ತಿ ಪಡೆಯಬೇಕಿತ್ತು ಮತ್ತು ಅಂತಹ ಹೇಳಿಕೆಯನ್ನು ಮಾಡುವುದನ್ನು ತಡೆಯಬೇಕು ಎಂದು ಹೇಳಿದರು. ರವಿದಾಸ್ ಜಯಂತಿಯಂದು ಸಿಎಂ ಚನ್ನಿ ನಿನ್ನೆ ವಾರಣಾಸಿಗೆ ಬಂದಿದ್ದರು. ಅವರು ಸಂತ ರವಿದಾಸ್ ಅವರಿಂದ ಸ್ಫೂರ್ತಿ ಪಡೆದಿದ್ದರೆ, ಅವರು ಅಂತಹ ನಕಾರಾತ್ಮಕ ಹೇಳಿಕೆಯನ್ನು ನೀಡುತ್ತಿರಲಿಲ್ಲ ಎಂದಿದ್ದಾರೆ.
ಇದೇ ವೇಳೆ 'ಮತಬ್ಯಾಂಕ್‌ಗಾಗಿ ಕಾಂಗ್ರೆಸ್ ದೇಶವನ್ನು ವಿಭಜಿಸಲು ಬಯಸುತ್ತಿದೆ' ಎಂದು ಸಿಎಂ ಯೋಗಿ ಆದಿತ್ಯನಾಥ್ ಸಂದರ್ಶನದಲ್ಲಿ ಹೇಳಿದ್ದಾರೆ.
ಈ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 'ಯೋಗಿ' (ಸನ್ಯಾಸಿ) ಅಲ್ಲ, ಅವರೊಬ್ಬರು 'ಭೋಗಿ' (ಲೌಕಿಕ ವ್ಯಕ್ತಿ) ಎಂದು ಪ್ರತಿಪಾದಿಸಿದರು.
ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರನ್ನು ಜೀವಂತವಾಗಿ ಸುಡಲಾಗುತ್ತದೆ ಮತ್ತು ರೈತರನ್ನು ಕೊಲ್ಲಲಾಗುತ್ತದೆ. ಅಲ್ಲಿನ ಸಿಎಂ 'ಯೋಗಿ' ಅಲ್ಲ 'ಭೋಗಿ'. ಭಾರತವನ್ನು ಉಳಿಸಬೇಕಾದರೆ, ಯುಪಿಯನ್ನು ಮೊದಲು ಉಳಿಸಬೇಕು" ಎಂದು ಬ್ಯಾನರ್ಜಿ ಹೇಳಿದರು. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಪರ ಪ್ರಚಾರ ಮಾಡಲು ಕಳೆದ ವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ರಾಷ್ಟ್ರದ 'ದೊಡ್ಡ ಹಿತಾಸಕ್ತಿ'ಗಾಗಿ ಯುಪಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಮ್ಮ ಪಕ್ಷ ನಿರ್ಧರಿಸಿದೆ ಎಂದು ಹೇಳಿದರು.
Recommended Video
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications