ಅಯೋಧ್ಯೆಯಲ್ಲಿ ಹನುಮನಿಗೆ ಯೋಗಿ ವಿಶೇಷ ಪೂಜೆ

ಲಕ್ನೋ, ಆಗಸ್ಟ್ 03: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ಶಂಕು ಸ್ಥಾಪನೆ ಮಾಡಲಾಗುತ್ತದೆ. ಕಾರ್ಯಕ್ರಮದ ಕೊನೆಯ ಹಂತದ ಸಿದ್ಧತೆಗಳನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಶೀಲನೆ ನಡೆಸಿದರು.

Recommended Video

      ರಾಮಮಂದಿರ ನಿರ್ಮಾಣಕ್ಕೆ ಮೋದಿ ಅಡಿಗಲ್ಲು | Oneindia Kannada

      ಸೋಮವಾರ ಮಧ್ಯಾಹ್ನ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಆಗಮಿಸಿದರು. ಮೊದಲು ಅವರು ಹನುಮಾನ್ ಗಡಿ ದೇವಾಲಯಕ್ಕೆ ಭೇಟಿ ನೀಡಿದರು. ಅಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಶಂಕು ಸ್ಥಾಪನೆ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದರು.

      ಅಯೋಧ್ಯೆಯಲ್ಲಿರುವ ಹನುಮಾನ್ ಗಡಿ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಬುಧವಾರ ಭೇಟಿ ನೀಡಲಿದ್ದಾರೆ. ಈಗಾಗಲೇ ದೇವಾಲಯವನ್ನು ಸ್ಯಾನಿಟೈಸ್ ಮಾಡಲಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮೋದಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.

       Yogi Adityanath Offers Prayer At Ayodhya Hanuman Garhi Temple

      ಬಿಗಿ ಪೊಲೀಸ್ ಬಂದೋಬಸ್ತ್ : ಆಗಸ್ಟ್ 5ರ ಬುಧವಾರ ರಾಮ ಮಂದಿರ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯುವ ಹಿನ್ನಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

       Yogi Adityanath Offers Prayer At Ayodhya Hanuman Garhi Temple

      ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಅಯೋಧ್ಯೆಗೆ ಭೇಟಿ ನೀಡಬೇಕಿತ್ತು. ಆದರೆ, ಸಂಪುಟದ ಸಹೋದ್ಯೋಗಿ ಕಮಲ್ ರಾಣಿ ವರುಣ್ ಕೋವಿಡ್‌ನಿಂದ ಮೃತಪಟ್ಟ ಕಾರಣಕ್ಕಾಗಿ ಪ್ರವಾಸವನ್ನು ರದ್ದು ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+