ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಆಗುವ ಮುನ್ನವೇ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ ಯೋಗಿ ಆದಿತ್ಯನಾಥ್

|
Google Oneindia Kannada News

ಲಕ್ನೋ ಮಾರ್ಚ್ 22: ಇತ್ತೀಚೆಗಷ್ಟೇ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿದ ನಂತರ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಯೋಗಿ ಆದಿತ್ಯನಾಥ್ ಅವರು ವಿಧಾನ ಪರಿಷತ್ ಸದಸ್ಯತ್ವಕ್ಕೆ (ಎಂಎಲ್‌ಸಿ) ರಾಜೀನಾಮೆ ನೀಡಿದ್ದಾರೆ. ವಾಸ್ತವವಾಗಿ ಗೋರಖ್‌ಪುರ ನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ನಂತರ, ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜೀನಾಮೆಯನ್ನು ವಿಧಾನ ಪರಿಷತ್ತಿನ ಅಧ್ಯಕ್ಷರಿಗೆ ಕಳುಹಿಸಿದ್ದರು, ಅದನ್ನು ಅಂಗೀಕರಿಸಲಾಗಿದೆ.

ಈ ಸಂಬಂಧ ವಿಧಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಿಂಗ್ ಅವರು ಅಧಿಸೂಚನೆಯನ್ನೂ ಹೊರಡಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರ ವಿಧಾನ ಪರಿಷತ್ತಿನ ಸ್ಥಾನವನ್ನು ಮಾರ್ಚ್ 22 ರಿಂದ ಖಾಲಿ ಎಂದು ಪರಿಗಣಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಯೋಗಿ ಆದಿತ್ಯನಾಥ್ ಅವರು ಸೆಪ್ಟೆಂಬರ್ 2017 ರಲ್ಲಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾದರು. ಆಗ ಅವರು ಗೋರಖ್‌ಪುರದ ಸಂಸದರಾಗಿದ್ದರು. ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ 08 ಸೆಪ್ಟೆಂಬರ್ 2017 ರಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಗೆದ್ದರು. ಯೋಗಿ ಆದಿತ್ಯನಾಥ್ ಎಂಎಲ್‌ಸಿ ಆಗಿರುವಾಗಲೇ ಮುಖ್ಯಮಂತ್ರಿ ಹುದ್ದೆಯನ್ನು ಪೂರ್ಣಗೊಳಿಸಿದರು.

ಯುಪಿಯಲ್ಲಿ ಕಪಿಲ್ ಸಿಬಲ್ ಸೇರಿದಂತೆ ರಾಜ್ಯಸಭೆಯ 11 ಸ್ಥಾನಗಳು ತೆರವುಯುಪಿಯಲ್ಲಿ ಕಪಿಲ್ ಸಿಬಲ್ ಸೇರಿದಂತೆ ರಾಜ್ಯಸಭೆಯ 11 ಸ್ಥಾನಗಳು ತೆರವು

ರಾಜಕೀಯ ಗಣ್ಯರು ಭಾಗಿ

ರಾಜಕೀಯ ಗಣ್ಯರು ಭಾಗಿ

ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಇದೀಗ ಯೋಗಿ 2.0 ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಂತಿಮ ದಿನಾಂಕ ಹೊರಬಿದ್ದಿದೆ. ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ 25 ರಂದು ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುಪಿ ರಾಜಕೀಯದಲ್ಲಿ 37 ವರ್ಷಗಳ ನಂತರ, ಒಂದು ಪಕ್ಷವು ಸತತ ಎರಡನೇ ಬಾರಿಗೆ ಅಧಿಕಾರವನ್ನು ಪಡೆದುಕೊಳ್ಳುತ್ತಿದೆ.

ಎಕಾನಾ ಸ್ಟೇಡಿಯಂ ವಿಶೇಷತೆ

ಎಕಾನಾ ಸ್ಟೇಡಿಯಂ ವಿಶೇಷತೆ

ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಸಂಜೆ 4 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ (ಏಕಾನಾ ಸ್ಟೇಡಿಯಂ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಆದರೆ, ಸಂಪುಟದ ಸಂಪೂರ್ಣ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಮತ್ತು ಇದೇ ಪ್ರಮಾಣ ವಚನ ವಿಳಂಬಕ್ಕೆ ನಿಜವಾದ ಕಾರಣ ಎಂದು ನಂಬಲಾಗಿದೆ.

ಇದು ಭಾರತದ ಐದನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಒಟ್ಟಿಗೆ ಒಂದು ಸಾವಿರ ಕಾರ್ ಪಾರ್ಕಿಂಗ್ ಮಾಡಬಹುದು ಮತ್ತು ಐದು ಸಾವಿರ ದ್ವಿಚಕ್ರ ವಾಹನ ನಿಲುಗಡೆಗೆ ಅವಕಾಶವಿದೆ. ಈ ಕ್ರೀಡಾಂಗಣವು ಅಂತಾರಾಷ್ಟ್ರೀಯ ಮಟ್ಟದ ಫ್ಲಡ್ ಲೈಟ್‌ಗಳು, ಮಾಧ್ಯಮ ಕೇಂದ್ರ ಇತರ ಸೌಲಭ್ಯಗಳನ್ನು ಹೊಂದಿದೆ. ಈ ಕ್ರೀಡಾಂಗಣದ ವಿಶೇಷತೆ ಏನೆಂದರೆ ಮಳೆ ಬಂದ ಕೆಲವೇ ಗಂಟೆಗಳಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ನೀರನ್ನು ಹೊರತೆಗೆದು ಮೈದಾನವನ್ನು ಆಟವಾಡುವಂತೆ ಮಾಡಬಹುದು.

ವಿಪಕ್ಷ ನಾಯಕರಿಗೂ ಆಹ್ವಾನ

ವಿಪಕ್ಷ ನಾಯಕರಿಗೂ ಆಹ್ವಾನ

ಸುದ್ದಿ ಪ್ರಕಾರ, ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 200 ವಿವಿ ಅತಿಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದಲ್ಲದೇ ಈ ಪ್ರಮಾಣ ವಚನ ಸಮಾರಂಭಕ್ಕೆ 45 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ. ಮಾಜಿ ಸಿಎಂ ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್, ಬಿಎಸ್‌ಪಿ ವರಿಷ್ಠೆ ಮಾಯಾವತಿ ಸೇರಿದಂತೆ ಎಲ್ಲ ವಿಪಕ್ಷ ನಾಯಕರನ್ನು ಆಹ್ವಾನಿಸಲಾಗುವುದು. ಇನ್ನೂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶದ ಖ್ಯಾತ ಕೈಗಾರಿಕೋದ್ಯಮಿಗಳು, ಧಾರ್ಮಿಕ ಮುಖಂಡರು ಸೇರಿದಂತೆ ಸಮಾಜಸೇವಕರು, ಸಾಹಿತಿಗಳು, ಸಾಹಿತಿಗಳು, ವೃತ್ತಿಪರರು, ವೈದ್ಯರು, ಇಂಜಿನಿಯರ್‌ಗಳನ್ನೂ ಆಹ್ವಾನಿಸಲಾಗುತ್ತಿದೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ನೆನಪಿಗಾಗಿ ಬಿಜೆಪಿ ಮಾಡಿದ್ದು ಹೀಗೆ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ನೆನಪಿಗಾಗಿ ಬಿಜೆಪಿ ಮಾಡಿದ್ದು ಹೀಗೆ?

ಈ ಹಿಂದೆ ಏಕನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಎಂದು ಕರೆಯಲಾಗುತ್ತಿತ್ತು, ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ನಿಧನದ ನಂತರ ಯೋಗಿ ಸರ್ಕಾರ ಇದರ ಹೆಸರನ್ನು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಎಂದು ಬದಲಾಯಿಸಿತು.

English summary
After securing a majority in the recently concluded Uttar Pradesh Assembly elections, caretaker Chief Minister Yogi Adityanath will take oath as the CM again on March 25. Just before taking oath, Yogi Adityanath has resigned from the membership of the Legislative Council (MLC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X