ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಯೋಗಿ ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧೆ

|
Google Oneindia Kannada News

ಲಕ್ನೋ, ಜನವರಿ 15: ಮುಂದಿನ ತಿಂಗಳು ನಡೆಯಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯುಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Yogi Adityanath To Contest UP Polls From Gorakhpur

ಗೋರಖ್‌ಪುರದಿಂದ ಯೋಗಿ ಸ್ಪರ್ಧಿಸುವುದಾದರೆ ಅಯೋಧ್ಯೆಯಿಂದ ಯಾರು ಸ್ಪರ್ಧಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿ ಮೂಡಿದೆ. ಉತ್ತರಪ್ರದೇಶದಲ್ಲಿ ಏಳು ಹಂತದಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್​ ಬಿಡುಗಡೆ ಮಾಡಿದ್ದಾರೆ. ಹಾಗೇ, ಎರಡನೇ ಹಂತದಲ್ಲಿ 55 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಅದರ 38 ಅಭ್ಯರ್ಥಿಗಳ ಹೆಸರನ್ನೂ ಇಂದು ಬಿಡುಗಡೆ ಮಾಡಲಾಗಿದೆ.ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮೊದಲ ಹಂತಕ್ಕೆ ಪಕ್ಷವು 58 ರಲ್ಲಿ 57 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪಟ್ಟಿ ಮಾಡಿದೆ.

ಎರಡನೇ ಹಂತಕ್ಕೆ 55 ರಲ್ಲಿ 48 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಲಾಗುವುದು ಎಂದಿದ್ದಾರೆ. ಸಾಕಷ್ಟು ಚರ್ಚೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಕ್ಷದ ಉನ್ನತ ನಾಯಕರು ಚರ್ಚಿಸಿ ಈ ಬಗ್ಗೆ ತಿಳಿಸಿದ್ದಾರೆ.

ಗೋರಖ್​ ಪುರದಿಂದ ಈಗಾಗಲೇ ಐದು ಬಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿರುವ ಯೋಗಿ ಆದಿತ್ಯನಾಥ್ ಕ್ಷೇತ್ರದಲ್ಲಿ ಮೊದಲ ಬಾರಿ ವಿಧಾನಸಭಾ ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ.
ಪ್ರಸ್ತುತ ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಸದಸ್ಯರಾಗಿರುವ ಆದಿತ್ಯನಾಥ್ ಅವರು ಪಕ್ಷದ ನಾಯಕತ್ವ ನಿರ್ಧರಿಸುವ ಎಲ್ಲಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಇತ್ತೀಚೆಗೆ ಹೇಳಿದ್ದರು.

ಆದಿತ್ಯನಾಥ್ 1998 ರಿಂದ 2017 ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗುವವರೆಗೂ ಗೋರಖ್‌ ಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಗೋರಖ್‌ ಪುರ ನಗರ ಕ್ಷೇತ್ರವು ಬಿಜೆಪಿಗೆ ಅತ್ಯಂತ ಸುರಕ್ಷಿತ ಮತ್ತು ಯೋಗಿ ಆದಿತ್ಯನಾಥ್ ಅವರ ಭದ್ರಕೋಟೆಯಾಗಿರುವ ಗೋರಖನಾಥ ದೇವಾಲಯದ ಕಾರಣ, ಸಿಎಂ ಪ್ರಚಾರದಲ್ಲಿ ಹೆಚ್ಚು ಸಮಯ ಕಳೆಯಬೇಕಾಗಿಲ್ಲ.

ಅವರು ಯುಪಿಯಲ್ಲಿ ಉಳಿದ ಚುನಾವಣಾ ತಂತ್ರಗಳ ಮೇಲೆ ಕೇಂದ್ರೀಕರಿಸಬಹುದು. ಗೋರಖ್ ಪುರ ನಗರ ವಿಧಾನಸಭಾ ಕ್ಷೇತ್ರವು 1967ರಿಂದಲೂ ಜನಸಂಘ ಹಾಗೂ ಬಿಜೆಪಿಯ ಭದ್ರಕೋಟೆ ಕ್ಷೇತ್ರ. 1967ರಿಂದಲೂ ಈ ಕ್ಷೇತ್ರದಲ್ಲಿ ಜನಸಂಘ ಹಾಗೂ ಬಿಜೆಪಿ ಅಭ್ಯರ್ಥಿಗಳೇ ನಿರಂತರವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಸಿಎಂ ಯೋಗಿ ಆದಿತ್ಯನಾಥ್ ವಿಧಾನಸಭಾ ಚುನಾವಣೆಗೆ ಅತ್ಯಂತ ಸುರಕ್ಷಿತ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಅಗ್ರ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು 2012ರಲ್ಲಿ ಗೆದ್ದಿದ್ದ ಸಿರತ್ತು ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ.

ಬಿಜೆಪಿಯ ಘೋಷಣೆಗೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿದ್ದು, "ಜನರು ಯೋಗಿ ಆದಿತ್ಯನಾಥ್ ಅವರನ್ನು ಗೋರಖ್‌ಪುರಕ್ಕೆ ಕಳುಹಿಸಬೇಕಾಗಿತ್ತು, ಆದರೆ ಜನರ ಮುಂದೆ ಬಿಜೆಪಿ ಅವರನ್ನು ವಾಪಸ್ ಗೋರಖ್ ಪುರಕ್ಕೆ ಕಳುಹಿಸಿದೆ" ಎಂದು ಹೇಳಿದ್ದಾರೆ.

ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅಖಿಲೇಶ್ ಯಾದವ್ ಈ ಹಿಂದೆ ಹೇಳಿದ್ದರು, ಆದರೆ ಇತ್ತೀಚೆಗೆ ಈ ವಿಷಯದಲ್ಲಿ ತಮ್ಮ ಪಕ್ಷದ ನಿರ್ಧಾರದಂತೆ ಹೋಗುವುದಾಗಿ ಮತ್ತು ಆಯ್ಕೆಯಾದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ.


ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ:

- ಮೊದಲ ಹಂತದಲ್ಲಿ ಫೆಬ್ರವರಿ 10ರಂದು ಮತದಾನ

- ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ

- ಮೂರನೇ ಹಂತದಲ್ಲಿ ಫೆಬ್ರವರಿ 20ರಂದು ಮತದಾನ

- ನಾಲ್ಕನೇ ಹಂತದಲ್ಲಿ ಫೆಬ್ರವರಿ 23ರಂದು ಮತದಾನ

- ಐದನೇ ಹಂತದಲ್ಲಿ ಫೆಬ್ರವರಿ 27ರಂದು ಮತದಾನ

- ಆರನೇ ಹಂತದಲ್ಲಿ ಮಾರ್ಚ್ 3ರಂದು ಮತದಾನ

- ಏಳನೇ ಹಂತದಲ್ಲಿ ಮಾರ್ಚ್ 7ರಂದು ಮತದಾನ

ದೇಶದಲ್ಲಿ ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದಕ್ಕೆ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಅತಿಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ರಾಜ್ಯದ ಮತದಾರರ ಮನ ಗೆಲ್ಲುವುದಕ್ಕಾಗಿ ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಸಾಕಷ್ಟು ಯೋಜನೆಗಳಿಗೆ ಚಾಲನೆ ನೀಡಿದ್ದರು.

English summary
Uttar Pradesh Chief Minister Yogi Adityanath will contest the upcoming polls in the state from Gorakhpur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X