ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕೊಡುಗೆ ನೀಡಿದ ಯೋಗಿ ಸರ್ಕಾರ
ಲಕ್ನೋ,ಆಗಸ್ಟ್.6: ರಕ್ಷಾಬಂಧನದ ಕೊಡುಗೆಯಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ.
ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆ ಘೋಷಣೆಯಾಗಿದೆ. ರಕ್ಷಾಬಂಧನದ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಅವರ ಕಚೇರಿ ಟ್ವೀಟ್ ಮಾಡಿದೆ.
ಆಗಸ್ಟ್ 10 ರ ಮಧ್ಯರಾತ್ರಿಯಿಂದ ಆಗಸ್ಟ್ 12 ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು ಗುರುತಿಸುವ ಉದ್ದೇಶದಿಂದ ಈ ಘೋಷಣೆ ಬಂದಿದೆ ಎನ್ನಲಾಗಿದೆ. ಇದರ ಹಿನ್ನೆಲೆಯಲ್ಲಿ 48 ಗಂಟೆಗಳ ಅವಧಿಗೆ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ.
ಇದಕ್ಕೂ ಮುನ್ನ, ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಮಹಿಳೆಯರ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು. ನಾಯ್ಡು ಬೆಂಗಳೂರಿಗೆ ಅಧಿಕೃತ ಪ್ರವಾಸ ವೇಳೆ ಸ್ಥಳೀಯ ವಿವಿಧ ಶಾಲೆಗಳ ಶಾಲಾ ಮಕ್ಕಳೊಂದಿಗೆ ರಕ್ಷಾಬಂಧನ ಆಚರಿಸಿದ್ದರು.

ಮಹಿಳೆಯರ ಘನತೆಯನ್ನು ಎತ್ತಿಹಿಡಿಯಲು ಕ್ರಮ
ಈ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದ ನಾಯ್ಡು, ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ. ಈ ಮಂಗಳಕರ ದಿನದಂದು, ಮಹಿಳೆಯರ ಘನತೆಯನ್ನು ಎತ್ತಿಹಿಡಿಯಲು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಸಂಕಲ್ಪ ಮಾಡೋಣ" ಎಂದು ಉಪಾಧ್ಯಕ್ಷರ ಕಚೇರಿ ಟ್ವೀಟ್ ಮಾಡಿದೆ.

ಮಹಿಳೆಯರಿಗೆ 36 ಗಂಟೆಗಳ ಉಚಿತ ಪ್ರಯಾಣ
ಜುಲೈ 30ರಂದು ರಕ್ಷಾಬಂಧನದ ಕೊಡುಗೆಯಾಗಿ ಹರಿಯಾಣ ಸರ್ಕಾರವೂ ತನ್ನ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ 36 ಗಂಟೆಗಳ ಉಚಿತ ಬಸ್ ಪ್ರಯಾಣವನ್ನು ಘೋಷಿಸಿತ್ತು. ಸರ್ಕಾರದ ಪ್ರಕಾರ ಉಚಿತ ಬಸ್ ಪ್ರಯಾಣವು ಆಗಸ್ಟ್ 10ರ ಮಧ್ಯಾಹ್ನ 12 ರಿಂದ ಆಗಸ್ಟ್ 11ರ ಮಧ್ಯರಾತ್ರಿ 12ರವರೆಗೆ ಜಾರಿಯಲ್ಲಿರಲಿದೆ ಎಂದು ಘೋಷಣೆ ಹೊರಡಿಸಲಾಗಿದೆ.

10 ಆಗಸ್ಟ್‌ರಿಂದ 11ರವರೆಗೆ ಜಾರಿ
ಈ ಬಗ್ಗೆ ಈ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿ, "ರಾಜ್ಯದ ಮಹಿಳೆಯರಿಗೆ ರಕ್ಷಾಬಂಧನದ ಉಡುಗೊರೆಯನ್ನು ನೀಡುತ್ತಾ, ಹರಿಯಾಣ ಸರ್ಕಾರವು ಈ ವರ್ಷವೂ ಹರಿಯಾಣ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲು ನಿರ್ಧರಿಸಿದೆ. ಉಚಿತ ಪ್ರಯಾಣದ ಸೌಲಭ್ಯವು 10 ಆಗಸ್ಟ್, 2022 ರಂದು ಮಧ್ಯಾಹ್ನ 12 ರಿಂದ 11 ಆಗಸ್ಟ್, 2022 ರ ಮಧ್ಯರಾತ್ರಿ 12 ರವರೆಗೆ ಜಾರಿಯಲ್ಲಿರಲಿದೆ," ಎಂದು ಹೇಳಿತ್ತು.

ಕೋವಿಡ್ ಸಾಂಕ್ರಾಮಿಕದಿಂದ ನಿಲ್ಲಿಸಲಾಗಿತ್ತು
ಹರಿಯಾಣದಲ್ಲಿ ಈ ವರ್ಷ ಒಡಹುಟ್ಟಿದವರ ನಡುವಿನ ಪ್ರೀತಿಯ ಬಾಂಧವ್ಯವನ್ನು ಸೂಚಿಸುವ ರಕ್ಷಾ ಬಂಧನ ಹಬ್ಬವನ್ನು ಆಗಸ್ಟ್ 11 ರಂದು ಆಚರಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಹರಿಯಾಣ ರಾಜ್ಯದಲ್ಲಿ ರಕ್ಷಾ ಬಂಧನ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಉಡುಗೊರೆಗಳನ್ನು ನೀಡಲಾಗುತ್ತಿತ್ತು. ಆದಾಗ್ಯೂ, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ನಿಲ್ಲಿಸಲಾಗಿತ್ತು. ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬಂದ ಕಾರಣ ರಾಜ್ಯ ಸರ್ಕಾರವು ಸೌಲಭ್ಯವನ್ನು ಪುನರಾರಂಭಿಸಲು ಈ ವರ್ಷ ನಿರ್ಧರಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications