ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕೊಡುಗೆ ನೀಡಿದ ಯೋಗಿ ಸರ್ಕಾರ

|
Google Oneindia Kannada News

ಲಕ್ನೋ,ಆಗಸ್ಟ್‌.6: ರಕ್ಷಾಬಂಧನದ ಕೊಡುಗೆಯಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ.

ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆ ಘೋಷಣೆಯಾಗಿದೆ. ರಕ್ಷಾಬಂಧನದ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಅವರ ಕಚೇರಿ ಟ್ವೀಟ್ ಮಾಡಿದೆ.

ಆಗಸ್ಟ್ 10 ರ ಮಧ್ಯರಾತ್ರಿಯಿಂದ ಆಗಸ್ಟ್ 12 ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು ಗುರುತಿಸುವ ಉದ್ದೇಶದಿಂದ ಈ ಘೋಷಣೆ ಬಂದಿದೆ ಎನ್ನಲಾಗಿದೆ. ಇದರ ಹಿನ್ನೆಲೆಯಲ್ಲಿ 48 ಗಂಟೆಗಳ ಅವಧಿಗೆ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ.

ಹರಿಯಾಣದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಹರಿಯಾಣದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

ಇದಕ್ಕೂ ಮುನ್ನ, ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಮಹಿಳೆಯರ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು. ನಾಯ್ಡು ಬೆಂಗಳೂರಿಗೆ ಅಧಿಕೃತ ಪ್ರವಾಸ ವೇಳೆ ಸ್ಥಳೀಯ ವಿವಿಧ ಶಾಲೆಗಳ ಶಾಲಾ ಮಕ್ಕಳೊಂದಿಗೆ ರಕ್ಷಾಬಂಧನ ಆಚರಿಸಿದ್ದರು.

 ಮಹಿಳೆಯರ ಘನತೆಯನ್ನು ಎತ್ತಿಹಿಡಿಯಲು ಕ್ರಮ

ಮಹಿಳೆಯರ ಘನತೆಯನ್ನು ಎತ್ತಿಹಿಡಿಯಲು ಕ್ರಮ

ಈ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದ ನಾಯ್ಡು, ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ. ಈ ಮಂಗಳಕರ ದಿನದಂದು, ಮಹಿಳೆಯರ ಘನತೆಯನ್ನು ಎತ್ತಿಹಿಡಿಯಲು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಸಂಕಲ್ಪ ಮಾಡೋಣ" ಎಂದು ಉಪಾಧ್ಯಕ್ಷರ ಕಚೇರಿ ಟ್ವೀಟ್ ಮಾಡಿದೆ.

 ಮಹಿಳೆಯರಿಗೆ 36 ಗಂಟೆಗಳ ಉಚಿತ ಪ್ರಯಾಣ

ಮಹಿಳೆಯರಿಗೆ 36 ಗಂಟೆಗಳ ಉಚಿತ ಪ್ರಯಾಣ

ಜುಲೈ 30ರಂದು ರಕ್ಷಾಬಂಧನದ ಕೊಡುಗೆಯಾಗಿ ಹರಿಯಾಣ ಸರ್ಕಾರವೂ ತನ್ನ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ 36 ಗಂಟೆಗಳ ಉಚಿತ ಬಸ್ ಪ್ರಯಾಣವನ್ನು ಘೋಷಿಸಿತ್ತು. ಸರ್ಕಾರದ ಪ್ರಕಾರ ಉಚಿತ ಬಸ್ ಪ್ರಯಾಣವು ಆಗಸ್ಟ್ 10ರ ಮಧ್ಯಾಹ್ನ 12 ರಿಂದ ಆಗಸ್ಟ್ 11ರ ಮಧ್ಯರಾತ್ರಿ 12ರವರೆಗೆ ಜಾರಿಯಲ್ಲಿರಲಿದೆ ಎಂದು ಘೋಷಣೆ ಹೊರಡಿಸಲಾಗಿದೆ.

 10 ಆಗಸ್ಟ್‌ರಿಂದ 11ರವರೆಗೆ ಜಾರಿ

10 ಆಗಸ್ಟ್‌ರಿಂದ 11ರವರೆಗೆ ಜಾರಿ

ಈ ಬಗ್ಗೆ ಈ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿ, "ರಾಜ್ಯದ ಮಹಿಳೆಯರಿಗೆ ರಕ್ಷಾಬಂಧನದ ಉಡುಗೊರೆಯನ್ನು ನೀಡುತ್ತಾ, ಹರಿಯಾಣ ಸರ್ಕಾರವು ಈ ವರ್ಷವೂ ಹರಿಯಾಣ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲು ನಿರ್ಧರಿಸಿದೆ. ಉಚಿತ ಪ್ರಯಾಣದ ಸೌಲಭ್ಯವು 10 ಆಗಸ್ಟ್, 2022 ರಂದು ಮಧ್ಯಾಹ್ನ 12 ರಿಂದ 11 ಆಗಸ್ಟ್, 2022 ರ ಮಧ್ಯರಾತ್ರಿ 12 ರವರೆಗೆ ಜಾರಿಯಲ್ಲಿರಲಿದೆ," ಎಂದು ಹೇಳಿತ್ತು.

 ಕೋವಿಡ್ ಸಾಂಕ್ರಾಮಿಕದಿಂದ ನಿಲ್ಲಿಸಲಾಗಿತ್ತು

ಕೋವಿಡ್ ಸಾಂಕ್ರಾಮಿಕದಿಂದ ನಿಲ್ಲಿಸಲಾಗಿತ್ತು

ಹರಿಯಾಣದಲ್ಲಿ ಈ ವರ್ಷ ಒಡಹುಟ್ಟಿದವರ ನಡುವಿನ ಪ್ರೀತಿಯ ಬಾಂಧವ್ಯವನ್ನು ಸೂಚಿಸುವ ರಕ್ಷಾ ಬಂಧನ ಹಬ್ಬವನ್ನು ಆಗಸ್ಟ್ 11 ರಂದು ಆಚರಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಹರಿಯಾಣ ರಾಜ್ಯದಲ್ಲಿ ರಕ್ಷಾ ಬಂಧನ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಉಡುಗೊರೆಗಳನ್ನು ನೀಡಲಾಗುತ್ತಿತ್ತು. ಆದಾಗ್ಯೂ, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ನಿಲ್ಲಿಸಲಾಗಿತ್ತು. ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬಂದ ಕಾರಣ ರಾಜ್ಯ ಸರ್ಕಾರವು ಸೌಲಭ್ಯವನ್ನು ಪುನರಾರಂಭಿಸಲು ಈ ವರ್ಷ ನಿರ್ಧರಿಸಿದೆ.

English summary
As part of Raksha Bandhan, Uttar Pradesh Chief Minister Yogi Adityanath has announced free bus travel for women in the state for 48 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X