ಚುನಾವಣಾ ಪ್ರಚಾರಕ್ಕೆ ಬಂದಿದ್ದ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎಸೆತ

ಲಕ್ನೋ, ಫೆಬ್ರವರಿ 1: ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರಕ್ಕೆಂದು ಲಕ್ನೋಗೆ ಆಗಮಿಸಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎರಚಲಾಗಿದೆ.

ಕುಮಾರ್ ಅವರ ಮೇಲೆ ಎಸೆದದ್ದು ಮಸಿ ಅಲ್ಲ, ಆದರೆ ಒಂದು ರೀತಿಯ ಆಸಿಡ್. ಆರೋಪಿಗಳು ಕನ್ಹಯ್ಯಾ ಕುಮಾರ್ ಮೇಲೆ ಆಸಿಡ್ ಎಸೆಯಲು ಪ್ರಯತ್ನಿಸಿದರು. ಆದರೆ ಅದು ವಿಫಲವಾಯಿತು. ಆದರೆ, ಕೆಲವು ಹನಿಗಳು ಸಮೀಪದಲ್ಲಿ ನಿಂತಿದ್ದ 3-4 ಯುವಕರ ಮೇಲೆ ಬಿದ್ದಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಹತ್ರಾಸ್, ಉನ್ನಾವ್ ಮತ್ತು ಲಖೀಂಪುರ ಖೇರಿ ಘಟನೆ ನಡೆದಾಗಿನಿಂದ ಕಾಂಗ್ರೆಸ್ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದೆ. ದೇಶವನ್ನು ಕಟ್ಟದವರು ದೇಶವನ್ನು ಮಾರುತ್ತಿದ್ದಾರೆ, ಕಾಂಗ್ರೆಸ್ ಭಾರತವನ್ನು ನಿರ್ಮಿಸಿದೆ, ಆದ್ದರಿಂದ ದೇಶವನ್ನು ಮಾರುತ್ತಿರುವವರಿಂದ ದೇಶವನ್ನು ಉಳಿಸುತ್ತಿದೆ ಕನ್ಹಯ್ಯಾ ಕುಮಾರ್ ಅವರು ಹೇಳಿದ್ದಾರೆ.

Youth Tries To Throw Chemical At Kanhaiya Kumar At UPCC Office

2018 ರಲ್ಲಿ ಗ್ವಾಲಿಯರ್ ನಲ್ಲಿ ತಮ್ಮ ಸಂವಿಧಾನ ಬಚಾವೋ" ಪ್ರತಿಭಟನೆಯ ಭಾಗವಾಗಿ ಚೇಂಬರ್ ಆಫ್ ಕಾಮರ್ಸ್ ಭವನದಲ್ಲಿ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಲು ಬಂದಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯಾ ಕುಮಾರ್ ಮೇಲೆ ವ್ಯಕ್ತಿಯೊಬ್ಬ ಶಾಯಿ ಎಸೆದಿದ್ದರು.

ಪಕ್ಷದ ಕಾರ್ಯಕರ್ತರು ಆರೋಪಿಯನ್ನು ಹಿಡಿದಿದ್ದು, ಆತನನ್ನು ದೇವಾಂಶ್ ಬಾಜಪೈ ಎಂದು ಗುರುತಿಸಲಾಗಿದೆ. ಆದರೆ ಆತ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಲಖನೌದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲು ಕನ್ಹಯ್ಯಾ ಕುಮಾರ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದರು.
- ಮೊದಲ ಹಂತದಲ್ಲಿ ಫೆಬ್ರವರಿ 10ರಂದು ಮತದಾನ

- ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ

- ಮೂರನೇ ಹಂತದಲ್ಲಿ ಫೆಬ್ರವರಿ 20ರಂದು ಮತದಾನ

- ನಾಲ್ಕನೇ ಹಂತದಲ್ಲಿ ಫೆಬ್ರವರಿ 23ರಂದು ಮತದಾನ

- ಐದನೇ ಹಂತದಲ್ಲಿ ಫೆಬ್ರವರಿ 27ರಂದು ಮತದಾನ

- ಆರನೇ ಹಂತದಲ್ಲಿ ಮಾರ್ಚ್ 3ರಂದು ಮತದಾನ

- ಏಳನೇ ಹಂತದಲ್ಲಿ ಮಾರ್ಚ್ 7ರಂದು ಮತದಾನ

ಉತ್ತರ ಪ್ರದೇಶ ಗದ್ದುಗೆ ಹಿಡಿಯಲು ಪೈಪೋಟಿ:
ದೇಶದಲ್ಲಿ ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದಕ್ಕೆ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಅತಿಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ರಾಜ್ಯದ ಮತದಾರರ ಮನ ಗೆಲ್ಲುವುದಕ್ಕಾಗಿ ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಸಾಕಷ್ಟು ಯೋಜನೆಗಳಿಗೆ ಚಾಲನೆ ನೀಡಿದ್ದರು.

Recommended Video

      ಇದೊಂದು ಕೋವಿಡ್ ಬಜೆಟ್!!ದೇಶವನ್ನು ಸಾಲದ ಸುಳಿಗೆ ತಳ್ಳಿದ ಬಜೆಟ್ ಎಂದ ಕಾಂಗ್ರೆಸ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+