• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾನ್ಪುರದಲ್ಲಿ ಒಟ್ಟು 66 ಮಂದಿಗೆ ಝಿಕಾ ವೈರಸ್, ಹೆಚ್ಚಿದ ಆತಂಕ

|
Google Oneindia Kannada News

ಕಾನ್ಪುರ್, ನವೆಂಬರ್ 06: ಕಾನ್ಪುರದಲ್ಲಿ ಮತ್ತೆ 30 ಮಂದಿಗೆ ಝಿಕಾ ವೈರಸ್ ತಗುಲಿದ್ದು, ಇದುವರೆಗೆ ಒಟ್ಟು 66 ಮಂದಿಗೆ ವೈರಸ್ ತಗುಲಿದಂತಾಗಿದೆ.
ಕಾನ್ಪುರದ ಜನತೆ ಕೊರೊನಾ ಸೋಂಕಿನ ಜತೆಗೆ ಮತ್ತೊಂದು ವೈರಸ್‌ನ ಭೀತಿ ಎದುರಿಸುವಂತಾಗಿದೆ.

ಝಿಕಾ ವೈರಸ್ ಸೋಂಕಿತ ಜನರಲ್ಲಿ ಹೆಚ್ಚಿನವರು ರೋಗಲಕ್ಷಣಗಳನ್ನು ಹೆಚ್ಚಾಗಿ ಕಂಡು ಬರಲ್ಲ ಎಂದು WHO ಹೇಳುತ್ತದೆ. ಜ್ವರ, ಕಾಂಜಂಕ್ಟಿವಿಟಿಸ್, ಸ್ನಾಯು ಮತ್ತು ಕೀಲು ನೋವು, ಅಸ್ವಸ್ಥತೆ ಮತ್ತು ತಲೆನೋವು ಸೇರಿದಂತೆ ರೋಗಲಕ್ಷಣಗಳು ಸಾಮಾನ್ಯವಾಗಿ ಸೌಮ್ಯವಾಗಿರುತ್ತವೆ. ಸಾಮಾನ್ಯವಾಗಿ 2 ರಿಂದ 7 ದಿನಗಳವರೆಗೆ ಇರುತ್ತದೆ ಎಂದು ಅದು ಹೇಳುತ್ತದೆ.

ಉತ್ತರ ಪ್ರದೇಶದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ: ಸೋಂಕಿನ ಬಗ್ಗೆ ತಿಳಿಯಿರಿಉತ್ತರ ಪ್ರದೇಶದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ: ಸೋಂಕಿನ ಬಗ್ಗೆ ತಿಳಿಯಿರಿ

ಝಿಕಾ ವೈರಸ್‌ಗೆ ಯಾವುದೇ ಚಿಕಿತ್ಸೆ ಲಭ್ಯವಿಲ್ಲ .ಆದರೆ WHO ಪ್ರಕಾರ ಅದರ ತಡೆಗಟ್ಟುವ ಕ್ರಮಗಳು ಹಗಲಿನಲ್ಲಿ ಮತ್ತು ಸಂಜೆಯ ಆರಂಭದಲ್ಲಿ ಸೊಳ್ಳೆ ಕಡಿತದಿಂದ ರಕ್ಷಣೆಯನ್ನು ಮಾಡಿಕೊಳ್ಳಬೇಕು. ಆಗ ಮಾತ್ರ ಝಿಕಾ ವೈರಸ್ ಬರದಂತೆ ತಡೆಯಲು ಸಾಧ್ಯ. ಕಳೆದ ಕೆಲವು ತಿಂಗಳುಗಳ ಹಿಂದೆ ಕೇರಳದಲ್ಲೂ ಓರ್ವ ವ್ಯಕ್ತಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಈಗ ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್ ಸೋಂಕು ದೃಢಪಟ್ಟಿದೆ.

ಅದರಂತೆ ಜಿಲ್ಲೆಯಲ್ಲಿ ಝಿಕಾ ವೈರಸ್​ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆ ಆಗಿದೆ. ನಿನ್ನೆಯಷ್ಟೇ (ನವೆಂಬರ್ 3) ಇಲ್ಲಿ ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ವಿಶಾಖ್ ಹೇಳಿಕೆ ನೀಡಿದ್ದರು.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಆಫ್ರಿಕನ್ ದೇಶಗಳಲ್ಲಿ ಮೊದಲ ಏಕಾಏಕಿ ದಾಖಲಾದ ಝಿಕಾ ವೈರಸ್, ಗರ್ಭಧಾರಣೆಯ ಸಂಬಂಧಿತ ತೊಡಕುಗಳು ಮತ್ತು ವಯಸ್ಕರು ಮತ್ತು ಮಕ್ಕಳಲ್ಲಿ ನರವೈಜ್ಞಾನಿಕ ತೊಡಕುಗಳ ಅಪಾಯವನ್ನು ಹೆಚ್ಚಿಸುತ್ತದೆ. ಝಿಕಾ ವೈರಸ್ ಕಾಯಿಲೆಯ ಕಾವು ಕಾಲಾವಧಿ (ರೋಗಲಕ್ಷಣಗಳಿಗೆ ಒಡ್ಡಿಕೊಳ್ಳುವ ಸಮಯ) 3 ರಿಂದ 14 ದಿನಗಳು ಎಂದು ಅಂದಾಜಿಸಲಾಗಿದೆ.

ರೋಗ ಹರಡುವುದನ್ನು ತಡೆಯಲು ಮತ್ತು ಮೂಲವನ್ನು ಪತ್ತೆಹಚ್ಚಲು ಆರೋಗ್ಯ ತಂಡಗಳನ್ನು ರಚಿಸಲಾಗಿದೆ. ಸೊಳ್ಳೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ. ಗರ್ಭಿಣಿಯರು ಮತ್ತು ಜ್ವರ ಪೀಡಿತರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಜಿ. ವಿಶಾಖ್ ಹೇಳಿದ್ದರು.

ಮನೆಮನೆಯಿಂದ ಮಾದರಿ ಸಂಗ್ರಹಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಝಿಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಗಾಬರಿಯಾಗಬಾರದು ಎಂದು ಮನವಿ ಮಾಡಿರುವ ಅವರು, ವಾಯುಪಡೆ ಕೇಂದ್ರದ ಸುತ್ತಮುತ್ತ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಝಿಕಾ ವೈರಸ್ ಸೋಂಕು ಸೊಳ್ಳೆಗಳಿಂದ ಹರಡುತ್ತದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಅ.23ರಂದು ಮೊದಲ ಬಾರಿಗೆ ವಾಯುಪಡೆ ಅಧಿಕಾರಿಯೊಬ್ಬರಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ಕೇಂದ್ರ ಆರೋಗ್ಯ ಇಲಾಖೆಯು ಉನ್ನತ ಮಟ್ಟದ ತಂಡವನ್ನು ಉತ್ತರ ಪ್ರದೇಶಕ್ಕೆ ಕಳುಹಿಸಿಕೊಟ್ಟಿತ್ತು.

ಐಎಎಫ್ ವಿಮಾನ ನಿಲ್ದಾಣದ ಸುತ್ತಲಿನ ಪ್ರದೇಶಗಳಲ್ಲಿ ಮಾದರಿಗಳನ್ನು ಸಂಗ್ರಹಿಸಿ, ಲಕ್ನೋನಲ್ಲಿರುವ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅವುಗಳಲ್ಲಿ ಮೂವತ್ತು ಮಂದಿಗೆ ಸೋಂಕು ತಗುಲಿರುವುದು ಸ್ಪಷ್ಟವಾಗಿದೆ.

ಸೋಂಕು ನಿಯಂತ್ರಣದ ಸಲುವಾಗಿ ಆರೋಗ್ಯ ಕಾರ್ಯಕರ್ತರು ಸ್ಯಾನಿಟೈಸೇಷನ್ ಕಾರ್ಯ ಮತ್ತು ಜ್ವರ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ.

English summary
The number of people infected with the Zika virus in Uttar Pradesh’s Kanpur rose to 66 after 30 more people tested positive for the infection, according to a report on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X