ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿ ದಸರಾಗೆ 1 ಕೋಟಿ ರೂ. ಬಿಡುಗಡೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಸೆಪ್ಟೆಂಬರ್ 26: ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರ ಒಂದು ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಜಿಲ್ಲಾಧಿಕಾರಿಯವರಿಗೆ ಒಂದು ಕೋಟಿ ರೂ. ಬಿಡುಗಡೆ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.

ಅ.1 ರಿಂದ ರೈತ ದಸರಾ - ಮತ್ಸ್ಯ ಮೇಳ ಸಂಭ್ರಮಅ.1 ರಿಂದ ರೈತ ದಸರಾ - ಮತ್ಸ್ಯ ಮೇಳ ಸಂಭ್ರಮ

ಮಡಿಕೇರಿ ದಸರಾ ಉತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲು ಒಂದು ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರಾದ ರಾಬಿನ್ ದೇವಯ್ಯ ಅವರು ಕೋರಿದ್ದರು.

 1 Crore Released For Madikeri Dasara

ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಹಾಗೂ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ ಅವರ ಸಹಕಾರ ಮತ್ತು ಪ್ರಯತ್ನದಿಂದ ಮಡಿಕೇರಿ ದಸರಾಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ರಾಬಿನ್ ದೇವಯ್ಯ ಅವರು ತಿಳಿಸಿದ್ದಾರೆ.

English summary
The government has released one crore to madikeri dasara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X