ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲೆಗೆ 20 ಜನರು ಬ್ರಿಟನ್‌ನಿಂದ ವಾಪಸ್

|
Google Oneindia Kannada News

ಮಡಿಕೇರಿ, ಡಿಸೆಂಬರ್ 30: ಕೊಡಗಿಗೆ ಬ್ರಿಟನ್ ನಿಂದ ಆಗಮಿಸಿದವರ ಪೈಕಿ ಐವರಿಗಾಗಿ ಜಿಲ್ಲಾಡಳಿತ ಹುಡುಕಾಟ ನಡೆಸಿತ್ತಾದರೂ, ಇದೀಗ ನಾಲ್ವರ ಬಗ್ಗೆ ಮಾಹಿತಿ ಪತ್ತೆಯಾಗಿದ್ದು, ಅವರೆಲ್ಲರೂ ಬೇರೆ, ಬೇರೆ ಜಿಲ್ಲೆಯಲ್ಲಿರುವುದು ಬೆಳಕಿಗೆ ಬಂದಿದೆ. ಒಬ್ಬರಿಗಾಗಿ ಹುಡುಕಾಟ ಮುಂದುವರೆಸಲಾಗಿದೆ. ಆದರೆ ಜಿಲ್ಲೆಯಲ್ಲಿ ಇದುವರೆಗೆ ಬ್ರಿಟನ್ನಿನ ರೂಪಾಂತರ ವೈರಸ್ ದೃಢಪಟ್ಟಿಲ್ಲ.

ರಾಜ್ಯ ಸರ್ಕಾರದಿಂದ ಸ್ವೀಕೃತವಾದ ಪಟ್ಟಿಯ ಪ್ರಕಾರ ಕೊಡಗು ಜಿಲ್ಲೆಗೆ 20 ಜನ ಬ್ರಿಟನ್‌ ನಿಂದ ಹಿಂದಿರುಗಿದ್ದರು. ಇವರ ಪೈಕಿ 15 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 12 ಜನರ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ. ಉಳಿದಂತೆ 3 ಜನರ ಪರೀಕ್ಷಾ ವರದಿಯು ಇನ್ನಷ್ಟೆ ಬರಬೇಕಾಗಿದೆ.

ಕೊಡಗಿನಲ್ಲಿ ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೆ 'ಕೂರ್ಗ್ ವಿಲೇಜ್'ಕೊಡಗಿನಲ್ಲಿ ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೆ 'ಕೂರ್ಗ್ ವಿಲೇಜ್'

ಇನ್ನುಳಿದ 5 ಜನರ ಪೈಕಿ 4 ಜನರು ಬೇರೆ ಬೇರೆ ಜಿಲ್ಲೆಗಳಲ್ಲಿದ್ದು, ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲೆಯ ಸರ್ವೇಕ್ಷಣಾಧಿಕಾರಿಯವರಿಗೆ ನೀಡಲಾಗಿದೆ. ಒಂದು ಪ್ರಕರಣ ಮಾತ್ರ ಇನ್ನೂ ಪತ್ತೆ ಹಚ್ಚುವ ಹಂತದಲ್ಲಿದ್ದು, ಮಾಹಿತಿಯನ್ನು ಪೊಲೀಸ್ ಇಲಾಖೆಗೆ ನೀಡಿದ್ದು, ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿರುವುದಾಗಿ ತಿಳಿದು ಬಂದಿದೆ.

Madikeri: 20 People Returned From Britain To Kodagu District

ಇದುವರೆಗೆ ಜಿಲ್ಲೆಯಲ್ಲಿ ಬ್ರಿಟನ್ ರೂಪಾಂತರ ವೈರಸ್ ದೃಢಪಟ್ಟಿರುವುದಿಲ್ಲ. ಒಂದು ವೇಳೆ ದೃಢಪಟ್ಟರೂ ಪ್ರತ್ಯೇಕ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮಾಡಿಕೊಳ್ಳಲಾಗಿದೆ. ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಜಿಲ್ಲೆಯಲ್ಲಿ ಬ್ರಿಟನ್ನಿನ ರೂಪಾಂತರ ವೈರಸ್ ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ಆರು ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ನಾಲ್ಕು ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು ಎರಡು ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ಮೂರು ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ಒಂದು ಪ್ರಕರಣ ಆರ್‍.ಟಿ-ಪಿಸಿಆರ್ ಪರೀಕ್ಷೆಯ ಮೂಲಕ ಮತ್ತು ಎರಡು ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ ಮೂರು ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ ಮೂರು ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ ಎಂದರು.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5,752 ಆಗಿದ್ದು, 5592 ಮಂದಿ ಗುಣಮುಖರಾಗಿದ್ದಾರೆ. 82 ಸಕ್ರಿಯ ಪ್ರಕರಣಗಳಿದ್ದು, 78 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 55 ಆಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.

English summary
According to a list accepted by the state government, 20 people had returned to the Kodagu district from Britain. Of these, 15 were tested and 12 of them were negative.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X