ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿ; ವಸತಿ ಶಾಲೆಯ 21 ಮಕ್ಕಳಿಗೆ ಕೋವಿಡ್ ಸೋಂಕು

|
Google Oneindia Kannada News

ಮಡಿಕೇರಿ, ಅಕ್ಟೋಬರ್ 26; ಕೊಡಗು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಆತಂಕ ಉಂಟಾಗಿದೆ. ನವೋದಯ ವಸತಿ ಶಾಲೆ 21 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಇದರಿಂದಾಗಿ ಪೋಷಕರು ಆತಂಕಗೊಂಡಿದ್ದಾರೆ.

ಮಡಿಕೇರಿಯ ಗಾಳಿಬೀಡು ಸಮೀಪದ ನವೋದಯ ವಸತಿ ಶಾಲೆಯ 21 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಮಕ್ಕಳನ್ನು ಮಡಿಕೇರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

2020ರ ಬಳಿಕ ಮಹಾರಾಷ್ಟ್ರದಲ್ಲಿ ಕಡಿಮೆ ಹೊಸ ಕೋವಿಡ್ ಪ್ರಕರಣ ಪತ್ತೆ! 2020ರ ಬಳಿಕ ಮಹಾರಾಷ್ಟ್ರದಲ್ಲಿ ಕಡಿಮೆ ಹೊಸ ಕೋವಿಡ್ ಪ್ರಕರಣ ಪತ್ತೆ!

ಕಳೆದ ಒಂದು ವಾರದಿಂದ ವಿದ್ಯಾರ್ಥಿಗಳಲ್ಲಿ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ಆದ್ದರಿಂದ ಒಟ್ಟು 270 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಇವರಲ್ಲಿ 21 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಭಾರತದಲ್ಲಿ ಕೋವಿಡ್ 2ನೇ ಅಲೆಯಂತಹ ವಿನಾಶಕಾರಿ ಅಲೆಯ ಸಾಧ್ಯತೆ ಇಲ್ಲ: ತಜ್ಞರುಭಾರತದಲ್ಲಿ ಕೋವಿಡ್ 2ನೇ ಅಲೆಯಂತಹ ವಿನಾಶಕಾರಿ ಅಲೆಯ ಸಾಧ್ಯತೆ ಇಲ್ಲ: ತಜ್ಞರು

 21 Students Of Madikeri Navodaya Residential School Tested Positive For COVID

ಶಾಲೆಯ ಸಿಬ್ಬಂದಿ ಮತ್ತು ಉಳಿದ ವಿದ್ಯಾರ್ಥಿಗಳಿಗೆ ಬುಧವಾರ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಪೋಷಕರು ಆತಂಕಗೊಂಡಿದ್ದಾರೆ.

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಮಂಗಳವಾರ ಹೆಲ್ತ್ ಬುಲೆಟಿನ್ ಪ್ರಕಾರ ಕೊಡಗು ಜಿಲ್ಲೆಯಲ್ಲಿ 4 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 36,994. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳು 82. ಇದುವರೆಗೂ ಜಿಲ್ಲೆಯಲ್ಲಿ 329 ಜನರು ಮೃತಪಟ್ಟಿದ್ದಾರೆ.

ಕೋವಿಡ್ ಪ್ರಕರಣಗಳ ಇಳಿಕೆ; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ 277 ಹೊಸ ಪ್ರಕರಣಗಳು ದಾಖಲಾಗಿವೆ. 343 ಜನರು ಡಿಸ್ಚಾರ್ಜ್ ಆಗಿದ್ದು, 7 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 8510 ಆಗಿದೆ. ಇದುವರೆಗೂ ರಾಜ್ಯದಲ್ಲಿ 29,39,990 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು ಪ್ರಕರಣಗಳು 29,86,553 ಆಗಿದೆ. ಇದುವರೆಗೂ ರಾಜ್ಯದಲ್ಲಿ 38,024 ಜನರು ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 169 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 6464 ಆಗಿದೆ. ಇದುವರೆಗೂ ನಗರದಲ್ಲಿ 16,253 ಜನರು ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಬಾಗಲಕೋಟೆ, ಬೀದರ್, ಚಾಮರಾಜನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿಲ್ಲ.

ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 2, ದಕ್ಷಿಣ ಕನ್ನಡ 23, ಹಾಸನ 18, ಕೊಡಗು 4, ಮಂಡ್ಯ 4, ಮೈಸೂರು 19, ರಾಮನಗರ 2, ಶಿವಮೊಗ್ಗ 2, ತುಮಕೂರು 6, ಉಡುಪಿ 9, ಉತ್ತರ ಕನ್ನಡ 6 ಹೊಸ ಪ್ರಕರಣಗಳು ದಾಖಲಾಗಿವೆ.

ಕರ್ನಾಟಕದಲ್ಲಿ ಇಂದಿನ ತನಕ 6,38,63,343 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಇಂದು 2,10,693 ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 31,942. ಮೈಸೂರಿನಲ್ಲಿ 23,306. ಬಳ್ಳಾರಿಯಲ್ಲಿ 22,818 ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಕಡಿಮೆಯಾದ ಕೋವಿಡ್ ಅಬ್ಬರ; ದೇಶದಲ್ಲಿಯೂ ಕೋವಿಡ್ ಸೋಂಕಿನ ಅಬ್ಬರ ಕಡಿಮೆಯಾಗಿದೆ. ಅಕ್ಟೋಬರ್ 26ರ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿ 12,428 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. 8 ತಿಂಗಳ ಬಳಿಕ ಭಾರತದಲ್ಲಿ ದಾಖಲಾದ ಅತಿ ಕಡಿಮೆ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇದಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ವಿವಿಧ ರಾಜ್ಯಗಳಲ್ಲಿ ಸಹ ಹೊಸ ಕೋವಿಡ್ ಪ್ರಕರಣಗಳ ಕಡಿಮೆಯಾಗಿದೆ. ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳಿರುವ ಮಹಾರಾಷ್ಟ್ರದಲ್ಲಿ ಸೋಮವಾರ ಕೇವಲ 889 ಹೊಸ ಪ್ರಕರಣ ಪತ್ತೆಯಾಗಿತ್ತು.

Recommended Video

ABD ಗೆ ಅನ್ಯಾಯ ಮಾಡ್ತಿರೋ RCB | Oneindia Kannada

ಮಂಗಳವಾರ ಕೇರಳದಲ್ಲಿ 7,163 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 482 ಜನರು ಸಾವನ್ನಪ್ಪಿದ್ದು, ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 74,456. ಇದುವರೆಗೂ 48,24,745 ಜನರು ಗುಣಮುಖಗೊಂಡಿದ್ದು, ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 49,19,952ಕ್ಕೆ ಏರಿಕೆಯಾಗಿದೆ.

English summary
21 students of the Navodaya residential school near Madekeri tested positive for Covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X