ಕೊಡಗಿಗೆ ಪ್ರವಾಸಿಗರನ್ನು ಸೆಳೆಯಲು ಮೂರು ದಿನಗಳ ಪ್ರವಾಸಿ ಉತ್ಸವ

ಮಡಿಕೇರಿ, ಜನವರಿ 09 : ಪ್ರಕೃತಿ ವಿಕೋಪದಿಂದಾಗಿ ಕೊಡಗು ಜಿಲ್ಲೆಯಲ್ಲಿ ಅಪಾರ ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮವು ಕೂಡಾ ನೆಲ ಕಚ್ಚಿದೆ. ಜಿಲ್ಲೆಯ ಪ್ರವಾಸೋದ್ಯಮ ಚೇತರಿಕೆಗಾಗಿ 'ಕೊಡಗು ಪ್ರವಾಸಿ ಉತ್ಸವ' ಆಯೋಜಿಸಲಾಗಿದೆ.

ಜನವರಿ 11ರಿಂದ ಮೂರು ದಿನಗಳ ಕಾಲ ಕೊಡಗಿನಲ್ಲಿ 'ಕೊಡಗು ಪ್ರವಾಸಿ ಉತ್ಸವ 2019' ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಗರದ ಗಾಂಧಿ ಮೈದಾನದಲ್ಲಿ ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ.

ಪ್ರವಾಸೋದ್ಯಮ ಇಲಾಖೆ 1 ಲಕ್ಷ ರೂ. ವೆಚ್ಚದಲ್ಲಿ ಉತ್ಸವ ಆಯೋಜನೆ ಮಾಡಿದೆ. ತೋಟಗಾರಿಕೆ ಇಲಾಖೆಯು ಉತ್ಸವದ ಅಂಗವಾಗಿ ರಾಜಾಸೀಟ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದೆ. ಕೊಡಗಿನ ಅಧಿದೇವತೆ ಕಾವೇರಿ ಮಾತೆ ಎಂಬ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲಾಗುತ್ತಿದೆ.

3 days of Pravasi Utsav in Kodagu from Jan 11, 2019

ಉತ್ಸವ ನಡೆಯುವ ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ರಾತ್ರಿ 8.30ರ ತನಕ ಸಾರ್ವಜನಿಕರು ಫಲಪುಷ್ಪ ಪ್ರದರ್ಶನ ನೋಡಲು ಅವಕಾಶ ನೀಡಲಾಗಿದೆ. ಆಹಾರ ಮೇಳ, ಶ್ವಾನ ಪ್ರದರ್ಶನ, ಓಪನ್ ಸ್ಟ್ರೀಟ್ ಫೆಸ್ಟಿವಲ್, ಛಾಯಾಚಿತ್ರಗಳ ಪ್ರದರ್ಶನ ಸಹ ಏರ್ಪಡಿಸಲಾಗಿದೆ.

ಜನವರಿ 11ರಂದು ಎಂ.ಡಿ.ಪಲ್ಲವಿ ಅವರ ತಂಡದಿಂದ ಗಾಯನ ಕಾರ್ಯಕ್ರಮ, ಜನವರಿ 12ರಂದು ಸರಿಗಮಪ ತಂಡದಿಂದ ಸಂಗೀತ ಸಂಜೆ, ಜನವರಿ 13ರಂದು ಅರ್ಜುನ್ ಜನ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+