ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಪ್ರವಾಸೋದ್ಯಮ ಪುನಶ್ಚೇತನಕ್ಕೆ 40 ಕೋಟಿ ರೂ ಬಿಡುಗಡೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಸೆಪ್ಟೆಂಬರ್ 16: ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆಂದು ಸರ್ಕಾರ 40 ಕೋಟಿ ರೂ ಹಣವನ್ನು ಬಿಡುಗಡೆ ಮಾಡಿದೆ.

ಪ್ರವಾಸೋದ್ಯಮವೇ ಕೊಡಗು ಜಿಲ್ಲೆಯ ಜೀವಾಳ. ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡು ಇಲ್ಲಿ ಸಾವಿರಾರು ಕುಟುಂಬಗಳಿವೆ. ಆದರೆ ಕಳೆದ ಮೂರು ವರ್ಷಗಳಿಂದ ಸಂಭವಿಸುತ್ತಿರುವ ಪ್ರಕೃತಿ ವಿಕೋಪ ಹಾಗೂ ಈ ಬಾರಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ಜಿಲ್ಲೆಯಲ್ಲಿ ಪ್ರವಾಸೋದ್ಯಮ ನೆಲ ಕಚ್ಚುವಂತೆ ಮಾಡಿದೆ.

ಕೊಲ್ಲೂರು: ರೋಪ್ ವೇ ಯೋಜನೆ ಡಿಪಿಆರ್ ತಯಾರಿಗೆ ಚಾಲನೆಕೊಲ್ಲೂರು: ರೋಪ್ ವೇ ಯೋಜನೆ ಡಿಪಿಆರ್ ತಯಾರಿಗೆ ಚಾಲನೆ

ಜಿಲ್ಲೆಯ ಜನರೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು ಸರ್ಕಾರ ಕೊಡಗಿಗೆ 40 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಇಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ.

Kodagu: 40 Crore Rs Released For Revival Of Tourism

Recommended Video

RCB ಈ ಸಲ ಕಪ್ ಗೆದ್ದೇ ಗೆಲ್ತಾರೆ , ಯಾಕೆ ಗೊತ್ತಾ | Oneindia Kannada

ಲಾಕ್ ಡೌನ್ ನಂತರ ಪ್ರವಾಸಿಗರಿಗೆ ಕೊಡಗು ಜಿಲ್ಲೆಗೆ ನಿರ್ಬಂಧ ಹೇರಲಾಗಿತ್ತು. ವಾರದ ಹಿಂದಷ್ಟೇ ಮತ್ತೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹೀಗಾಗಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಿ ಪ್ರವಾಸಿಗರನ್ನು ಸೆಳೆಯಲು ಸರ್ಕಾರ ಅನುದಾನ ನೀಡಿದೆ. ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದ ಹೋಂ ಸ್ಟೇ, ರೆಸಾರ್ಟ್ ಗಳೂ ಚೇತರಿಸಿಕೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ. ಪ್ರವಾಸೋದ್ಯಮದ ಪುನಶ್ಚೇತನಕ್ಕೆ ಸರ್ಕಾರ ಅನುದಾನ ನೀಡಿರುವುದು ಹಲವು ಸಮಸ್ಯೆಗಳ ನಡುವೆ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಗೆ ಕೊಂಚ ನೆಮ್ಮದಿ ತಂದಿದೆ.

English summary
State government has released 40 crore rs to the revival of tourism in kodagu district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X