ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿಯಿಂದ 5,000 ಕ್ಯೂಸೆಕ್ ನೀರು ಬಿಡುಗಡೆ
ಕೊಡಗು, ಜುಲೈ 17: ಜುಲೈನಲ್ಲಿ ಮುಂಗಾರು ಮಳೆ ಚುರುಕಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ.
ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ 6.5 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಭರ್ತಿಗೆ ಇನ್ನು ಎರಡು ಟಿಎಂಸಿ ಅಡಿ ಬಾಕಿ ಇದ್ದು, ಸದ್ಯಕ್ಕೆ 5 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 4,864 ಕ್ಯೂಸೆಕ್ ನೀರು ಹರಿದುಬಂದಿದ್ದು, ಜಲಾಶಯದ ಭರ್ತಿಗೆ ಇನ್ನೂ ಎರಡು ಟಿಎಂಸಿ ಅಡಿ ನೀರು ಬಾಕಿ ಇರುವಾಗಲೇ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಜಲಾಶಯದ ಮೂರು ಕ್ರೆಸ್ ಗೇಟ್ ಗಳನ್ನು ತೆರೆದು 5 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ.

ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಲ್ಲಿ ಭಾರಿ ನೀರು ಸಂಗ್ರಹವಾಗುವ ಮೊದಲೇ ನದಿಗೆ ನೀರು ಹರಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳೂ ಭರದಿಂದ ಸಾಗಿವೆ.












Click it and Unblock the Notifications