ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿಯಿಂದ 5,000 ಕ್ಯೂಸೆಕ್​ ನೀರು ಬಿಡುಗಡೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಕೊಡಗು, ಜುಲೈ 17: ಜುಲೈನಲ್ಲಿ ಮುಂಗಾರು ಮಳೆ ಚುರುಕಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ.

ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ 6.5 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಭರ್ತಿಗೆ ಇನ್ನು ಎರಡು ಟಿಎಂಸಿ ಅಡಿ ಬಾಕಿ ಇದ್ದು, ಸದ್ಯಕ್ಕೆ 5 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 4,864 ಕ್ಯೂಸೆಕ್ ನೀರು ಹರಿದುಬಂದಿದ್ದು, ಜಲಾಶಯದ ಭರ್ತಿಗೆ ಇನ್ನೂ ಎರಡು ಟಿಎಂಸಿ ಅಡಿ ನೀರು ಬಾಕಿ ಇರುವಾಗಲೇ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಜಲಾಶಯದ ಮೂರು ಕ್ರೆಸ್ ಗೇಟ್ ಗಳನ್ನು ತೆರೆದು 5 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ.

ಕೊಡಗಿನಲ್ಲಿ ತಗ್ಗಿದ ಮಳೆ, ಭರ್ತಿಯಾಗದ ಹಾರಂಗಿ ಜಲಾಶಯ...ಕೊಡಗಿನಲ್ಲಿ ತಗ್ಗಿದ ಮಳೆ, ಭರ್ತಿಯಾಗದ ಹಾರಂಗಿ ಜಲಾಶಯ...

5000 Cusecs Of Water Released From Harangi Reservoir

ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಲ್ಲಿ ಭಾರಿ ನೀರು ಸಂಗ್ರಹವಾಗುವ ಮೊದಲೇ ನದಿಗೆ ನೀರು ಹರಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳೂ ಭರದಿಂದ ಸಾಗಿವೆ.

English summary
4,864 cusec of water flowed into the reservoir due to heavy rainfall in kodagu. 5000 cusecs of water released from harangi reservoir today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X