ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ 800 ಮರ ಕಡಿಯಲು ಅನುಮತಿ, ಡಿಎಫ್‌ಓ ಅಮಾನತು

|
Google Oneindia Kannada News

ಮಡಿಕೇರಿ, ಜೂನ್ 14 : ರೆಸಾರ್ಟ್ ನಿರ್ಮಾಣಕ್ಕಾಗಿ 800 ಮರಗಳ ಕಡಿತಕ್ಕೆ ಆದೇಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಫ್ಓ ಅವರನ್ನುಅಮಾನತು ಮಾಡಲಾಗಿದೆ. ಮರಗಳನ್ನು ಕಡಿಯಲು ಆದೇಶ ನೀಡಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು.

ಶುಕ್ರವಾರ ಪ್ರಧಾನ ಅರಣ್ಯ ಸಂರಕ್ಷಣಾಧಿರಿಗಳು ಮಡಿಕೇರಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಮಂಜುನಾಥ್ ಅವರನ್ನು ಅಮಾನತು ಮಾಡಿದ್ದಾರೆ. ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಮಡಿಕೇರಿ ವಲಯದ ಹೆಚ್ಚಿನ ಹೊಣೆ ನೀಡಲಾಗಿದೆ.

ಕೊಡಗು; ರೆಸಾರ್ಟ್ ಗಾಗಿ ನಡೆಯಿತಾ ಮರಗಳ ಮಾರಣಹೋಮ?ಕೊಡಗು; ರೆಸಾರ್ಟ್ ಗಾಗಿ ನಡೆಯಿತಾ ಮರಗಳ ಮಾರಣಹೋಮ?

ಕೆ.ನಿಡಗುಣಿ ಗ್ರಾಮದಲ್ಲಿ 808 ಮರಗಳನ್ನು ಕಡಿಯಲು ಡಿಎಫ್‌ಓ ಮಂಜುನಾಥ ಆದೇಶ ನೀಡಿದ್ದರು. ಆದ್ದರಿಂದ, ಕರ್ತವ್ಯ ಲೋಪದ ಕಾರಣದಿಂದಾಗಿ ಅಮಾನತು ಮಾಡಲಾಗಿದೆ. ಉದ್ಯಮಿಯೊಬ್ಬರು ಅರಣ್ಯ ಇಲಾಖೆ ಅನುಮತಿ ಪಡೆದು 100ಕ್ಕೂ ಹೆಚ್ಚಿನ ಮರಗಳನ್ನು ಕಡಿಸಿದ್ದರು.

ಕೊಡಗಿನಲ್ಲಿ ಆತಂಕದ ನಡುವೆಯೇ ಗದ್ದೆಗಿಳಿದ್ದಾರೆ ರೈತರುಕೊಡಗಿನಲ್ಲಿ ಆತಂಕದ ನಡುವೆಯೇ ಗದ್ದೆಗಿಳಿದ್ದಾರೆ ರೈತರು

tree cut issue

ನೇರಳೆ, ಹಲಸು, ಬೈನೆ ಸೇರಿದಂತೆ ವಿವಿಧ ಮರಗಳಿಗೆ ಕೊಡಲು ಹಾಕಲಾಗಿತ್ತು. ಜೂನ್ 6ರಂದು ಪ್ರಕರಣ ಬೆಳಕಿಗೆ ಬಂದ ಬಳಿಕ ಮಾಜಿ ಸಚಿವ ಎಂ.ಸಿ.ನಾಣಯ್ಯ ಸ್ಥಳಕ್ಕೆ ಭೇಟಿ ನೀಡಿದ್ದರು. ಪರಿಸರ ಪ್ರೇಮಿಗಳು ಮರ ಕಡಿದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಮುಂಗಾರಿನ ಆತಂಕ: ಜನಕ್ಕೆ ಧೈರ್ಯ ತುಂಬಿದ ಕೊಡಗು ಜಿಲ್ಲಾಡಳಿತಮುಂಗಾರಿನ ಆತಂಕ: ಜನಕ್ಕೆ ಧೈರ್ಯ ತುಂಬಿದ ಕೊಡಗು ಜಿಲ್ಲಾಡಳಿತ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮರ ಕಡಿಯುವುದನ್ನು ತಕ್ಷಣ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದರು. ಈ ಕುರಿತು ವರದಿ ನೀಡುವಂತೆ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದರು.

English summary
Madikeri Divisional Forest Officer (DFO) suspended after forest department approved to cut 800 tree's in K.Nidaguni village of Kodagu district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X