ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಮಹಾಮಳೆ : 840 ಸಂತ್ರಸ್ತ ಕುಟುಂಬಗಳಿಗೆ ಮನೆ ಭಾಗ್ಯ

|
Google Oneindia Kannada News

Recommended Video

kodagu flood :ನಿರಾಶ್ರಿತರಿಗೆ ಮನೆ ನಿರ್ಮಿಸಿ ಕೊಡಲು ಮುಂದಾದ ಸರ್ಕಾರ | Oneindia Kannada

ಮಡಿಕೇರಿ, ಅಕ್ಟೋಬರ್ 31 : ಮಳೆ ಮತ್ತು ಗುಡ್ಡ ಕುಸಿತದಿಂದ ನೂರಾರು ಜನರು ಕೊಡಗು ಜಿಲ್ಲೆಯಲ್ಲಿ ನೆಲೆ ಕಳೆದುಕೊಂಡಿದ್ದರು. ಈಗ 840 ಕುಟುಂಬಗಳಿಗೆ ಮನೆಯನ್ನು ನಿರ್ಮಿಸಿಕೊಡಲು ಜಿಲ್ಲಾಡಳಿತ ಮುಂದಾಗಿದೆ.

ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮನೆಗಳನ್ನು ನಿರ್ಮಿಸಲು ಈಗಾಗಲೇ ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ. 30*40 ಅಳತೆಯ ನಿವೇಶದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತದೆ' ಎಂದು ಹೇಳಿದ್ದಾರೆ.

ಕೊಡಗು ಪುನರ್‌ನಿರ್ಮಿಸಲು ಸರ್ಕಾರ ಮಾಡಿರುವ ಕಾರ್ಯಗಳಿವುಕೊಡಗು ಪುನರ್‌ನಿರ್ಮಿಸಲು ಸರ್ಕಾರ ಮಾಡಿರುವ ಕಾರ್ಯಗಳಿವು

'110 ಎಕರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ನವೆಂಬರ್ 2ರ ಬಳಿಕ ಈ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಮೊದಲ ಹಂತದಲ್ಲಿ 5 ಸ್ಥಳಗಳಲ್ಲಿ ಮನೆ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗುತ್ತದೆ' ಎಂದು ಮಾಹಿತಿ ನೀಡಿದರು.

ಶೀಘ್ರವೇ ಭೂಕುಸಿತದ ಸಂತ್ರಸ್ತರಿಗೆ ಸುಸಜ್ಜಿತ ಮನೆ ನಿರ್ಮಾಣಶೀಘ್ರವೇ ಭೂಕುಸಿತದ ಸಂತ್ರಸ್ತರಿಗೆ ಸುಸಜ್ಜಿತ ಮನೆ ನಿರ್ಮಾಣ

ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗಿತ್ತು. ಮಳೆಯ ಜೊತೆ ಗುಡ್ಡ ಕುಸಿದು ನೂರಾರು ಜನರು ಮನೆಗಳನ್ನು ಕಳೆದುಕೊಂಡಿದ್ದರು. ಸಂತ್ರಸ್ತರಾದ ಜನರ ಬಗ್ಗೆ ಸಮೀಕ್ಷೆ ನಡೆಸಿ ಸರ್ಕಾರದ ವತಿಯಿಂದ ಮನೆಯನ್ನು ಕಟ್ಟಿಸಿಕೊಡಲಾಗುತ್ತಿದೆ....

ಚಿತ್ರಗಳು : ಮಳೆ, ಭೂ ಕುಸಿತದ ಬಳಿಕ ಕೊಡಗು ಜಿಲ್ಲೆಚಿತ್ರಗಳು : ಮಳೆ, ಭೂ ಕುಸಿತದ ಬಳಿಕ ಕೊಡಗು ಜಿಲ್ಲೆ

ಸಂತ್ರಸ್ತರ ಆಯ್ಕೆಗೆ ಜಂಟಿ ಸಮೀಕ್ಷೆ

ಸಂತ್ರಸ್ತರ ಆಯ್ಕೆಗೆ ಜಂಟಿ ಸಮೀಕ್ಷೆ

ಕಂದಾಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಸಂತ್ರಸ್ತರನ್ನು ಗುರುತಿಸಲು ಜಂಟಿ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆ ಬಳಿಕ ಜನರಿಂದ ಅಹವಾಲುಗಳನ್ನು ಸ್ವೀಕರಿಸಲಾಗಿತ್ತು. ಅಂತಿಮವಾಗಿ 840 ಕುಟುಂಬಗಳನ್ನು ಆಯ್ಕೆ ಮಾಡಲಾಗಿದ್ದು, ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಎಲ್ಲಿ ಎಷ್ಟು ಮನೆಗಳ ನಿರ್ಮಾಣ

ಎಲ್ಲಿ ಎಷ್ಟು ಮನೆಗಳ ನಿರ್ಮಾಣ

ಮಡಿಕೇರಿ ತಾಲೂಕಿನಲ್ಲಿ 525, ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ 205, ಸೋಮವಾರಪೇಟೆಯಲ್ಲಿ 88, ಕುಶಾಲನಗರದಲ್ಲಿ 23, 90 ಕುಟುಂಬಗಳು ತಮ್ಮ ಸ್ವಂತ ಜಾಗದಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಪ್ರಸ್ತಾನವೆ

ಸರ್ಕಾರಕ್ಕೆ ಪ್ರಸ್ತಾನವೆ

ಮೊದಲ ಹಂತದಲ್ಲಿ 373 ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಲೇಔಟ್ ನಿರ್ಮಾಣಕ್ಕಾಗಿ 31.63 ಕೋಟಿ ಅನುದಾನ ನೀಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರುವ ಅನುದಾನದಲ್ಲಿ ಲೇಔಟ್‌ನಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

50 ಎಕರೆ ಭೂ ಸ್ವಾಧೀನ

50 ಎಕರೆ ಭೂ ಸ್ವಾಧೀನ

ಮಾದಾಪುರದಲ್ಲಿ ತೋಟಗಾರಿಕಾ ಇಲಾಖೆಗೆ ಸೇರಿದ 50 ಎಕರೆ ಜಾಗವನ್ನು ಕೊಡಗು ಜಿಲ್ಲಾಡಳಿತಕ್ಕೆ ಹಸ್ತಾಂತೆ ಮಾಡುವ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದೆ. ಈ ಜಾಗದಲ್ಲಿ ಲೇಔಟ್ ನಿರ್ಮಾಣ ಮಾಡಲು ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ.

English summary
840 house will be constructed in Kodagu for the people who lost house in rain and landslide in the month of August 2018. The land has been identified for the construction of houses. The houses will be constructed on 30x40 sites said Special Additional Deputy Commissioner Jagadish.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X