ಕೊಡಗು: ಗುಂಡು ಹಾರಿಸಿ ವ್ಯಕ್ತಿಯನ್ನು ಹತ್ಯೆಗೈದ ದುಷ್ಕರ್ಮಿಗಳು
ಕೊಡಗು, ಡಿಸೆಂಬರ್ 23: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮದಾಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಶನಿವಾರ ಬೆಳಗ್ಗೆ ವ್ಯಕ್ತಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಶನಿವಾರ ನಸುಕಿ ವೇಳೆ ಅಪರಿಚಿತರು ರಂಜನ್ ಪೂವಯ್ಯ (45) ಎನ್ನುವರನ್ನು ಅವರ ಮನೆ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆ ಮಾಡಿದ ಬಗ್ಗೆ ಕಾರಣ ತಿಳಿದುಬಂದಿಲ್ಲ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications