ಕೊಡಗು: ನಿವೃತ್ತ ಡಿವೈಎಸ್ಪಿ ಗುಂಡಿಟ್ಟುಕೊಂಡು ಆತ್ಮಹತ್ಯೆ
ಕೊಡಗು, ಸೆಪ್ಟೆಂಬರ್ 08 : ನಿವೃತ್ತ ಡಿವೈಎಸ್ಪಿಯೊಬ್ಬರು ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಮರಗೋಡು ಗ್ರಾಮದಲ್ಲಿ ನಡೆದಿದೆ.
ಚೆರಿಯಮನೆ ಶಶಿ (65) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ ಬಳಿಗ್ಗೆ ತಮ್ಮ ನಿವಾಸದಲ್ಲಿ ನಾಡ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.

ಶಶಿ ಅವರು ಲೋಕಾಯುಕ್ತ ವಿಭಾಗದಲ್ಲಿ ಈ ಹಿಂದೆ ಡಿವೈಎಸ್ಪಿಯಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications