ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಕ್ಷದ್ರೋಹ ಆರೋಪ; ಮೂವರು ಜೆಡಿಎಸ್ ಸದಸ್ಯರ ಉಚ್ಚಾಟನೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ನವೆಂಬರ್ 3: ಮಂಗಳವಾರ (ನ.3)ದಂದು ನಡೆದ ಕುಶಾಲನಗರ ಪಟ್ಟಣ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ, ಹಣದ ಆಮಿಷಕ್ಕೆ ಒಳಗಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಜೆಡಿಎಸ್ ಸದಸ್ಯರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಕುಶಾಲನಗರ ಪಟ್ಟಣ ಪಂಚಾಯತ ಸದಸ್ಯರಾದ ಜಗದೀಶ, ಸುರೇಶ್ ಎಂ.ಬಿ, ಸುರೇಯ ಭಾನು ಅವರನ್ನು ಈ ಕೊಡಲೇ ಪಕ್ಷದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ ಮತ್ತು ಪಕ್ಷದ್ರೋಹಿ ಸದಸ್ಯರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಕೊಡಗು ಜೆಡಿಎಸ್ ಹೇಳಿಕೆ ನೀಡಿದೆ.

ವಿರಾಜಪೇಟೆ, ಕುಶಾಲನಗರ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ ವಿರಾಜಪೇಟೆ, ಕುಶಾಲನಗರ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ

ಸೋಮವಾರಪೇಟೆ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯತ ಅಧ್ಯಕ್ಷೆಯಾಗಿ ನಳಿನಿ ಗಣೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ಪ.ಪಂ ನಲ್ಲಿ 3 ಸ್ಥಾನ ಗಳಿಸಿದ್ದ ಬಿಜೆಪಿಯ ನಳಿನಿ ಗಣೇಶ್ ಮೊದಲ 1 ವರ್ಷದ ಅವಧಿಗೆ ಮತ್ತು ಪಿ.ಕೆ.ಚಂದ್ರು ಮುಂದಿನ ಒಂದೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನ ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಯಿತು.

Madikeri: Accused Of Betrayal; Three JDS Members Expelled From Party

Recommended Video

Corona Update Karnataka : ನಮ್ಮನ್ನ ನಾವೇ ಕಾಪಾಡ್ಕೊಬೇಕು! | Oneindia Kannada

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಾಂಗ್ರೆಸ್ ನ ಬಿ.ಸಂಜೀವ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

English summary
The JDS members who supported the BJP have been expelled from the party In Kushalanagara Town Panchayat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X