ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ನಿಯಮ ಪಾಲಿಸದ ಹೋಟೆಲ್, ರೆಸಾರ್ಟ್, ಹೋಂಸ್ಟೇಗಳ ವಿರುದ್ಧ ಕ್ರಮ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಅಕ್ಟೋಬರ್ 15: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಹೋಟೆಲ್, ರೆಸಾರ್ಟ್ ಮತ್ತು ಹೋಂಸ್ಟೇಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಈ ಕುರಿತು ಬುಧವಾರ ಆದೇಶವೊಂದನ್ನು ಹೊರಡಿಸಿರುವ ಅವರು, ಜಿಲ್ಲೆಯ ಹೋಟೆಲ್, ರೆಸಾರ್ಟ್ ಮತ್ತು ಹೋಂಸ್ಟೇಗಳ ಪ್ರವೇಶ ದ್ವಾರದಲ್ಲಿ ಸ್ಟ್ಯಾಂಡ್ ಸ್ಯಾನಿಟೈಸರ್, ಕೊಠಡಿ, ಶೌಚಾಲಯ, ರೆಸ್ಟೋರೆಂಟ್ ಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಬಳಸಲಾಗುತ್ತಿದೆಯೇ, ಕಡ್ಡಾಯವಾಗಿ ಮಾಸ್ಕ್ ಅಥವಾ ಮುಖಗವಸು ಬಳಸಲಾಗುತ್ತಿದೆಯೇ, ಸಾಕಷ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದ್ದಾರೆ.

ಸಾಧ್ಯವಾದಷ್ಟು ವಿವಿಧ ಮಾದರಿಯ ಇ-ಪೇಮೆಂಟ್ ಮೂಲಕ ವ್ಯವಹಾರ ನಡೆಸಲಾಗುತ್ತಿದೆಯೇ, ಥರ್ಮಲ್ ಟೆಸ್ಟ್ ಮಾಡಲಾಗುತ್ತಿದೆಯೇ, ಕೋವಿಡ್-19 ಸಂಬಂಧ ಪ್ರವಾಸಿಗರಿಗೆ, ಅತಿಥಿಗಳಿಗೆ ಸೂಕ್ತ ನಿರ್ದೇಶನ ನೀಡುವ ಫಲಕ ಅಳವಡಿಸಲಾಗಿದೆಯೇ, ವಾಸ್ತವ್ಯ ಹೂಡಿರುವ ಪ್ರವಾಸಿಗರು, ಅತಿಥಿಗಳ ಪ್ರಯಾಣ ಹಿನ್ನೆಲೆಯ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಲಾಗಿದೆಯೇ ಮತ್ತು ಅವರು ಗುರುತಿನ ಚೀಟಿಗಳನ್ನು ಪಡೆಯಲಾಗುತ್ತಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆಯುವಂತೆ ತಿಳಿಸಿದ್ದಾರೆ.

Action Against Hotels, Resorts, Homestays If Does Not Follow Covid Rule: Kodagu DC

ಸಿಬ್ಬಂದಿಗಳು ಕೋವಿಡ್ ಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳಾದ ಕೈಗವಸು, ಮುಖಗವಸು ಮತ್ತು ಶುಚಿತ್ವ ಕಾಪಾಡಿಕೊಳ್ಳಲಾಗಿದೆಯೇ, ಅತಿಥಿಗಳು, ಪ್ರವಾಸಿಗರ ಲಗೇಜುಗಳನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆಯೇ, ಒಂದು ಕೊಠಡಿಯಲ್ಲಿ ಇಬ್ಬರು ಅತಿಥಿಗಳಿಗೆ ಮಾತ್ರ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಲಾಗುತ್ತಿದೆಯೇ ಎಂಬ ಬಗ್ಗೆಯೂ ಮಾಹಿತಿ ಕಲೆಹಾಕುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ನಾಲ್ಕು ಮಂದಿಗಿಂತ ಹೆಚ್ಚು ಸಾರ್ವಜನಿಕರು ಪ್ರವಾಸಿ ಸ್ಥಳಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಇತರೆಡೆಗಳಲ್ಲಿ ಒಂದೆಡೆ ಸೇರದಿರುವ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ಹೊಟೇಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಒಂದು ಟೇಬಲ್ ನಿಂದ ಮತ್ತೊಂದು ಟೇಬಲ್ ಗೆ ಕನಿಷ್ಟ 6 ಅಡಿ ಅಂತರದ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

Recommended Video

BJP ಅವ್ರು ಕೈ ಗೆ ಬಳೆ ಹಾಕೊಬೇಕು | DK Shivkumar | RR Nagar By Election | Oneindia Kannada

ಈ ಸಂಬಂಧವಾಗಿ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಪೌರಾಯಕ್ತರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು, ಪಟ್ಟಣ ಪಂಚಾಯತ್ ಗಳ ಮುಖ್ಯಾಧಿಕಾರಿಗಳು ಕ್ರಮವಹಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

English summary
District Collector Anees Kanmani Joy has ordered the relevant authorities to take appropriate legal action against the hotel, resort and homestay that do not follow the Covid guidelines in Kodagu district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X