ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲೆಯಲ್ಲಿ ಕೋವಿಡ್ ತಡೆಗೆ ಕೈಗೊಂಡ ಕ್ರಮಗಳು

|
Google Oneindia Kannada News

ಮಡಿಕೇರಿ, ಆಗಸ್ಟ್ 12 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 742ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆಗಳನ್ನು ಜಿಲ್ಲೆಯಲ್ಲಿ ಮಾಡಲಾಗಿದೆ.

ಮುಂದಿನ 15 ದಿನಗಳಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚಾಗಲಿದೆ ಎಂದು ಬೆಂಗಳೂರಿನ ಕೋವಿಡ್ ವಾರ್ ರೂಮ್ ಮಾಹಿತಿ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಸೋಂಕು ಹೆಚ್ಚಾದರೂ ಅವುಗಳನ್ನು ಯಶಸ್ವಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ದೇಶದಲ್ಲಿಯೇ ಆ.7ಕ್ಕೆ ಅತ್ಯಧಿಕ ಮಳೆ ಪ್ರಮಾಣ ದಾಖಲಿಸಿದ ಕೊಡಗುದೇಶದಲ್ಲಿಯೇ ಆ.7ಕ್ಕೆ ಅತ್ಯಧಿಕ ಮಳೆ ಪ್ರಮಾಣ ದಾಖಲಿಸಿದ ಕೊಡಗು

ಕೊಡಗು ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತ ಮಾಹಿತಿಯನ್ನು ನೀಡಿದೆ. ಜಿಲ್ಲೆಯಲ್ಲಿ ಗಂಟಲು/ಮೂಗು ದ್ರವ ಮಾದರಿಗಳ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಕೋವಿಡ್ ಸೋಂಕು ಸಂಬಂಧ ಹೆಚ್ಚಾಗಿ ಕಣ್ಗಾವಲು ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳ; ಸೂಚನೆಗಳು ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳ; ಸೂಚನೆಗಳು

ಮಂಗಳವಾರ ಕೊಡಗು ಜಿಲ್ಲೆಯಲ್ಲಿ 41 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 742ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 11 ಸೋಂಕಿತರು ಮೃತಪಟ್ಟಿದ್ದಾರೆ.

 ಮಳೆಯ ಆರ್ಭಟಕ್ಕೆ ಬೆಚ್ಚಿ ಬಿದ್ದಿದೆ ಕೊಡಗು ಜಿಲ್ಲೆ... ಮಳೆಯ ಆರ್ಭಟಕ್ಕೆ ಬೆಚ್ಚಿ ಬಿದ್ದಿದೆ ಕೊಡಗು ಜಿಲ್ಲೆ...

ಕೊಡಗು ಜಿಲ್ಲೆಯಲ್ಲಿನ ಕ್ರಮಗಳು

ಕೊಡಗು ಜಿಲ್ಲೆಯಲ್ಲಿನ ಕ್ರಮಗಳು

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 250 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಈ ಪೈಕಿ 155 ಹಾಸಿಗೆಗಳಿಗೆ ಕೇಂದ್ರೀಕೃತ ಆಮ್ಲಜನಕ ಪೂರೈಕೆಯ ಸೌಲಭ್ಯವಿರುತ್ತದೆ. 56 ಹಾಸಿಗೆಗಳ ಸಾಮರ್ಥ್ಯದ ಐಸಿಯು ಘಟಕವನ್ನು ಸಜ್ಜುಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಸೋಂಕಿತ ಮಕ್ಕಳ ಆರೈಕೆ

ಸೋಂಕಿತ ಮಕ್ಕಳ ಆರೈಕೆ

ಕೋವಿಡ್ ಸೋಂಕಿತ ರೋಗಿಗಳಿಗೆ ಡಯಾಲಿಸಿಸ್ ನಡೆಸಲು ಐಸಿಯು ಘಟಕದಲ್ಲಿ ಎರಡು ಪ್ರತ್ಯೇಕ ಹಾಸಿಗೆ ಮೀಸಲಿಡಲಾಗಿದೆ. ಅಲ್ಲದೆ 6 ಹಾಸಿಗೆಗಳನ್ನು ಕೋವಿಡ್ ಸೋಂಕಿತ ನವಜಾತ ಶಿಶು ಮತ್ತು ಮಕ್ಕಳ ಆರೈಕೆಗಾಗಿ ಮೀಸಲಿಡಲಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಗಳ ಶಸ್ತ್ರ ಚಿಕಿತ್ಸೆಗಾಗಿ ಪ್ರತ್ಯೇಕ ಕೋವಿಡ್ ಶಸ್ತ್ರಚಿಕಿತ್ಸಾ ಘಟಕವನ್ನು ಸಿದ್ಧಪಡಿಸಲಾಗಿದೆ.

35 ವೆಂಟಿಲೇಟರ್‌ಗಳ ವ್ಯವಸ್ಥೆ

35 ವೆಂಟಿಲೇಟರ್‌ಗಳ ವ್ಯವಸ್ಥೆ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಒಟ್ಟು 35 ವೆಂಟಿಲೇಟರ್‌ಗಳಿವೆ. ಈ ಪೈಕಿ 26 ವೆಂಟಿಲೇಟರ್ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮತ್ತು 2 ವೆಂಟಿಲೇಟರ್ ಕೋವಿಡ್ ಸೋಂಕಿತ ನವಜಾತ ಶಿಶು ಮತ್ತು ಮಕ್ಕಳ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ.

ಕೋವಿಡ್ ಪರೀಕ್ಷೆ ಹೆಚ್ಚಳ

ಕೋವಿಡ್ ಪರೀಕ್ಷೆ ಹೆಚ್ಚಳ

ಕೊಡಗು ಜಿಲ್ಲೆಯಲ್ಲಿಯೇ ಕೋವಿಡ್ ಪರೀಕ್ಷೆ ಲ್ಯಾಬ್ ಇದೆ. ಜಿಲ್ಲೆಯಲ್ಲಿ ಗಂಟಲು/ಮೂಗು ದ್ರವ ಮಾದರಿಗಳ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ. ಜಿಲ್ಲೆಯಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 274.

English summary
742 Total Covid cases reported in Kodagu district. Here are the details about action taken to treat Covid cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X