ವೀಣಾ 'ಕೈ' ಸವರಿದ ರಮೇಶ್ ಕಾಂಗ್ರೆಸ್ ಗೆ ರಾಜೀನಾಮೆ

Subscribe to Oneindia Kannada

ಮಡಿಕೇರಿ, ಆಗಸ್ಟ್ 22: ಕಾಂಗ್ರೆಸ್ ಮೇಲ್ಮನೆ ಸದಸ್ಯೆ ವೀಣಾ ಅಚ್ಚಯ್ಯ ಕೈ ಸವರಿ ವಿವಾದಕ್ಕೀಡಾಗಿದ್ದ ಕಾಂಗ್ರೆಸ್ ನಾಯಕ ಟಿ.ಪಿ. ರಮೇಶ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

After misbehaved with MLC Veena Achaiah, TP Ramesh resigns to Congress

ಕೊಡಗಿನಲ್ಲಿ ಟಿ.ಪಿ.ರಮೇಶ್ 'ಕೈ' ಹಿಡಿಯದ ನಾಯಕರು

ಆಗಸ್ಟ್ 15ರಂದು ಮಡಿಕೇರಿಯಲ್ಲಿ ನಡೆದಿದ್ದ ಸಾರ್ವಜನಿಕ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಡಗು ಉಸ್ತುವಾರಿ ಸಚಿವ ಎಂ.ಆರ್ ಸೀತಾರಂ ಸಮ್ಮುಖದಲ್ಲೇ ವೀಣಾ ಅಚ್ಚಯ್ಯರ ಕೈಯನ್ನು ಟಿಪಿ ರಮೇಶ್ ಸವರಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಟಿಪಿ ರಮೇಶ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ರಮೇಶ್ ವಿರುದ್ಧ ಸ್ವತಃ ಕಾಂಗ್ರೆಸ್ ನಾಯಕರೇ ಗರಂ ಆಗಿದ್ದರು. ಮಡಿಕೇರಿ ಮತ್ತು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಮೇಶ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಯನ್ನೂ ನಡೆಸಿದ್ದರು.

ಇನ್ನು ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ. ಆರ್ ಸೀತಾರಾಂ, ಟಿಪಿ ರಮೇಶ್ ರನ್ನು ಪಕ್ಷದಿಂದ ಸಸ್ಪೆಂಡ್ ಮಾಡಲು ಕೆಪಿಸಿಸಿ ಅಧ್ಯಕ್ಷರಿಗೆ ಶಿಫಾರಸ್ಸು ಮಾಡುವುದಾಗಿ ಹೇಳಿದ್ದರು. ಇದೀಗ ಸ್ವತಃ ಟಿಪಿ ರಮೇಶ್ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರ ಬಂದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
DCC Bank former president and Silk development board president T.P. Ramesh resigned to primary membership of Congress party and Silk board president post after he misbehaved with MLC Veena Achaiah in Independence Day celebration here in Madikeri on August 15.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ